ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತಮ ಆಡಳಿತ – ರವೀಂದ್ರಪ್ಪ

by | 29/03/23 | ರಾಜಕೀಯ

ಹಿರಿಯೂರು : ಜೆಡಿಎಸ್ ಪಕ್ಷ ಬಡವರ ಪರವಾಗಿ ಇರುವ ಪಕ್ಷವಾಗಿದೆ ಈ ಬಾರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಪಕ್ಷದ ಅಭ್ಯರ್ಥಿ ನಿವೃತ್ತ ಮುಖ್ಯ ಇಂಜಿನಿಯರ್ ರವೀಂದ್ರಪ್ಪ ಹೇಳಿದರು.

ನಗರದ ನಂಜಯ್ಯನ ಕೊಟ್ಟಿಗೆ ಸೇರಿದಂತೆ ವಿವಿಧ ಭಾಗಗಳಲ್ಲಿ ಮನೆ ಮನೆಗೆ ತೆರಳಿ ಮತ ಪ್ರಚಾರ ನಡೆಸಿ ಮಾತನಾಡಿದರು. ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತಮ ಆಡಳಿತ ನೀಡುತ್ತದೆ. ಕ್ಷೇತ್ರದಲ್ಲಿ ಮೂರು ಬಾರಿ ಪಕ್ಷಕ್ಕೆ ಶಿಕ್ಷೆ ವಿಧಿಸಿದ್ದಿರಾ, ನಾಲ್ಕನೇ ಬಾರಿಗೆ ನಿಮ್ಮ ಮುಂದೆ ಬಂದಿದ್ದೇವೆ ಅವಕಾಶ ಮಾಡಿ ಕೊಡಿ ಎಂದು ತಿಳಿಸಿದರು.

ನಾನು ಇಲ್ಲಿನ ಸ್ಥಳೀಯ ಅಭ್ಯರ್ಥಿ, ದಿನ ಬೆಳಗಾದರೆ ನಿಮ್ಮ ಕೈಗೆ ಸಿಗುತ್ತೇನೆ. ಚಳ್ಳಕೆರೆ ಹಾಗೂ ಬೆಂಗಳೂರಿಗೆ ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ. ಈ ಕ್ಷೇತ್ರದ ಮಣ್ಣಿನ ಮಗನಿಗೆ ಜನ ಸೇವೆ ಮಾಡಲು ಅವಕಾಶ ನೀಡಿ ಎಂದರು.

ಹಿಂದೆ ಡಿ. ಮಂಜುನಾಥ್ ಅವರನ್ನು ಗೆಲ್ಲಿಸಿದ್ದು ಬಿಟ್ಟರೆ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ. ಮೂರು ಬಾರಿ ಪಕ್ಷವನ್ನು ತಿರಸ್ಕರಿಸಲಾಗಿದೆ. ಈ ಚುನಾವಣೆಯಲ್ಲಿ ಒಂದು ಅವಕಾಶ ನೀಡಿ ಎಂದರು.

ಜೆಡಿಎಸ್ ಪಕ್ಷ ಅಭಿವೃದ್ದಿಯ ಪರವಾಗಿರುವ ಪಕ್ಷವಾಗಿದೆ. ಕುಮಾರಸ್ವಾಮಿ ಅಧಿಕಾರಕ್ಕೆ ಬಂದರೆ ಸಾಲ ಮನ್ನಾ ಮಾಡಲಾಗುತ್ತದೆ. ವಯಸ್ಸದಾವರಿಗೆ ವೃದ್ಧಾಪ್ಯವೇತನ ಹೆಚ್ಚಳ, ರೈತರ ಮಕ್ಕಳನ್ನು ಮದುವೆ ಆದವರಿಗೆ ಎರಡು ಲಕ್ಷ ಹಣವನ್ನು ಖಾತೆಗೆ ನೀಡಲಾಗುವುದು ಇಂತಹ ಹತ್ತು ಹಲವಾರು ಯೋಜನೆಗಳು ಜಾರಿಗೆ ಬರಲಿವೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪಂಚರತ್ನ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ಯೋಜನೆಗಳು ಪಂಚೇಂದ್ರಿಯಗಳು ಇದ್ದಂತೆ. ಈ ಯೋಜನೆಗಳಲ್ಲಿ ರೈತಶಕ್ತಿ ಉದ್ಯೋಗ, ಸ್ತ್ರೀ ಸಬಲೀಕರಣ, ಶಿಕ್ಷಣ, ಆರೋಗ್ಯ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಇಂತಹ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಜೆಜಿ ಹಳ್ಳಿ ಮಂಜುನಾಥ್, ರಾಮಮೂರ್ತಿ, ದಿನೇಶ್ ಸೇರಿದಂತೆ ಇತರರು ಇದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *