ಜೆಡಿಎಸ್ ಪಕ್ಷದಿಂದ ಕ್ಷೇತ್ರದ ಮಹಿಳಾ ಸಂಘದ ಸದಸ್ಯರಿಗೆ ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ

by | 07/03/23 | ರಾಜಕೀಯ

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.ಮಾ.7
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷ ಸೇರ್ಪಡೆ ಪರ್ವ ಜತೆಗೆ ಉಚಿತ ಸೇವೆಗಳ ಭರವಸೆ. ಟಿಕೆಟ್ ಆಕಾಂಕ್ಷಿಗಳಿಂದ ಮತದಾರರನ್ನು ಓಲೈಸುವ ಕಸರತ್ತು ಜೋರಾಗಿ ನಡೆಯುತ್ತಿದೆ. ಜಾಹಿರಾತು
ಹೌದು ಚಳ್ಳಕೆರೆ ಮೀಸಲಾತಿ ವಿಧಾನ ಸಭೆ ಕ್ಷೇತ್ರಕ್ಕೆ ಈಗಾಗಲೆ ಜೆಡಿಎಸ್ ಪಕ್ಷದಿಂದ ಎಂ.ರವೀಶ್ ಕುಮಾರ್ ಮಾಜಿ ಶಾಸಕ ಬಸವರಾಜ್ ಮಂಡಿಮಠ್ ಮಾರ್ಗದರ್ಶನದಲ್ಲಿ ಮಹಿಳಾ ಸಂಘಗಳ ಸದಸ್ಯರಿಗೆ ವಿವಿಧ ಪುಣ್ಯಕ್ಷೇತ್ರಗಳಿಗೆ ಉಚಿತ ಪ್ರವಾಸ‌ದ ಭಾಗ್ಯ ಹಮ್ಮಿಕೊಂಡಿದ್ದಾರೆ. ಮತದಾರರನ್ನು ಸೆಳೆಯಲು ಕಸರತ್ತು ಮಾಡುತ್ತಿದ್ದಾರೆ.
ಆಕಾಂಕ್ಷಿಗಳಂತೂ ಜಿದ್ದಾಜಿದ್ದಿಗೆ ಬಿದ್ದು ಮತದಾರರನ್ನು ಸೆಳೆಯಲು ಜಾತ್ರೆ, ನಾಟಕ ,ಹಬ್ಬ, ಕ್ರೀಡಾ ಕೂಟ ಆಯೋಜನೆಗಳಿಗೆ ಹಣದ ಹೊಳೆ ಹರಿಸುತ್ತಿದ್ದಾರೆ.
ಮಹಿಳೆಯರಿಗೆ ತಿಮ್ಮಪ್ಪ. ಮಂಜುನಾಥ ದರ್ಶನ ಭಾಗ್ಯ.
ಜೆಡಿಎಸ್ ಅಭ್ಯರ್ಥಿ ಎಂ. ರವೀಶ್ ಕುಮಾರ್ ಅವರು ಮಹಿಳಾ ಸಂಘದ ಪದಾಧಿಕಾರಿಗಳಿಗೆ ದೇವರ ಧರ್ಶನ ಭಾಗ್ಯ ಕಲ್ಪಿಸಿದ್ದಾರೆ.
ತಾಲ್ಲೂಕಿನ ನಗರಂಗೆರೆ ಗ್ರಾಪಂ ವ್ಯಾಪ್ತಿಯ ಉಪ್ಪಾರಹಟ್ಟಿ, ದಾಸನಾಯಕನಹಟ್ಟಿ, ಗಾನಪ್ಪನಹಟ್ಟಿ, ಕೆಂಚವೀರನಹಳ್ಳಿ ಮಹಿಳಾ ಸಂಘದ ಪದಾಧಿಕಾರಿಗಳಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ತುರನೂರು ಹೋಬಳಿ ಎಳವರ್ತಿ. ರಂಗವ್ವನಹಳ್ಳಿ ಗ್ರಾಮದ ಮಹಿಳೆಯರಿಗೆ ಶ್ರೀ ಧರ್ಮಸ್ಥಳ ಮಂಜುನಾಥನ ದರ್ಶನ ಭಾಗ್ಯ ಕರುಣಿಸಿದ್ದಾರೆ. ಮಾಜಿ ಶಾಸಕ ಬಸವರಾಜು ಮಂಡಿಮಠ್ ಮಾರ್ಗದರ್ಶನದಲ್ಲಿ ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ದೇವರ ದರ್ಶನಕ್ಕೆ ಹೋಗಲು ಉಚಿತ ಬಸ್‌ಗಳ ವ್ಯವಸ್ಥೆ ಮಾಡಿಕಳಿಸಿದ್ದಾರೆ.
ನಗರದಲ್ಲಿ ಮಾಜಿ ಶಾಸಕ ಬಸವರಾಜು ಮಂಡಿಮಠ್ ಮಿಲ್ ಆವರಣದಲ್ಲಿ ಮಹಿಳಾ ಸಂಘದ ನೂರಾರು ಪದಾಧಿಕಾರಿಗಳಿಗೆ ದೇವರ ದರ್ಶನ ಪ್ರವಾಸಕ್ಕೆ ಮಾಜಿ ಶಾಸಕ ಬಸವರಾಜು ಮಂಡಿಮಠ್, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ಬೀಳ್ಕೋಟ್ಟರು.
<

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page