ಜೈನ್ ವಿವಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

by | 15/02/23 | ಪ್ರತಿಭಟನೆ

ದಾವಣಗೆರೆ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರನ್ನು ಅಪಮಾನಿಸಿದ ಜೈನ್ ವಿವಿಯ ವಿದ್ಯಾರ್ಥಿಗಳು ಮತ್ತು ರಾಷ್ಟ್ರೀಯ ದಲಿತ ಸೇನೆ ರಾಷ್ಟ್ರೀಯ ಅಧ್ಯಕ್ಷ ಹಮಾರಾ ಪ್ರಸಾದ್ ರನ್ನ ದೇಶದ್ರೋಹಿಗಳೆಂದು ಘೋಷಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಾಮಾಜಿಕ ಸಂಘರ್ಷ ಸಮಿತಿ ಜಿಲ್ಲಾ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ‌ ನಡೆಸಿದರು.

ಜಗತ್ತಿನ ಶ್ರೇಷ್ಠ, ಅತ್ಯುನ್ನತ ಮಟ್ಟದ ಶಿಕ್ಷಣ ಸಂಸ್ಥೆಗಳು ಮತ್ತು ವಿವಿಗಳು ಅಂಬೇಡ್ಕರ್ ಅವರನ್ನು ಸರ್ವ ಶ್ರೇಷ್ಠ ಜಾಗತಿಕ ಜ್ಞಾನಿಯೆಂದು ಪರಿಗಣಿಸಿದೆ. ಅದರೆ ಜ್ಞಾನದ ಕೇಂದ್ರವಾಗಬೇಕಾಗಿದ್ದ ಜೈನ್ ವಿವಿಯು ಜಾತಿಯ ಕೇಂದ್ರವಾಗಿದೆ. ಅಂಬೇಡ್ಕರ್ ಗೆ ಅಪಮಾನ ಮಾಡಿದ ಜೈನ್ ವಿವಿ ಪರವಾನಗಿ ರದ್ದು ಮಾಡಬೇಕು. ಜೈನ್‌ ವಿಶ್ವವಿದ್ಯಾಲಯ ಮತ್ತು ಅದರ ಸಂಸ್ಥೆಯ ಅಡಿಯಲ್ಲಿರುವ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಶಾಲಾ ಕಾಲೇಜುಗಳನ್ನು ಸರ್ಕಾರವೇ ವಶಪಡಿಸಿಕೊಳ್ಳುವ ಮತ್ತು ಜೈನ್ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರನ್ನು ದೇಶದ್ರೋಹಿಗಳೆಂದು ಪರಿಗಣಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಅಂಬೇಡ್ಕರ್ ಅವರನ್ನು ಕೊಲ್ಲುತ್ತಿದೆ ಎಂದು ಘೋಷಿಸಿರುವ ಹರಾಮಾ ಪ್ರಸಾದ್ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಗಾಂಧಿನಗರ ತಿಪ್ಪೇರುದ್ರಪ್ಪ, ಜಿ.ಸಿ ಪರಶುರಾಮ್, ಬಿ.ಎನ್ ನಾಗೇಶ್, ಕೆ.ರುದ್ರಪ್ಪ ಮತ್ತಿತರರು ಪಾಲ್ಗೊಂಡಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page