ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

by | 08/11/22 | ಆರ್ಥಿಕ, ಕರ್ನಾಟಕ, ಸುದ್ದಿ

ಕೊಪ್ಪಳ, ನವೆಂಬರ್ 08 (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2022-23ನೇ ಸಾಲಿಗೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ, ಮೈಕ್ರೊ ಕ್ರೆಡೊಟ್ ಪ್ರೇರಣಾ ಯೋಜನೆಯಡಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ದ್ವಿ-ಚಕ್ರ-ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ ಹಾಗೂ ಮೈಕ್ರೊ ಕ್ರೆಡಿಟ್ ಪ್ರೇರಣಾ ಯೋಜನೆ (ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಸೌಲಭ್ಯ ಪಡೆಯಲು ಅರ್ಜಿದಾರರ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ರೂ. 1,50,000 ಮತ್ತು ನಗರ ಪ್ರದೇಶದಲ್ಲಿ ರೂ. 3,00,000 ಗಳ ಮಿತಿಯಲ್ಲಿರಬೇಕು. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ಅರ್ಜಿದಾರರು ಕನಿಷ್ಠ 21 ವರ್ಷಗಳಿಂದ ಗರಿಷ್ಠ 50 ವರ್ಷದೊಳಗಿರಬೇಕು. ಮೈಕ್ರೊ ಕ್ರೆಡಿಟ್ (ಪ್ರೇರಣಾ) ಯೋಜನೆಯಡಿ ಅರ್ಜಿದಾರರು ಕನಿಷ್ಠ 21 ವರ್ಷಗಳಿಂದ ಗರಿಷ್ಠ 60 ವರ್ಷದೊಳಗಿರಬೇಕು.
ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು ಮತ್ತು ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಉದ್ಯಮ ಶೀಲತಾ ಅಭಿವೃದ್ಧಿ ಯೋಜುನೆಯಡಿ ದ್ವಿ-ಚಕ್ರ/ ತ್ರಿ-ಚಕ್ರ ಸಾಗಾಣಿಕೆ ವಾಹನ ಉದ್ದೇಶಗಳಿಗೆ ಘಟಕ ವೆಚ್ಚದಲ್ಲಿ ರೂ. 50,000 ಗಳ ಸಹಾಯಧನ ಹಾಗೂ ಉಳಿದ ಮೊತ್ತ ಬ್ಯಾಂಕ್ ಸಾಲವನ್ನಾಗಿ ಅರ್ಜಿದಾರರು ಸೇವಾ ವ್ಯಾಪ್ತಿಯ ಬ್ಯಾಂಕುಗಳಿಂದ ಮಂಜೂರಾತಿ ಪಡೆಯುವ ಷರತ್ತಿಗೆ ಒಳಪಟ್ಟು ಸಹಾಯಧನವನ್ನು ಮಂಜೂರು ಮಾಡಲಾಗುತ್ತದೆ. ವಾಹನಗಳ ಸೌಲಭ್ಯ ಪಡೆಯಲು ಫಲಾಪೇಕ್ಷಿಗಳು ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕು.
ಮೈಕ್ರೊ ಕ್ರೆಡಿಟ್ ಪ್ರೇರಣಾ ಯೋಜನೆಯಡಿ ಕನಿಷ್ಟ 10 ಮಹಿಳೆಯರು ಸ್ವ- ಸಹಾಯ ಗುಂಪಿನಲ್ಲಿ ಸದಸ್ಯರಿರಬೇಕು. ಸಂಘದ ಸದಸ್ಯರು ಬಿ.ಪಿ.ಎಲ್ ಪಡಿತರ ಚೀಟಿ ಮತ್ತು ಆಧಾರ ಕಾರ್ಡ್ ಹೊಂದಿರಬೇಕು. ಸ್ವ-ಸಹಾಯ ಸಂಘಗಳು ಸಕ್ಷಮ ಪ್ರಧಿಕಾರಗಳಿಂದ ನೋಂದಣಿಯಾಗಿರಬೇಕು ಹಾಗೂ ಸಂಘದ ಹೆಸರಿನಲ್ಲಿ ಬ್ಯಾಂಕಿನಲ್ಲಿ ಉಳಿತಾಯ ಖಾತೆ ಹೊಂದಿರಬೇಕು. ಸಂಘದಲ್ಲಿ ಒಬ್ಬ ಸದಸ್ಯರಿಗೆ ರೂ. 25,000 ರಂತೆ (ರೂ. 15000 ಸಹಾಯಧಮ ಹಾಗೂ 10,000 ಸಾಲ) ಒಟ್ಟು ರೂ. 2,50,000 ಗಳನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https:karnataka.gov.in ಅಥವಾ ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿ, ನಿಗಮದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳುವಂತೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ 2ನೇ ಮಹಡಿ ಜಿಲ್ಲಾ ಆಡಳಿತ ಭವನ ರೂಂ ನಂಬರ 102 ಕೊಪ್ಪಳ, ಈ ವಿಳಾಸಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
=====

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *