ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಸಚಿವ ಡಿ.ಸುಧಾಕರ್ ಸಾಮಾಜಿಕ ಕಳಕಳಿ ಹರಿಕಾರ ಅರಸು

by | 20/08/23 | ಸಾಂಸ್ಕೃತಿಕ


ಚಿತ್ರದುರ್ಗ ಆ.20:
ರಾಜ್ಯಕಂಡ ಅಪ್ರತಿಮ ಧೀಮಂತ ನಾಯಕ ಡಿ.ದೇವರಾಜು ಅರಸು ಅವರು ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ದೂರದೃಷ್ಠಿಯಿಂದ ಕೆಲಸ ಮಾಡಿದ್ದಾರೆ. ಸಾಮಾಜಿಕ ಕಳಕಳಿಯ ಹರಿಕಾರ ಅರಸು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಡಿ.ದೇವರಾಜು ಅರಸು ಅವರು ಒಂದು ಪುಟ್ಟ ಹಳ್ಳಿಯಲ್ಲಿ ಜನಿಸಿದರೂ ಅವರಿಗಿರುವ ಸಾಮಾಜಿಕ ಕಳಕಳಿ ಆಗಾಧವಾದುದು. 1972 ರಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಆಗುವ ಮೂಲಕ ಅವರ ದೂರದೃಷ್ಠಿದಿಂದ ನಾವುಗಳು ಸಮಾಜದಲ್ಲಿ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿದ್ದೇವೆ. ಭೂಸುಧಾರಣೆ ಕಾಯ್ದೆ, ಹಾವನೂರು ವರದಿ ಸೇರಿದಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ರೂಪಿಸಿದ ಅನೇಕ ಕ್ರಾಂತಿಕಾರಕ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದಾರೆ. ಅವರ ಸಮಾಜಮುಖಿ ಕಾರ್ಯಗಳು, ಪ್ರಗತಿಪರ ಯೋಜನೆಗಳು ಅವಿಸ್ಮರಣೀಯ ಎಂದರು.
ಅರಸು ಅವರು ಬಡಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿನಿಲಯಗಳ ಪರಿಕಲ್ಪನೆಯನ್ನು ರಾಜ್ಯಕ್ಕೆ ಕೊಟ್ಟಿದ್ದಾರೆ. ಸಮಾಜಕ್ಕೆ ಅವರ ಕೊಡುಗೆ ಅಪಾರ. ಇಂತಹ ಆದರ್ಶ ವ್ಯಕ್ತಿಗಳು ನಮಗೆ ಹಾಗೂ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ಎಲ್ಲ ವರ್ಗಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಅನೇಕ ಕೊಡುಗೆಗಳನ್ನು ನೀಡಿದ್ದಾರೆ ಎಂದು ಸ್ಮರಿಸಿದರು.
ಅರಸು ಅವರು ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ಮರು ನಾಮಕರಣ ಮಾಡಿ ಕರ್ನಾಟಕದ ಏಕೀಕರಣಕ್ಕೆ ಮಹತ್ವ ನೀಡಿ ರಾಜ್ಯವನ್ನು ಮುನ್ನೆಡೆಸಿದ ಧೀಮಂತ ವ್ಯಕ್ತಿ. ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧು ಡಿ.ದೇವರಾಜು ಅರಸು ಜನ್ಮ ದಿನಾಚರಣೆಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇಂದಿನ ಯುವ ಜನತೆಯು ದೇವರಾಜ ಅರಸು ಅವರ ಆದರ್ಶ, ತತ್ವಗಳನ್ನು, ಸಾಮಾಜಿಕ ನ್ಯಾಯದ ಬದ್ಧತೆಯನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಲೇಖಕರು ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಎಚ್.ಆನಂದ ಕುಮಾರ್ ಅವರು ಡಿ.ದೇವರಾಜ ಅರಸುರವರ ತತ್ವ ಮತ್ತು ಚಿಂತನೆಗಳ ಬಗ್ಗೆ ಮಾತನಾಡಿ, ದೇವರಾಜ ಅರಸು ಅವರನ್ನೂ ಸದಾ ಸ್ಮರಿಸಬೇಕು. ಭಾರತದ ನೆಲದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಗೆ ಕಟ್ಟಕಡೆಯ ಮನುಷ್ಯನಿಗಾಗಿ ಕೆಲಸ ಮಾಡಿದರೂ ಹಾಗೆಯೇ ರಾಜ್ಯಕ್ಕಾಗಿ ಅರಸು ಅವರು ಕೆಲಸ ಮಾಡಿರುವುದು ದೊಡ್ಡ ಸಂಗತಿ ಎಂದು ಹೇಳಿದರು.
ರಾಜ್ಯದ ಇತಿಹಾಸದಲ್ಲಿ ಅರಸು ಯುಗ “ಸುವರ್ಣಯುಗ” ಎಂದು ಇತಿಹಾಸದಲ್ಲಿ ದಾಖಲಾಗಿದೆ. 1972ರಿಂದ 1980 ಕರ್ನಾಟಕದ ಆಡಳಿತಾತ್ಮಕವಾಗಿ ಸುವರ್ಣಯುಗ. ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನ ಹಾಗೂ ಸಂವಿಧಾನದ ಆಶಯಗಳನ್ನು ಹಿಂದುಳಿದ ವರ್ಗಗಳಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ ಸ್ಪರ್ಶ ಮಾಡಿದ ಪ್ರಪ್ರಥಮ ಮುಖ್ಯಮಂತ್ರಿ ದೇವರಾಜ ಅರಸು. ಡಾ.ಬಿ.ಆರ್.ಅಂಬೇಡ್ಕರ್, ನಾಲ್ವಡಿ ಕೃಷ್ಣರಾಜ ಒಡೆಯರ್, ದೇವರಾಜ ಅರಸು ಅವರು ನಮ್ಮೆಲ್ಲರಿಗೂ ಪ್ರಾತಃಸ್ಮರಣೀಯರಾಗಿದ್ದಾರೆ ಎಂದು ಹೇಳಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಹಿಂದುಳಿದ ವರ್ಗದವರಿಗೆ ಶಿಕ್ಷಣಕ್ಕೆ ಒತ್ತು ಕೊಟ್ಟು, ಹಾಸ್ಟಲ್, ವಸತಿ ಗೃಹಗಳು ಕೊಡಬೇಕು ಎಂದು ಸಾಮಾಜಿಕ ಕ್ರಾಂತಿಗೆ ಬದಲಾವಣೆ ತರಲಾಯಿತು. ಎಲ್ಲರಿಗೂ ಸಮಾನ ಅವಕಾಶ ನೀಡುವ ಉದ್ದೇಶ ಡಿ.ದೇವರಾಜ ಅರಸು ಅವರದಾಗಿತ್ತು. ಎಲ್ಲರ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದರು. ಅವರಂತೆ ನಾವು ಉತ್ತಮವಾದ ಶಿಕ್ಷಣ ಪಡೆದು ಸಾಮಾಜಕ್ಕೆ ಕೊಡುಗೆ ನೀಡಿದರೆ ನಾವು ಕೂಡ ಅವರಂತೆ ದೊಡ್ಡ ನಾಯಕರಾಗಿ ಬೆಳೆಯುತ್ತೇವೆ. ಡಿ.ದೇವರಾಜ ಅರಸು ಅವರ ತತ್ವ ಮತ್ತು ಆದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಡಿ.ದೇವರಾಜ ಅರಸು ಅವರು ಸಮಾಜದಲ್ಲಿ ಅಷ್ಟೊಂದು ಕ್ರಾಂತಿ ಮಾಡಿದ್ದಾರೆ ಎಂದರೇ ಅದು ಅವರ ಸ್ವಾರ್ಥಕ್ಕಾಗಿ ಅಲ್ಲ. ನಮಗಾಗಿ ಮಾಡಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಹಾಗೂ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ಆರ್.ಸುಬ್ರಾನಾಯಕ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮೀಸೆ ಮಹಲಿಂಗಪ್ಪ, ಯುವ ಮುಖಂಡ ಪ್ರತಾಪ್ ಜೋಗಿ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಇದ್ದರು.
ಭವ್ಯ ಮೆರವಣಿಗೆ:
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಚಿತ್ರದುರ್ಗ ನಗರದ ನೀಲಕಂಠೇಶ್ವರ ದೇಗುಲದ ಬಳಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಪುಷ್ಪನಮನ ಸಮರ್ಪಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ನಗರದ ಗಾಂಧಿವೃತ್ತ, ಎಸ್‍ಬಿಐ ವೃತ್ತ, ಪ್ರವಾಸಿ ಮಂದಿರದ ಮಾರ್ಗವಾಗಿ ಅಂಬೇಡ್ಕರ್ ವೃತ್ತ ಹಾಗೂ ಮದಕರಿ ನಾಯಕ ವೃತ್ತದ ಮೂಲಕ ಮೆರವಣಿಗೆಯು ತರಾಸು ರಂಗಮಂದಿರ ತಲುಪಿತು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ಆರ್.ಸುಬ್ರಾನಯಕ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page