ಡೆಂಗೀ ಲಾರ್ವಾ ಸಮೀಕ್ಷೆ ಕಾರ್ಯಕ್ಕೆ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಚಾಲನೆ ಕೀಟಜನ್ಯ ರೋಗಗಳಿಗೆ ಕಡಿವಾಣ ಹಾಕಿ

by | 05/07/24 | ಆರೋಗ್ಯ

ಚಿತ್ರದುರ್ಗ ಜುಲೈ.05: ಸೊಳ್ಳೆಗಳ ಉತ್ಪತ್ತಿ, ಸೊಳ್ಳೆ ಕಡಿತದಿಂದ ಆಗುವ ದುಷ್ಪಾರಿಣಾಮ, ಸೊಳ್ಳೆ ನಿಯಂತ್ರಣ ಕುರಿತು ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಶಿಕ್ಷಣ ಮುಖಾಂತರ ಮಾಹಿತಿ ನೀಡಿ, ಕೀಟಜನ್ಯ ರೋಗಗಳಿಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.
ಇಲ್ಲಿನ ಜಿಲ್ಲಾ ಕ್ರೀಡಾಂಗಣ ಸಮೀಪದ ಬುದ್ಧ ನಗರದ ನಗರ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ ವತಿಯಿಂದ ವಾರಕ್ಕೆ ಒಂದು ದಿನ ಪ್ರತಿ ಶುಕ್ರವಾರ “ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನ” ಕಾರ್ಯಕ್ರಮದ ಭಾಗವಾಗಿ ನಡೆದ ಜಾಥಾ ಕಾರ್ಯಕ್ರಮ ಹಾಗೂ ವಿಶೇಷ ಲಾರ್ವಾ ಸರ್ವೇ ಕಾರ್ಯಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಾಗ ಈ ವರ್ಷ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ರೋಗ ಬಂದ ಮೇಲೆ ಪಶ್ಚಾತ್ತಾಪ ಪಡುವುದಕ್ಕಿಂತ ರೋಗ ಬಾರದೆ ಇರುವ ಹಾಗೆ ನೋಡಿಕೊಳ್ಳುವುದು ಸರ್ವರ ಜವಾಬ್ದಾರಿಯಾಗಿದೆ. ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂದಿ ವರ್ಗದವರು ಸಾರ್ವಜನಿಕ ವಲಯದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪ್ರತಿ ಶುಕ್ರವಾರ ಗುಣಾತ್ಮಕವಾದ ಸಮೀಕ್ಷೆ ಮಾಡಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಿ ರೋಗ ಹರಡದಂತೆ ಶ್ರಮಿಸಬೇಕು ಎಂದು ಹೇಳಿದರು.
ಆರೋಗ್ಯ ಇಲಾಖೆ ವತಿಯಿಂದ ವಾರಕ್ಕೆ ಒಂದು ದಿನ ಪ್ರತಿ ಶುಕ್ರವಾರ “ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನ” ಕಾರ್ಯಕ್ರಮದ ಭಾಗವಾಗಿ ನಡೆದ ಲಾರ್ವಾ ಸರ್ವೇ ಕಾರ್ಯ ನಡೆಯುತ್ತಿದ್ದು, ಮಳೆಗಾಲ ಪ್ರಾರಂಭದ ಹಿನ್ನಲೆಯಲ್ಲಿ ಪ್ರತಿ ಶುಕ್ರವಾರದ ಜತೆಗೆ ಪ್ರತಿ ಮಂಗಳವಾರವೂ ಲಾರ್ವಾ ಸರ್ವೇ ಕಾರ್ಯ ಮಾಡಬೇಕು. ಡೆಂಗೀ ನಿಯಂತ್ರಣಕ್ಕೆ ನಾವೆಲ್ಲರೂ ತಂಡವಾಗಿ ಕಾರ್ಯನಿರ್ವಹಿಸೋಣ ಎಂದು ಹೇಳಿದರು.
ಮನೆ-ಮನೆ ಭೇಟಿ ನೀಡಿ ಲಾರ್ವಾ ಸಮೀಕ್ಷೆ: ಚಿತ್ರದುರ್ಗ ನಗರದ ಬುದ್ಧ ನಗರದ ಪ್ರದೇಶದ ಕೆಲವು ಮನೆಗಳಿಗೆ ಖುದ್ದು ಭೇಟಿ ನೀಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೊಳ್ಳೆ ಉತ್ಪತ್ತಿ ತಾಣಗಳ ಪರಿಶೀಲನೆ ಮಾಡಿದರು.
ಇದೇ ವೇಳೆ ಕೆಲವು ಮನೆಗಳಲ್ಲಿ ಸೊಳ್ಳೆಯ ಲಾರ್ವಾಗಳು ಕಂಡುಬಂದಿದ್ದು, ನೀರು ಸಂಗ್ರಹಿಸುವಾಗ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ ಅವರು, ಗುಣಮಟ್ಟದ ಲಾರ್ವಾ ಸಮೀಕ್ಷೆ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲವಾದ್ದರಿಂದ ಮನೆಯ ಹೊರಗಡೆ ತೆಂಗಿನ ಚಿಪ್ಪು, ನಿರುಪಯುಕ್ತ ಟೈಯರ್, ಕೋಳಿ ಮೊಟ್ಟೆ ಚಿಪ್ಪು, ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿ ಆಗುತ್ತಿರುವುದರಿಂದ ಸಾರ್ವಜನಿಕರು ಇದರ ಬಗ್ಗೆ ಗಮನಹರಿಸಿ, ಸೊಳ್ಳೆ ಉತ್ಪತ್ತಿ ಆಗದಂತೆ ನೋಡಿಕೊಳ್ಳುವುದು. ಸೊಳ್ಳೆ ಕಚ್ಚಿಸಿಕೊಳ್ಳದಂತೆ ಜಾಗೃತರಾಗುವುದು, ಮಲಗುವಾಗ ಸೊಳ್ಳೆ ಪರದೆ ಬಳಸುವುದು ಬಹುಮುಖ್ಯ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣು ಪ್ರಸಾದ್ ಮಾತನಾಡಿ, ಈ ವರ್ಷ 2024ರ ಜನವರಿ ಮಾಹೆಯಿಂದ ಇಲ್ಲಿಯವರೆಗೆ 265 ಡೆಂಗ್ಯೂ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿದ್ದು ಕಳವಳಕಾರಿ ಸಂಗತಿಯಾಗಿದೆ. ಪ್ರತಿ ಶುಕ್ರವಾರ ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಸಾರ್ವಜನಿಕ ವಲಯದಲ್ಲಿ ಆರೋಗ್ಯ ಶಿಕ್ಷಣ ನೀಡುವುದರ ಮುಖಾಂತರ ಮನೆ ಭೇಟಿ ಮಾಡಿ ಕೀಟಜನ್ಯ ರೋಗಗಳು ಹೆಚ್ಚಾಗದಂತೆ ನಿಗಾ ವಹಿಸುತ್ತಿದ್ದು, ಇನ್ನೂ ಗುಣಾತ್ಮಕವಾಗಿ ಲಾರ್ವಾ ಸಮೀಕ್ಷೆಯಲ್ಲಿ ತೊಡಗಿಸಿಕೊಂಡು ಸರ್ಕಾರದ ಮಾರ್ಗಸೂಚಿಯಂತೆ ಪ್ರತಿ ಶುಕ್ರವಾರ ಈಡೀಸ್ ಸೊಳ್ಳೆ ನಿರ್ಮೂಲನ ದಿನವನ್ನಾಗಿ ಆಚರಿಸುತ್ತಾ ಲಾರ್ವಾ ಸರ್ವೆ ಮಾಡುವುದರ ಮುಖಾಂತರ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಚಟುವಟಿಕೆಗಳಲ್ಲಿ ಪಾಲ್ಗೊಂಡು, ಕೀಟಜನ್ಯ ರೋಗಗಳಿಂದ ಸಾವು ನೋವು ಸಂಭವಿಸದಂತೆ ಮುಂಜಾಗ್ರತೆ ವಹಿಸಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗದಂತೆ ಕಡಿವಾಣ ಹಾಕಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎನ್.ಕಾಶೀ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ್, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅಭಿನವ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಸುಧಾ, ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಖಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ತಾ.ಪಂ. ಇಒ ಹನುಮಂತಪ್ಪ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜೆ ಆರ್ ಗೌರಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ. ಮೂಗಪ್ಪ. ಬಿ ಜಾನಕಿ. ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಸುರೇಶ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಗುರುಮೂರ್ತಿ. ಮಲ್ಲಿಕಾರ್ಜುನ್. ಶ್ರೀಧರ್. ನಾಗರಾಜ್ ಆರೋಗ್ಯ ನಿರೀಕ್ಷಣಾಧಿಕಾರಿಗಳ ತಂಡದ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಮತ್ತಿತರರು ಹಾಜರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page