ಡೆಂಗ್ಯೂ ಬಂದ ನಂತರ ಒದ್ದಾಡುವ ಬದಲು, ರೋಗವೇ ಬಾರದಹಾಗೆ ಮುನ್ನೆಚ್ಚರಿಕೆ ವಹಿಸಿ ತಾಪಂ ಇಒ ಶಶಿಧರ್ ಖಡಕ್ ಸೂಚನೆ.

by | 08/07/24 | ಆರೋಗ್ಯ


ಚಳ್ಳಕೆರೆ ಜನಧ್ವನಿ ವಾರ್ತೆ ಜು.8 ಗ್ರಾಮೀಣ ಭಾಗದಲ್ಲಿ ಸಾಂಕ್ರಮಿಕ ರೋಗಗಳು ಹರಡಂತೆ ಕುಡಿಯುವ ನೀರಿನ ಮೂಲಗಳ, ಚರಂಡಿಗಳ ಸ್ವಚ್ಚತೆ ಕಾಪಾಡುವಂತೆ ತಾಪಂ ಇಒ ಶಶಿಧರ್ ತಾಕೀತು ಮಾಡಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪಿಡಿಒ, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ಕರವಸೂಲಿಗಾರರ ಆಯೋಜಿಸಿದ್ದ ಡೆಂಗ್ಯೂ ನಿಯಂತ್ರಣ ಪೂರ್ವ ಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಈಗಾಗಲೆ ರಾಜ್ಯದ ಹವಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು ಡೆಂಗ್ಯೂ ಜ್ವರಕ್ಕೆ ಮೃತಪಟ್ಟ ಪ್ರಕರಣಗಳು ವರದಿಯಾಗಿರುವುದರಿಂದ ತಾಲೂಕಿನಲ್ಲಿ ಡೆಂಗ್ಯೂ ಜ್ವರ ಬರದಂತೆ ತಡೆಯಲು ಆರೋಗ್ಯ ಇಲಾಖೆ ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿಗಳು ಅಗತ್ಯ ಮುಂಜಾಗೃತೆ ವಹಿಸಿ ಬೇಕು.
ಆಶಾ ಕಾರ್ಯಕರ್ತರ ನೆರವಿನಿಂದ ಲಾರ್ವ ಸಮೀಕ್ಷೆ ಮಾಡುವುದೂ ಸೇರಿದಂತೆ ನೀರಿನ ಟ್ಯಾಂಕ್, ತೊಟ್ಟಿ, ಚರಂಡಿಗಳನ್ನು ಸ್ವಚ್ಛಗೊಳಿಸುವ ಜೊತೆಗೆ ಸ್ವಚ್ಚ ವಾಹಿನಿಯ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಕಾಯಿಲೆ ಬಂದ ನಂತರ ಒದ್ದಾಡುವ ಬದಲು, ರೋಗವೇ ಬಾರದಹಾಗೆ ಮುನ್ನೆಚ್ಚರಿಕೆ ವಹಿಸಿ ಎಂದು ಖಡಕ್ ಸೂಚನೆ ನೀಡಿದರು.
ಸಾರ್ವಜನಿಕರು ಅನೈರ್ಮಲ್ಯ ಕುರಿತು ಬೇರೆಯವರನ್ನು ದೂರುವ ಮೊದಲು, ತಮ್ಮ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರ ನೈರ್ಮಲ್ಯ ಕಾಪಾಡಲು ಮುಂದಾಗುವ ಮೂಲಕ ಸೊಳ್ಳೆಗಳ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಇದೇ ಸಂದರ್ಭದಲ್ಲಿ ಇಒ ಶಶಿಧರ್ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.
ತಾಪಂ ಸಹಾಯಕ ನಿರ್ದೇಶಕ ಸಂಪತ್ ಮಾತನಾಡಿ ಮನೆಗಳ ಸುತ್ತಮುತ್ತ ಟೈರ್ ಗಳು, ತೆಂಗಿನ ಚಿಪ್ಪುಗಳು, ಹಾಳಾದ ಮಡಕೆಗಳು, ಒಡೆದ ಕೊಡ-ಬಕೆಟ್ ಗಳು ಇದ್ದಲ್ಲಿ ನೀರು ನಿಂತು ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗುವುದರಿಂದ ಅಂತಹ ಸಂದರ್ಭಗಳನ್ನು ತಪ್ಪಿಸಬೇಕು.
ಡೆಂಘೀ ಜ್ವರ ಬಂದಾಗ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಆರೋಗ್ಯವಂತರು ಚೇತರಿಸಿಕೊಳ್ಳುತ್ತಾರೆ, ವಯಸ್ಸಾದವರು, ಮಕ್ಕಳು ಮೃತ್ಯುವಿಗೀಡಾಗುವ ಸಂಭವವೂ ಇರುತ್ತದೆ. ನಿರ್ದಿಷ್ಟ ಔಷಧಿಯಿಲ್ಲದ ಕಾರಣ ಮುನ್ನೆಚ್ಚರಿಕೆಯೇ ಪರಿಣಾಮಕಾರಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕ ಸಂತೋಷ್ ಹಾಗೂ ಪಿಡಿಒ, ಕಾರ್ಯದರ್ಶಿಗಳು ಇದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page