ತಂತ್ರಜ್ಞಾನ ಮತ್ತು ಆಧುನಿಕತೆಯ ಭರಾಟೆಯಲ್ಲಿ ಮನುಷ್ಯರ ವ್ಯವಧಾನ ಕಡಿಮೆಯಾಗುತ್ತಿದ್ದು,ಓದುಗರ ಸಂಖ್ಯೆ ಕ್ಷೀಣಿಸುತ್ತದೆ ಜಿಲ್ಲಾಕ.ಸಾ.ಪ.ಅಧ್ಯಕ್ಷ ಶಿವಸ್ವಾಮಿ

by | 22/06/24 | ಸುದ್ದಿ


ಹಿರಿಯೂರು :
ತಂತ್ರಜ್ಞಾನ ಮತ್ತು ಆಧುನಿಕತೆಯ ಭರಾಟೆಯಲ್ಲಿ ಮನುಷ್ಯರ ವ್ಯವಧಾನ ಕಡಿಮೆಯಾಗುತ್ತಿದ್ದು, ದಿನೇ ದಿನೇ ಓದುಗರ ಸಂಖ್ಯೆ ಕಡಿಮೆ ಆಗುತ್ತಿರುವ ಇಂಥಹ ಸನ್ನಿವೇಶದಲ್ಲಿ ಒಂದು ಕಾದಂಬರಿಯನ್ನು ಬರೆದು ಅದನ್ನು ಹೊರತರುವುದು ದುಸ್ಸಾಹಸವೆಂದೇ ಹೇಳಬೇಕಾಗುತ್ತದೆ ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶಿವಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಎಂಇಎಸ್ ಶಾಲೆಯಲ್ಲಿ ತಾಲ್ಲೂಕು ಕನ್ನಡಸಾಹಿತ್ಯ ಪರಿಷತ್ತು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿ ಇವರ ಸಹಯೋಗದಲ್ಲಿ ಕಾದಂಬರಿಕಾರ ಡಿ.ಸಿ.ಪಾಣಿ ಅವರ ‘ಪಾವನಿ’ ಕಾದಂಬರಿ ಬಿಡುಗಡೆ ಕಾರ್ಯಕ್ರಮದಲ್ಲಿ ಕಾದಂಬರಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ನಾಡ-ನುಡಿ, ನೆಲ-ಜಲ, ಸಾಹಿತಿ, ಸಾಹಿತ್ಯ, ಹೋರಾಟ ಸೇರಿದಂತೆ ಬಹುಮುಖಿಯಾಗಿ ಗುರುತಿಸಿಕೊಂಡು ಬರುತ್ತಿದೆ. ಸಾಹಿತ್ಯ ಸಮ್ಮೇಳನಗಳ ಮೂಲಕ ನಾಡಿನ ಸಾಹಿತ್ಯ ಸಾಂಸ್ಕೃತಿಕ ಲೋಕಗಳ ಪರಿಚಾರಿಕೆ ಮಾಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಕೃತಿಗಳ ಲೋಕಾರ್ಪಣೆಗೆ ವೇದಿಕೆಯಾಗಿದೆ. ಆದರೆ ಇಂದು ಆಧುನಿಕತೆಯ ದ್ಯೋತಕವಾದ ಮೊಬೈಲ್, ದೂರದರ್ಶನಗಳಲ್ಲಿ ಬರುವ ಧಾರವಾಹಿಗಳ ಗೀಳು ಜನರಲ್ಲಿ ಹೆಚ್ಚಾಗಿರುವುದರಿಂದ ಮನುಷ್ಯ ತನ್ನ ದಿನ ನಿತ್ಯದ ಬದುಕಿನಲ್ಲಿ ವ್ಯವಧಾನ ಕಳೆದುಕೊಳ್ಳುತ್ತಿದ್ದಾನೆ ಎಂದರು.
ಪ್ರಸ್ತುತ ನಿತ್ಯ ಹಲವು ಕೃತಿಗಳು ಲೋಕರ್ಪಾಣೆಗೊಳ್ಳುತ್ತಿವೆ. ಆದರೆ ಓದುಗರ ಕೊರತೆ ಹೆಚ್ಚಾಗಿದೆ.ಕೃತಿಗಳ ವಿಮರ್ಶೆ, ಚಿಂತನ- ಮಂಥನ ಕಾರ್ಯ ನಡೆಯುತ್ತಿಲ್ಲ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಕೇಂದ್ರಕನ್ನಡ ಸಾಹಿತ್ಯಪರಿಷತ್ತಿಗೆ ಸಾಹಿತ್ಯ ಚಟುವಟಿಕೆಗಳನ್ನು ನಡೆಸಲು ಸರ್ಕಾರದಿಂದ ಹಣಕಾಸಿನ ಕೊರತೆ ಸಹ ಕಂಡುಬರುತ್ತಿದೆ ಎಂದರಲ್ಲದೆ,
ಆದರೂ ಸಾಹಿತ್ಯ ಪರಿಷತ್ತು ಎದೆಗುಂದದೆ ನಿರಂತರವಾಗಿ ಸಾಹಿತ್ಯ ಸಮ್ಮೇಳನಗಳನ್ನು ನಡೆಸುತ್ತಾ ಬರುತ್ತಿದೆ. ರಾಜ್ಯ, ಹೊರ ರಾಜ್ಯಗಳಲ್ಲಿ ಇಲ್ಲಿವರೆಗೂ ಸಾಹಿತ್ಯ ಸಮ್ಮೇಳನಗಳನ್ನು ನಡೆಸಿದೆ. ಹಾಗೆಯೇ ಕನ್ನಡಸಾಹಿತ್ಯ ಪರಿಷತ್ತನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯವ ದೃಷ್ಠಿಯಿಂದ ಮುಂದಿನ ಸಮ್ಮೇಳನವನ್ನು ಆಸ್ಟ್ರೇಲಿಯಾದಲ್ಲಿ ನಡೆಸಲು ಕೇಂದ್ರಕನ್ನಡ ಸಾಹಿತ್ಯ ಪರಿಷತ್ತು ತೀರ್ಮಾನಿಸಿದೆ.
ಪಾವನಿ ಕಾದಂಬರಿಯ ಲೇಖಕ ಡಿ.ಸಿ.ಪಾಣಿಯವರು ಹಲವು ಕೃತಿಗಳ ಮೂಲಕ ಸಾಮಾಜಿಕ ಚಿಕಿತ್ಸಕ ಸಲಹೆಗಳನ್ನು ನೀಡಿದ್ದಾರೆ. ತನ್ನ ಕೃತಿಗಳ ಮೂಲಕ ಸಮಾಜಕ್ಕೆ ಉತ್ತಮವಾದ ಆದರ್ಶ ಮತ್ತು ಮೌಲ್ಯಗಳನ್ನು ನೀಡುತ್ತಿದ್ದಾರೆ. ಪಾವನಿ ಕಾದಂಬರಿಯು ಕನ್ನಡ ಸಾಹಿತ್ಯ ಸಾರಸ್ವತ ಲೋಕದಲ್ಲಿ ಉತ್ತಮವಾದ ಕೃತಿಯಾಗಲಿದೆ ಎಂಬುದಾಗಿ ಅವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕಾದಂಬರಿಕಾರ ಡಿ.ಸಿ.ಪಾಣಿ, ಶಿಕ್ಷಣ ತಜ್ಞ ಹೆಚ್.ಎನ್.ನರಸಿಂಹಯ್ಯ, ಸಾಹಿತಿ ಓಂಕಾರಯ್ಯ, ಪಾವನಿ ಚಲನಚಿತ್ರ ನಾಯಕನಟ ಅಂಬರೀಷ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿ.ಎಂ.ನಾಗೇಶ್ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಸಪಾ ಕೋಶಾಧ್ಯಕ್ಷ ಸಿ.ಲೋಕೇಶ್, ಸಂಘಟನಾ ಕಾರ್ಯದರ್ಶಿ ವಿ.ಧನಂಜಯ, ಶ್ರೀನಿವಾಸ್, ಹಿರಿಯೂರು ಕಸಾಪ ಪದಾಧಿಕಾರಿಗಳಾದ ಜಗದೀಶಯಾದವ್, ಎಸ್.ಜಿ.ರಂಗಸ್ವಾಮಿಸಕ್ಕರ, ಗೋಸಿಕರೆ ರಂಗನಾಥ, ಸಕ್ಕರನಾಗರಾಜ್, ಪ್ರಭಾಕರರೆಡ್ಡಿ, ಯೋಗಿಶ್, ಎಂ.ವಿ.ಹರ್ಷ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page