ತಂತ್ರಜ್ಞಾನ ಮತ್ತು ಸೇವಾ ಮನೋಭಾವದಿಂದ ಸಾಮಾನ್ಯರಿಗೆ ಸರ್ಕಾರಿ ವ್ಯವಸ್ಥೆ ಮುಟ್ಟಿಸಲು ಸಾಧ್ಯ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by | 22/02/23 | ಸುದ್ದಿ

ಬೆಂಗಳೂರು : ತಂತ್ರಜ್ಞಾನ ಮತ್ತು ಸೇವಾ ಮನೋಭಾವ ಜೊತೆಗೂಡಿದರೆ, ದೇಶದಲ್ಲಿ ಸರ್ಕಾರದ ವ್ಯವಸ್ಥೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಿಗೆ ತಲುಪಿಸಲು ಸಾಧ್ಯ ಎನ್ನುವುದನ್ನು ಗ್ರಾಮ ಒನ್ ಕಾರ್ಯಕ್ರಮದ ಯಶಸ್ಸು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಮ ಒನ್ ಯೋಜನೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮ ಒನ್ ಸೇವೆ, ಜೀವನೋಪಾಯ ಹಾಗೂ ಜ್ಞಾನಾರ್ಜನೆಗೆ ಮೂಲ :

ಯಾವುದಾದರೂ ಒಂದು ವ್ಯವಸ್ಥೆಗೆ ಚಲನಾಶೀಲವಾದ ಶಕ್ತಿಯಿದ್ದರೆ ವೇಗವಾಗಿ ಮುಂದುವರೆಸಿಕೊಂಡು ಹೋಗಬಹುದು. ನಿಂತಲ್ಲೇ ನಿಂತರೆ ತುಕ್ಕು ಹಿಡಿಯುತ್ತದೆ. ಸರ್ಕಾರದ ಚಕ್ರ ನಿರಂತರವಾಗಿ ಚಲಿಸಲು ಕೆಳಹಂತದ ಕೆಲಸಗಳು ಸರಿಯಾಗಿ ನಡೆಯಬೇಕು. ಜನರ ಬೇಕುಬೇಡಗಳ ಆಧಾರದ ಮೇಲೆ ಬಹಳಷ್ಟು ಸೇವೆಗಳು ಒದಗಿಸಲಾಗುತ್ತಿದೆ ಎಂದರು.

ಕಾನೂನಿನ ವ್ಯಾಪ್ತಿಯಲ್ಲಿಯೇ ಕೆಲಸ :

ಸರ್ಕಾರ ತನ್ನ ವ್ಯವಸ್ಥೆಯಲ್ಲಿದ್ದ ಕೆಲವು ಅಧಿಕಾರವನ್ನು ನೀಡಲಾಗಿದೆ. ವ್ಯವಸ್ಥೆ ಯಶಸ್ವಿಯಾಗಲು ಸೇವಾ ಮನೋಭಾವ ಮುಖ್ಯ. ಮನೆ ಮನೆಗೆ ಸೇವೆ ತಲುಪಿಸುವ ಉದ್ದೇಶದಿಂದ ಯೋಜನೆ ಜಾರಿಯಾಗಿದ್ದು, ಸೇವೆ ಸೇವೆಯಾಗಿಯೇ ಉಳಿಯಬೇಕು. ಸೇವಾ ಮನೋಭಾವವನ್ನು ಮನಸ್ಸಿನಿಂದ ತೆಗೆಯಬಾರದು ಮಾಡಿದಾಗ ಹೆಚ್ಚಿನ ಸೇವೆ ನೀಡಲು ಸಾಧ್ಯವಿದೆ. ಜನರು ಹಳೆಯ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಇದು ಸೇವೆಗೆ, ಜೀವನೋಪಾಯಕ್ಕೆ ಅವಕಾಶವಾಗಿದೆ. ಜ್ಞಾನಾರ್ಜನೆಗೆ ಕೂಡ ಮೂಲವಾಗಿದೆ. ಸೇವೆಗಳನ್ನು ನೀಡಲು ನಿಮ್ಮನ್ನು ಸಬಲರಾಗಿಸಲಾಗಿದೆ. ಕಾನೂನಿನ ವ್ಯಾಪ್ತಿಯಲ್ಲಿಯೇ ಕೆಲಸ ಮಾಡಬೇಕು. ಜ್ಞಾನವಿದ್ದಲ್ಲಿ ಸಬಲೀಕರಣವಾಗುತ್ತದೆ ಎಂದರು.

ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಒನ್ ಜಾರಿಯಲ್ಲಿದೆ. ಗ್ರಾಮ್ ಒನ್ ಕೇಂದ್ರ‌ದಿಂದ ಬಂದ ಅರ್ಜಿಗಳು ವಿಲೇವಾರಿ ಆಗಲು ವಿಳಂಬವಾದರೆ ತಹಸಿಲ್ದಾರ ಕಚೇರಿಗೂ ಇದಕ್ಕೂ ವ್ಯತ್ಯಾಸ ಇರುವುದಿಲ್ಲ. ಪ್ರಾಮಾಣಿಕತೆಯಿಂದ, ದಕ್ಷತೆಯಿಂದ, ವೇಗವಾಗಿ ಕೆಲಸಮಾಡಬೇಕು ಎಂದರು.

ಜನಪರ ವ್ಯವಸ್ಥೆ ನಿರ್ಮಿಸಬೇಕು :

ಗ್ರಾಮ ಒನ್ ನಿಂದ ತ್ತಮ ಕೆಲಸಗಳಾಗುತ್ತಿರುವ ಬಗ್ಗೆ ಮಾಹಿತಿಯಿದ್ದು, ಜನಸ್ನೇಹಿಯಾಗಿ ಕೆಲಸ ಮಾಡುತ್ತಿರುವುದರಿಂದ ಜನರಲ್ಲಿ ವಿಶ್ವಾಸ ಮೂಡಿದೆ. ಒಂದು ವರ್ಷದಲ್ಲಿ ಒಂದೂವರೆ ಕೋಟಿಯಾಗಿರುವ ಮುಂದಿನ ವರ್ಷದಲ್ಲಿ ಮೂರು ಕೋಟಿ ತಲುಪುವ ಗುರಿಯನ್ನು ಹಾಕಿಕೊಳ್ಳಬೇಕು. ಜನಪರವಾಗಿರುವ, ಜನರಿಗಾಗಿ ವ್ಯವಸ್ಥೆ ಆಗಬೇಕು. ವ್ಯಾಪಕವಾಗಿ, ಯಶಸ್ವಿಯಾಗಿ, ಸಮರ್ಪಕವಾಗಿ ಕೆಲಸಗಳಾದಾಗ ಒಂದು ವ್ಯವಸ್ಥೆ ನಿರ್ಮಾಣವಾಗುತ್ತದೆ. ಅಂಥ ವ್ಯವಸ್ಥೆಯನ್ನು ಎಲ್ಲರೂ ಹುಟ್ಟುಹಾಕಬೇಕೆಂದು ಕರೆ ನೀಡಿದರು.

ಗ್ರಾಮ ಒನ್ ಕ್ರಾಂತಿಕಾರಿ ಯೋಜನೆ :

ಇದಕ್ಕೆ ಅರ್ಥಿಕವಾಗಿ ಇನ್ನಷ್ಟು ಬಲ‌ ಕೊಡುವ ಕೆಲಸ ಮಾಡಲಾಗುವುದು. ತಂತ್ರಜ್ಞಾನ ‌ಕ್ರಾಂತಿಯಾಗಿದೆ. ಜನರಿಗೆ ಸರಳವಾಗಿ ಸೇವೆಗಳು ಸಿಗುವಂತೆ‌ ಮಾಡಲಾಗುವುದು‌. ಗ್ರಾಮ ಒನ್ ಕೇಂದ್ರಗಳಲ್ಲಿ ಇನ್ನಷ್ಟು ಸೇವೆಗಳು, ಅಂತರ್ಜಾಲಕ್ಕೆ ವೇಗ, ಮೆಮರಿ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಗ್ರಾಮ ಒನ್ ಕ್ರಾಂತಿಕಾರಿ ಯೋಜನೆ. ಸರ್ಕಾರವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ದಿದೆ ಎಂದರು.

ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಗ್ರಾಮ ಒನ್ ಅನಿವಾರ್ಯ :

ಗ್ರಾಮ ಒನ್ ಸೇವೆಯಿಂದ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಗ್ರಾಮ ಒನ್ ಕಾರ್ಯಕರ್ತ ಪರಿಶ್ರಮದಿಂದ, ವಿನೂತನವಾಗಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಸಮಯಕ್ಕೆ ತಕ್ಕ ಸ್ಪಂದನೆ, ಉತ್ಸಾಹ, ಪರಿಶ್ರಮದಿಂದ ಆಡಳಿತ ವ್ಯವಸ್ಥೆ ಯಶಸ್ವಿಯಾಗುತ್ತದೆ. ಮುಂದಿನ ಐದು ವರ್ಷದಲ್ಲಿ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಗ್ರಾಮ ಒನ್ ಅನಿವಾರ್ಯವಾಗಲಿದೆ. ಗ್ರಾಮ ಒನ್ ಗೆ ಶಕ್ತಿ ತುಂಬಲಾಗುವುದು. ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವುದು ಸರ್ಕಾರದ ಗುರಿ ಎಂದರು.

ಬಡವರ ಸೇವೆಗೆ ಆದ್ಯತೆ ನೀಡಿ :

ಗ್ರಾಮ ಒನ್ ವ್ಯವಸ್ಥೆಯಲ್ಲಿ ಬಹಳಷ್ಟು ಜನರ ಪರಿಶ್ರಮವಿದೆ. ನಿಮ್ಮ ಮಟ್ಟದಲ್ಲಿ ಸೇವೆಯನ್ನು ಸುಧಾರಿಸಿ ಉತ್ತಮಗೊಳಿಸಲು ಪ್ರಯತ್ನಿಸಿ. ನಿಮ್ಮ ದಿನಿನಿತ್ಯದ ಕೆಲಸದೊಂದಿಗೆ ಕನಿಷ್ಟ 10% ರಷ್ಟು ಹೆಚ್ಚು ಕೆಲಸವನ್ನು ಮಾಡಲು ಪ್ರಯತ್ನಿಸಿ, ಹೊಸ ಸೇವೆಗಳನ್ನು ಗ್ರಾಮ ಒನ್ ಸೇವೆಯಲ್ಲಿ ಸೇರಿಸಲು ಪ್ರಯತ್ನಿಸಿ. ಸಮಾಜದಲ್ಲಿ ಸರ್ಕಾರ ಮತ್ತು ಜನರ ನಡುವೆ ಸೇತುವಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸುವ ಯುವ ಪಡೆ ನೀವಾಗಿದ್ದೀರಿ. ಕೆಲಸವನ್ನು ಮಾಡದಿರಲು ನೂರಾರು ಕಾರಣಗಳಿರಬಹುದು. ಆದರೆ ಬಡವರಿಗೆ ಸೇವೆ ಸಲ್ಲಿಸಲು ಒಂದು ಸಕಾರಣ ಸಾಕು. ಬಡವರಿಗೆ , ಕಷ್ಟದಲ್ಲಿರುವವರಿಗೆ ಮಾನವೀಯತೆಯಿಂದ ಸ್ಪಂದಿಸಿ, ಅವರ ಸೇವೆ ನೀಡಲು ಆದ್ಯತೆ ನೀಡಬೇಕೆಂದು ಗ್ರಾಮ ಒನ್ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಸರ್ಕಾರ ಮತ್ತು ಜನಸಾಮಾನ್ಯರ ಕೊಂಡಿ :

ಗ್ರಾಮ ಒನ್ ಕಾರ್ಯಕರ್ತರಿಗೆ ಜಿಲ್ಲಾವಾರು ಪ್ರಶಸ್ತಿಗಳನ್ನು ನೀಡಲು ಸರ್ಕಾರ ತೀರ್ಮಾನ ಮಾಡಿದೆ. ಕಾರ್ಯಕರ್ತರು ತಮ್ಮ ಅನುಭವಗಳನ್ನು ದಾಖಲಿಸಲಬೇಕು. ಶೇ 10 ರಷ್ಟು ಕೆಲಸವನ್ನು ಹೆಚ್ಚಿಸುವ ನಿರ್ಧಾರ ಮಾಡಬೇಕು.ಗ್ರಾಮ ಒನ್ ಇತರೆ ರಾಜ್ಯಗಳಲ್ಲಿಯೂ ಪ್ರಾರಂಭವಾಗುತ್ತಿರುವುದು ಉತ್ತಮ ಬೆಳವಣಿಗೆ. ಸಮಾಜದಲ್ಲಿ ಹೊಸ ಯುವಕರ ಪಡೆ ಇದೆ. ಸರ್ಕಾರ ಮತ್ತು ಜನಸಾಮಾನ್ಯರ ನಡುವೆ ದಕ್ಷತೆಯಿಂದ ಕೊಂಡಿಯಂತೆ ಕೆಲಸ ಮಾಡುವ ವ್ಯವಸ್ಥೆ ಇದೆ ಎನ್ನುವ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂದರು.

ಘರ್ಷಣೆಗಳಿಲ್ಲದಂತೆ ಕೆಲಸ ಮಾಡುವಂತಾಗಬೇಕು. ಆರು ತಾಲ್ಲೂಕುಗಳನ್ನು ಸಂಪೂರ್ಣವಾಗಿ ಕಾಗದ ರಹಿತ ಕಚೇರಿಗಳನ್ನಾಗಿ ಮಾಡಲು ಪ್ರಾಯೋಗಿಕವಾಗಿ ಕೈಗೊಂಡಿದ್ದು, ನಾಡಕಚೇರಿಗಳನ್ನೂ ಕಾಗದ ರಹಿತ ಕಚೇರಿಗಳನ್ನಾಗಿಸಲಾಗುವುದು. ಸರ್ವರ್ ಸಾಮರ್ಥ್ಯವನ್ನು ಹೆಚ್ಚಿಸಲು ಅನುಮತಿ ನೀಡಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ಡಳಿತ ಸುಧಾರಣೆಯಾದರೆ ಎಲ್ಲರೂ ಯಶಸ್ವಿಯಾಗುತ್ತೇವೆ. ಅಧಿಕಾರದ ವಿಕೇಂದ್ರೀಕರಣದೊಂದಿಗೆ ಸೇವೆಗಳ ವಿಕೇಂದ್ರೀಕರಣವೂ ಆಗಬೇಕು ಎಂದ ಮುಖ್ಯಮಂತ್ರಿಗಳು ಅಸಾಧ್ಯ ಎನ್ನುತ್ತಿದ್ದ ಕೆಲಸಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೇ ಸರ್ಕಾರದ ಕೆಲಸಗಳನ್ನು ಜನರಿಗೆ ತಲುಪಿಸುತ್ತಿರುವುದಕ್ಕಾಗಿ ಅಭಿನಂದಿಸಿದರು.

Latest News >>

ಮಹಾವೀರರ ತತ್ವ ಆದರ್ಶಗಳು ಸರ್ವಕಾಲಕ್ಕೂ ಪ್ರಸ್ತುತ: ತಹಸಿಲ್ದಾರ್ ರೆಹಾನ್ ಪಾಷ

ಚಳ್ಳಕೆರೆ: ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಜೈನ ಸಮುದಾಯ ವತಿಯಿಂದ ಇಂದು ಮಹಾವೀರ  ಜಯಂತಿಯನ್ನು ಲೋಕಸಭಾ ಚುನಾವಣೆ...

ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ನ ಸ್ಥಳಕ್ಕೆಮುಖ್ಯಕಾರ್ಯದರ್ಶಿಯಾದ ಅಂಜುಮ್ ಫರ್ವೇಜ್ ಭೇಟಿ

ಹಿರಿಯೂರು: ವಾಣಿವಿಲಾಸ ಸಾಗರದ ಐಮಂಗಲ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ಸ್ಥಳಕ್ಕೆ...

ಸಡಗರ ಸಂಭ್ರಮದಿಂದ ಜರುಗಿದ ಶ್ರೀರಾಮನವಮಿ- ಶ್ರೀರಾಮ ಭಕ್ತರಿಂದ ಪಾನಕ. ಕೋಸಂಬರಿ ವಿತರಣೆ- ವಿಶೇಷ ಪೂಜೆ.

ಚಳ್ಳಕೆರೆ ಜನಧ್ವನಿ ವಾರ್ತೆ ಏ17. ಶ್ರೀರಾಮನವಮಿ ಅಂಗವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶ್ರೀರಾಮ ಜಪದೊಂದಿಗೆ ಸಡಗರ ಸಂಭ್ರಮದಿಂದ...

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡವಂತ ಹುನ್ನಾರ ನಡೆಸಲಾಗಿದೆ ಎಂಬುದಾಗಿ ರೈತ ಮುಖಂಡ :ಕಸವನಹಳ್ಳಿ ರಮೇಶ್ ಆರೋಪ

ಹಿರಿಯೂರು: ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ ಹಾಗೂ ಭದ್ರಾ...

ಬೆಳೆವಿಮೆ ಪರಿಹಾರದಲ್ಲಿ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ.ಮರುಪರಿಶೀಲಿಸಿ ಹೆಚ್ಚುವರಿ ಪರಿಹಾರ ಕೊಡಿಸಲು ಪ್ರಯತ್ನ: ಎಚ್.ಎನ್.ಶಿವೇಗೌಡ

ಹಿರಿಯೂರು: ಬೆಳೆವಿಮೆ ಪರಿಹಾರದಲ್ಲಿ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಮರುಪರಿಶೀಲಿಸಿ ಹೆಚ್ಚುವರಿ ಪರಿಹಾರ ಕೊಡಿಸಲು...

ಯುಗಾದಿ ಹಬ್ಬಕ್ಕೆ ಬಂದವರಿಗೆ ಬೆಂಗಳೂರಿಗೆ ತೆರಳಲು ಬಸ್ಸಿಗಾಗಿ ಸಾರಿಗೆ ಬಸ್ಸು ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು.

ಚಳ್ಳಕೆರೆ ಏ11 ಯುಗಾದಿ ಹಬ್ಬ ಮುಗಿಸಿಕೊಂಡು ಮತ್ತೆ ಬೆಂಗಳೂರಿಗೆ ತೆರಳಲು ಸಾರಿಗೆ ಬಸ್ಸುಗಳ ವ್ಯವಸ್ಥೆಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ....

ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಅಗತ್ಯವಸ್ತುಗಳ ಖರೀದಿ ಬಲು ಜೋರು..

ಚಳ್ಳಕೆರೆ ಚಳ್ಳಕೆರೆ ಏ.8 ಅಗತ್ಯ ವಸ್ತುಗಳ ಬೆಳೆ ಏರಿಕೆ , ಬಿಸಿಲಿನ ತಾಪ ಹಾಗೂ ಬರಗಾಲದ ನಡುವೆಯೂ ರಂಜಾನ್ ಹಾಗೂ ಯುಗಾದಿ ಹಬ್ಬದ ಖರೀದಿ ಭರಾಟೆ...

ಯುಗಾದಿ ಹಾಗೂ ರಂಜಾನ್ ಹಬ್ಬಗಳನ್ನು‌ ಶಾಂತಿ‌ಸೌಹಾರ್ಧತೆಯಿಂದ ಆಚರಿಸಿ ಠಾಣಾಧಿಕಾರಿ ಕೆ.ಕುಮಾರ್.

ಚಳ್ಳಕೆರೆ ಏ.8 ಈ ಬಾರಿ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಒಟ್ಟಾಗಿ ಬಂದಿದ್ದು, ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಠಾಣಾಧಿಕಾರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page