ಹೊಳಲ್ಕೆರೆ ಅ.7:
ತಿಂಗಳಿಗೆ ಕೇವಲ ಒಂದೆರೆಡು ತಂಬಾಕು ದಾಳಿಗಳು ಮಾತ್ರ ಆಗುತ್ತಿದ್ದು, ತಂಬಾಕು ದಾಳಿ ಹೆಚ್ಚಿಸಲು ಕ್ರಮಕೈಗೊಳ್ಳಬೇಕು ಎಂದುದ ಹೊಳಲ್ಕೆರೆ ತಹಶೀಲ್ದಾರ್ ಬಿ.ಬಿ.ಫಾತಿಮಾ ಹೇಳಿದರು.
ಹೊಳಲ್ಕೆರೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕುಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಮಟ್ಟದಲ್ಲಿ ತಂಬಾಕು ದಾಳಿಗಳನ್ನು ಕೈಗೊಳ್ಳಬೇಕು ಮತ್ತು ಪ್ರತಿ ದಿನ ಕಸ ವಿಲೇವಾರಿ ವಾಹನಗಳಲ್ಲಿ ತಂಬಾಕು ನಿಯಂತ್ರಣ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆಡಿಯೋ ಜಿಂಗಲ್ಸ್‍ಗಳ ಮೂಲಕ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುವಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸುವಂತೆ ತಾಲ್ಲೂಕು ಕಾರ್ಯನಿರ್ವಾಹಕಾಧಿಕಾರಿಗಳಿಗೆ ತಿಳಿಸಿದರು.
ಶಾಲೆಗಳ ಸುತ್ತ-ಮುತ್ತ 100 ಗಜದ ವ್ಯಾಪ್ತಿಯಲ್ಲಿ ತಂಬಾಕು ದಾಳಿಯನ್ನು ಕೈಗೊಂಡು, ತಂಬಾಕು ಮಾರಾಟ ಮಾಡದಂತೆ, ಯಾವ ಶಾಲೆಗಳ ಹತ್ತಿರ ತಂಬಾಕು ಮಾರಾಟವಾಗುತ್ತಿದೆಯೋ ಅಂತಹ ಶಾಲೆಗಳ ಪಟ್ಟಿಯನ್ನು ಮಾಡಿ, ತಂಬಾಕು ದಾಳಿಯನ್ನು ಕೈಗೊಳ್ಳುವುದು. ಪ್ರತಿಯೊಂದು ಶಾಲೆಗಳ ಹತ್ತಿರ ತಂಬಾಕು ಮಾರಾಟವಾಗದಂತೆ ಮುಖ್ಯೋಪಾಧ್ಯಾಯರು ಸೂಕ್ತ ಕ್ರಮ ವಹಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದರು.
ಮುಖ್ಯಾಧಿಕಾರಿಗಳು, ಪುರಸಭೆ ಇವರಿಗೆ ಪ್ರತಿ ದಿನ ಕಸ ವಿಲೇವಾರಿ ವಾಹನಗಳಲ್ಲಿ ತಂಬಾಕು ನಿಯಂತ್ರಣ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆಡಿಯೋ ಜಿಂಗಲ್ಸ್‍ಗಳ ಮೂಲಕ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕು ಸೂಚನೆ ನೀಡಿದರು.
ತಾಲ್ಲೂಕಿನಾದ್ಯಂತ ತಂಬಾಕು ಕಾರ್ಯಾಚರಣೆ ನಡೆಸುವಾಗ ಪೋಲಿಸ್ ಇಲಾಖೆಯವರು ಹೆಚ್ಚಿನ ಸಹಕಾರ ನೀಡುವಂತೆ ತಹಶೀಲ್ದಾರರು ಸೂಚಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ಡಿ.ರೇಖಾ ಮಾತನಾಡಿ, ಕೋಟ್ಪಾ-2003 ರ ಅಡಿಯಲ್ಲಿ 2023-24ನೇ ಸಾಲಿನಲ್ಲಿ ಹೊಳಲ್ಕೆರೆ ತಾಲ್ಲೂಕಿನಲ್ಲಿ 08 ತಂಬಾಕು ದಾಳಿಗಳನ್ನು ನಡೆಸಿದ್ದು, ಸೆಕ್ಷನ್-4 ಅಡಿಯಲ್ಲಿ 84 ಕೇಸುಗಳನ್ನು ದಾಖಲಿಸಿ ರೂ. 6900 ದಂಡವನ್ನು, ಸೆಕ್ಷನ್-6ಎ ಅಡಿಯಲ್ಲಿ 44 ಕೇಸುಗಳನ್ನು ದಾಖಲಿಸಿ ರೂ. 3150 ದಂಡವನ್ನು ಮತ್ತು ಸೆಕ್ಷನ್-6ಬಿ ಅಡಿಯಲ್ಲಿ 08 ಕೇಸುಗಳನ್ನು ದಾಖಲಿಸಿ ರೂ. 700 ದಂಡವನ್ನು ಒಟ್ಟು 136 ಕೇಸುಗಳನ್ನು ದಾಖಲಿಸಿ ರೂ. 10,750/- ದಂಡವನ್ನು ಸಂಗ್ರಹಿಸಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಜಂಟಿ ಖಾತೆಗೆ ಕಟ್ಟಿರುವ ಬಗ್ಗೆ ಮಾಹಿತಿಯನ್ನು ಸಭೆಯಲ್ಲಿ ತಿಳಿಸಿದರು.
ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ತಾಲ್ಲೂಕು ಮಟ್ಟದ ತಂಬಾಕು ತನಿಖಾ ದಳ ತಂಡವು ಕನಿಷ್ಠ ವಾರಕ್ಕೊಮ್ಮೆಯಾದರೂ ತಂಬಾಕು ದಾಳಿಯನ್ನು ನಡೆಸಲು ಮಾನ್ಯ ತಹಶೀಲ್ದಾರವರಲ್ಲಿ ಕೋರಿದರು. ಇದಕ್ಕೆ ತಹಶೀಲ್ದಾರವರು ವಾರಕ್ಕೊಮ್ಮೆ ತನಿಖಾ ತಂಡವು ದಾಳಿ ನಡೆಸಬೇಕೆಂದು ತನಿಖಾ ತಂಡದ ಸದಸ್ಯರಿಗೆ ಸೂಚಿಸಿದರು.
ಸಭೆಯಲ್ಲಿ ಕಂದಾಯ ಇಲಾಖೆಯವರು, ಆರೋಗ್ಯ ಇಲಾಖೆಯವರು, ಪುರಸಭೆಯವರು, ಮಹಿಳಾ ಮತ್ತು ಮಕ್ಕಳ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ರೋಟರಿ ಕ್ಲಬ್, ರೆಡ್ ಕ್ರಾಸ್ ಸಂಸ್ಥೆಯವರು ಇದ್ದರು.
ತಂಬಾಕು ದಾಳಿ ಹೆಚ್ಚಿಸಿ-ತಹಶೀಲ್ದಾರ್ ಬಿ.ಬಿ.ಫಾತಿಮಾ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments