ತರಬೇತಿ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್‍ಉಲ್ಲಾ ಷರೀಪ್ ಸಹಕಾರ ಸಂಘಗಳಿಗೆ ಕಂಪ್ಯೂಟರೈಸೇಷನ್ ಅಳಡಿಕೆ

by | 01/07/24 | ಸುದ್ದಿ

ಚಿತ್ರದುರ್ಗ ಜುಲೈ01:
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ದೇಶದಾದ್ಯಂತ ಕಂಪ್ಯೂಟರೈಸೇಷನ್ ಅಳವಡಿಕೆ ಕಾರ್ಯ ನಡೆಯುತ್ತಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ 158 ಸಹಕಾರ ಸಂಘಗಳಲ್ಲಿ 148 ಪಿಎಸಿಎಸ್ ಸಹಕಾರ ಸಂಘಗಳಿಗೆ ಕಂಪ್ಯೂಟರೈಸೇಷನ್ ಅಳವಡಿಕೆ ಕೆಲಸ ನಡೆಯುತ್ತಿದೆ. ಇದರಿಂದ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಬರುತ್ತದೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಫ್ ಹೇಳಿದರು.
ನಗರದ ಕೆಳಗೋಟೆಯ ಬಿ.ಎಲ್.ಗೌಡ ಲೇಔಟ್‍ನ ಸಹಕಾರ ಭವನದಲ್ಲಿ ಸೋಮವಾರ ಸಹಕಾರ ಇಲಾಖೆ, ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕುಗಳಲ್ಲಿ ಬರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಹಕಾರ ಸಂಘಗಳ ಚುನಾವಣೆ ಜರುಗಿಸುವ ವಿಧಿವಿಧಾನಗಳ ಕುರಿತು ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಇಂದು ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಹಕಾರ ಚುನಾವಣೆ ದಿನಾಂಕದ 5 ವರ್ಷಗಳಲ್ಲಿ 2 ವಾರ್ಷಿಕ ಮಹಾಸಭೆಗೆ ಹಾಜರಾದಲ್ಲಿ ಚುನಾವಣೆ ಮತದಾನಕ್ಕೆ ಅರ್ಹರಾಗಿರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆಗೆ ಬಹಳ ಮಹತ್ವವಿದೆ. ಚುನಾವಣೆ ಸುಗುಮವಾಗಿ ನಡೆಯಲು ಸಹಕಾರ ಸಂಘಗಳ ಕಾರ್ಯನಿರ್ವಾಹಕರ ಜವಾಬ್ದಾರಿ ಬಹಳ ಮುಖ್ಯ. ಕಾನೂನು ಏನು ಹೇಳುತ್ತದೆ ಅದನ್ನು ಅರ್ಥಮಾಡಿಕೊಂಡು ಕೆಲಸ ಮಾಡಬೇಕು. ಚುನಾವಣೆ ಕುರಿತು ನೀಡುವ ಇಂತಹ ಉಪನ್ಯಾಸವನ್ನು ಸಂಘದ ಪ್ರತಿನಿಧಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಸಹಕಾರರತ್ನ ಪುರಸ್ಕøತರು ಹಾಗೂ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಆರ್.ರಾಮರೆಡ್ಡಿ ಮಾತನಾಡಿ, ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಇನ್ನು ಹೆಚ್ಚಿನ ಒಳ್ಳೆಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಸಂಬಂಧಿಸಿದವರು ಚುನಾವಣೆ ನಡೆಸುವ ಬಗ್ಗೆ ತರಬೇತಿಯ ಉಪನ್ಯಾಸಕರಿಂದ ಮಾಹಿತಿಯನ್ನು ಪಡೆದುಕೊಳ್ಳಬೇಕು. ಇದೇ ರೀತಿ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಇದೇ ರೀತಿಯ ಸಹಕಾರ ದೊರೆತಲ್ಲಿ ಸಹಕಾರ ಮಹಾಮಂಡಳದಿಂದ ಇನ್ನಷ್ಟು ತರಬೇತಿಗಳನ್ನು ನೀಡಲು ನಾವು ಸಿದ್ದರಿದ್ದೇವೆ” ಎಂದು ಹೇಳಿದರು.
ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿಂಕಲು ಬಸವರಾಜ್ ಮಾತನಾಡಿ, ಚುನಾವಣೆ ವಿಚಾರದಲ್ಲಿ ಯಾವುದೇ ಗೊಂದಲವಾಗದಂತೆ ಸಹಕಾರ ಸಂಘಗಳಲ್ಲಿ ಚುನಾವಣೆ ನಡೆಸುವ ಸಲುವಾಗಿ ತರಬೇತಿ ಹಮ್ಮಿಕೊಂಡಿದ್ದು, ಹೆಚ್ಚಿನ ಮಾಹಿತಿ ಪಡೆಯಬೇಕು ಎಂದು ತಿಳಿಸಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ರೈತಾಪಿ ವರ್ಗಕ್ಕೆ, ಬಡವರಿಗೆ ಮತ್ತು ಮಹಿಳೆಯರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಬೇಕು. ಸಂಘದ ಮುಖ್ಯ ಕಾರ್ಯನಿರ್ವಾಹಕರಿಗೆ ಉತ್ತಮವಾಗಿ ಜ್ಞಾನ ಹೊಂದಿದ ಸಿಬ್ಬಂದಿಗಳನ್ನು ಸಂಘದ ಆಡಳಿತ ಮಂಡಳಿ ನೇಮಕ ಮಾಡಿಕೊಂಡು, ಸಂಘದಲ್ಲಿ ಹೊಸ ಹೊಸ ಬಗೆಯ ತಿದ್ದುಪಡಿಗಳನ್ನು ಮಾಡಿಕೊಂಡು ಸಂಘವನ್ನು ಲಾಭಾಂಶ ಬರುವಂತೆ ಕೆಲಸ ನಿರ್ವಹಿಸಬೇಕು ಸಂಘವನ್ನು ಆರ್ಥಿಕವಾಗಿ ಸದೃಢಗೊಳಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ರವರು ಮಾತನಾಡಿ, ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಪ್ರತಿ ಬಾರಿಯಂತೆ ಈ ಬಾರಿಯೂ ಚುನಾವಣೆ ನಡೆಸುವ ಕುರಿತು ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. 3 ತಾಲ್ಲೂಕುಗಳ ಎಲ್ಲಾ ಪ್ರತಿನಿಧಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಯಾರು ಕೂಡ ಇಂತಹ ತರಬೇತಿಯನ್ನು ನಿರ್ಲಕ್ಷ್ಯ ಮಾಡದೇ ಚುನಾವಣೆ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬೇಕು ಹಾಗೂ ಇದೇ ರೀತಿ ಮುಂದಿನ ತರಬೇತಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಬೇಕು ಎಂದು ಮನವಿ ಮಾಡಿದದರು.
ಸಹಕಾರ ಸಂಘಗಳ ಚುನಾವಣೆ ಜರುಗಿಸುವ ವಿಧಿ-ವಿಧಾನಗಳ ಕುರಿತು ಚಿಕ್ಕಮಗಳೂರಿನ ಸಹಕಾರ ಸಂಘಗಳ ಸಹಾಯಕ ನಿಬಂಧಕ (ನಿವೃತ್ತ) ಎಸ್.ವಿ.ಬಸವರಾಜ್ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಯೂನಿಯನ್ ನಿರ್ದೇಶಕ ಜೆ.ಶಿವಪ್ರಕಾಶ್, ಎನ್.ಮಂಜುನಾಥ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಸಹಾಯಕ ನಿರ್ದೇಶಕ ಪಿ.ಅಂಜನಮೂರ್ತಿ, ಸಹಕಾರ ಸಂಘಗಳ ನಿರೀಕ್ಷಕ ಎಸ್. ಸಂಜಯ್‍ರಾಮ್, ರಾಮು, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಶಂಕರಮೂರ್ತಿ, ಹಿಮಂತರಾಜ್ ಹಾಗೂ ಚಿತ್ರದುರ್ಗ, ಹೊಸದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕಿನ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರು ಇದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page