ತಾತಾ ಮತ್ತಾಂದಿರ ಹೆಸರಿನಲ್ಲಿರುವ ಆಸ್ತಿಗಳನ್ನು ಮೃತರ ಕುಟುಂಬಸ್ಥರ ಹೆಸರಿಗೆ ಪೌತಿ ಖಾತೆಗೆ ಅರ್ಜಿಸಲ್ಲಿಸುವಂತೆ ತಹಶೀಲ್ದಾರ್ ರೇಹಾನ್ ಪಾಷ.

by | 16/10/23 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಅ.16 ತಾತಾ ಮುತ್ತಾಂದುರ ಹೆಸರಿನಲ್ಲಿರು ಜಮೀನುಗಳನ್ನು ಪೌತಿ ಖಾತೆ ಮಾಡಿಸಿಕೊಳ್ಳಲು ಮೃತ ಪ್ರಮಾಣ ಪತ್ರವಿಲ್ಲದಿದ್ದರೆ ಗ್ರಾಮ ಮಹಾಜರ್ ಮಾಡಿ ಕುಟುಂಬಸ್ಥರಿಗೆ ಪೌತೆ ಖಾತೆ ಮಾಡಿಕೊಡಲಾಗುವುದು ಎಂದು ತಹಶೀಲ್ದಾರ್ ರೇಹಾನ್ ಪಾಷಾ ತಿಳಿಸಿದ್ದಾರೆ. ಪೂರ್ವಜರ ಆಸ್ಥಿಗಳಿಗೆ ಅಗತ್ಯ ದಾಖಲೆಗಳಿಲ್ಲದೆ ಸುಮಾರು 70 ವರ್ಷಗಳಿಂದ ಕುಟುಂಬಸ್ಥರ ಹೆಸರಿಗೆ ಪೌತಿ ಖಾತೆಯಾಗದೆ ಸರಕಾರಿ ಸೌಲಭ್ಯಗಳಿಂದ ವಂಚಿತಾಗಿದ್ದರು. ಈಗ ಸರಕಾರ ಇದನ್ನು ಮನಗಂಡು ಕಂದಾಯ ಸಚಿವರ ನಿರ್ಧೆಶನದಂತೆ ಸರ್ಕಾರ ನಿಮಯ ಸಡಿಲಗೊಳಿಸಿ ಪೌತಿ ಖಾತೆ ಆಂದೋಲನ ಮೂಲಕಗ್ರಾಮ ಮಹಜರ್, ಸ್ಥಳ ಪರಿಶೀಲನೆ ನಡೆಸಿ ಮೃತರ ಕುಟುಂಬಸ್ಥರ ಹೆಸರಿಗೆ ಪೌತಿ ಖಾತೆ ಮಾಡಲಾಗುವುದು ಈ ಸುವರ್ಣ ಅವಕಾಶವನ್ನು ರೈತರು ಸದುಪಯೋಗ ಪಡಿಸಿಕೊಳ್ಳಲು ನಿಮ್ಮ ವ್ಯಾಪ್ತಿಯ ಗ್ರಾಮಲೆಕ್ಕಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ.

ಪೌತಿ ಖಾತೆ ಏಕೆ ಬೇಕು? ಜಮೀನು ವರ್ಗಾವಣೆ ಇದರ ಅಗತ್ಯವೇನು ಗೊತ್ತಾ?.
ಪೌತಿ ಖಾತೆಯಡಿ ಜಮೀನು ವರ್ಗಾವಣೆ ಮಾಡಿಕೊಳ್ಳುವುದು ಹೇಗೆ? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಆಸ್ತಿ ಮಾಲೀಕರು ಅಕಾಲಿಕ ನಿಧನ ಹೊಂದಿದ ನಂತರ ಅವರ ವಾರಸುದಾರರು ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಳ್ಳುವುದು ಸಾಮಾನ್ಯ. ಆದರೆ, ಬಹುತೇಕ ವಾರಸುದಾರರು ಯಾವಾಗಲಾದರೂ ಮಾಡಿಸಿಕೊಂಡರೆ ಆಯಿತು ಎಂಬ ನಿರ್ಲಕ್ಷ್ಯ ತೋರುತ್ತಾರೆ. ನೆನಪಿರಲಿ, ಪೌತಿ ಖಾತೆಯಡಿ ಜಮೀನು ವರ್ಗಾವಣೆ ಮಾಡಿಕೊಳ್ಳದಿದ್ದರೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಆಸ್ತಿ ಮಾಲೀಕರು ನಿಧನ ಹೊಂದಿದ ಬಳಿಕ ಪೌತಿ ಖಾತೆಯಡಿ ಜಮೀನು ವರ್ಗಾವಣೆ ಮಾಡಿಕೊಳ್ಳದಿದ್ದರೆ ಜಮೀನುಗಳ ಸ್ವಾಧೀನ ಹೊಂದಿದ್ದರೂ ಉಪಯೋಗವಿಲ್ಲದಂತೆ ಆಗುತ್ತದೆ. ಪ್ರಕೃತಿ ವಿಕೋಪದಿಂದಾಗಿ ಬೆಳೆ ನಷ್ಟವಾದರೆ ಬೆಳೆ ವಿಮೆಯಾಗಲಿ ಅಥವಾ ಬೆಳೆ ನಷ್ಟ ಪರಿಹಾರ ಪಡೆಯುವುದಕ್ಕೆ ಆಗಲಿ ಆಗುವುದಿಲ್ಲ. ಇನ್ನು ಬ್ಯಾಂಕ್​ಗಳಿಂದ ಸಾಲ – ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ. ಅದರ ಜೊತೆಗೆ ಮುಂದೆ ಹೊಸ ಹೊಸ ಕಾನೂನುಗಳು ಬಂದು ಕಚೇರಿಗಳಿಗೆ ಹಲವು ಬಾರಿ ಅಲೆದಾಡುವ ಸಂದರ್ಭಗಳು ಬರಬಹುದು. ಹಾಗಾಗಿ ಆಸ್ತಿಯನ್ನು ಪೌತಿ ಖಾತೆಯಡಿ ಬದಲಾವಣೆ ಮಾಡಿಕೊಳ್ಳುವುದು ಅಗತ್ಯವಾಗಿದೆ .ಇನ್ನು ವಾರಸುದಾರರು ಪಿತ್ರಾರ್ಜಿತ ಆಸ್ತಿಯನ್ನು ತಮ್ಮ ಹೆಸರಿಗೆ ಬಹಳಷ್ಟು ರೈತರು ಬದಲಾವಣೆ ಮಾಡಿಕೊಂಡಿಲ್ಲ. ಆಸ್ತಿ ಮಾಲೀಕರ ಮರಣ ಪ್ರಮಾಣ ಪತ್ರ ಇಲ್ಲದೇ ಜಮೀನಿನ ಖಾತೆ ವರ್ಗಾವಣೆ ಸಾಧ್ಯವಾಗುತ್ತಿಲ್ಲ. ಪೂರ್ವಿಕರ ಮರಣ ಪ್ರಮಾಣ ಪತ್ರಗಳನ್ನು ಕಾನೂನಾತ್ಮಕವಾಗಿ ಪಡೆಯಲು ಮಾಹಿತಿ ಕೊರತೆ ಇರುವ ಕಾರಣ ಕೆಲವು ರೈತರು ತಮ್ಮ ಹೆಸರಿನಲ್ಲಿ ವರ್ಗಾವಣೆ ಮಾಡಿಕೊಂಡಿಲ್ಲ.
ನಿಯಮದ ಪ್ರಕಾರ ಹೇಳುವುದಾದರೆ, ಗ್ರಾಮಗಳಲ್ಲಿ ವ್ಯಕ್ತಿ ನಿಧನರಾದ 28 ದಿನದೊಳಗೆ ಸಂಬಂಧಪಟ್ಟ ಗ್ರಾಮ ಲೆಕ್ಕಿಗರೇ ಮರಣ ಪ್ರಮಾಣ ಪತ್ರ ನೀಡಬೇಕು. ಒಂದು ವರ್ಷದೊಳಗಿದ್ದರೆ ತಹಶೀಲ್ದಾರರು ನೀಡಬಹುದು. ಒಂದು ವರ್ಷ ಮೇಲ್ಪಟ್ಟ ಪ್ರಕರಣಗಳಿದ್ದರೆ ಜೆಎಂಎಫ್ ನ್ಯಾಯಾಲಯದ ಮೂಲಕವೇ ದಾವೆ ಹೂಡಿ ಮರಣ ಪ್ರಮಾಣ ಪತ್ರ ಪಡೆದು ಪೌತಿ ಖಾತೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ನಿಮ್ಮ ಜಮೀನು ನಿಮ್ಮ ಹೆಸರಿಗೆ ಆಗಿಲ್ಲವೆಂದರೆ ಚಿಂತಿಸುವ ಅಗತ್ಯವಿಲ್ಲ. ಕುಟುಂಬದ ಮುಖ್ಯಸ್ಥರು ನಿಧನರಾದ ಆನೇಕ ವರ್ಷಗಳಾದರೂ ಸಹ ಜಮೀನು ನಿಮ್ಮ ಹೆಸರಿಗೆ ವರ್ಗಾವಣೆ ಆಗದಿದ್ದರೆ ಚಿಂತಿಸುವ ಅವಶ್ಯಕತೆ ಇಲ್ಲ. ಪೌತಿ ಖಾತೆಯ ಮೂಲಕ ಸುಲಭವಾಗಿ ನಿಮ್ಮ ಜಮೀನು ಅಥವಾ ಆಸ್ತಿ ವರ್ಗಾವಣೆ ಮಾಡಿಕೊಳ್ಳಲು ಈಗ ಸರಕಾರ ದಾಖಲೆಗಳಿಗೆ ರಿಯಾಯಿತಿ ನೀಡಿದೆ ನಿಮ್ಮ ತಾತಾ ಮುತ್ತಾತಂದಿರ ಮರಣ ಪ್ರಮಾಣ ಪತ್ರವಿಲ್ಲ ಎಂಬ ಚಿಂತೆ ಬಿಡಿ ಕೂಡಲೆ ನಿಮ್ಮ ತಾತಾ ಮುತ್ತಾಂದಿರ ಹಾಗೂ ಕುಟುಂಬ ಆಸ್ತಿ ಹೊಂದಿದವರು ಮರಣ ಪತ್ರ ಇಲ್ಲದಿದ್ದರೂ ನೀವು ಪೌತಿ ಖಾತೆಗೆ ಅರ್ಜಿ ಸಲ್ಲಿಸಿದರೆ ಸಂಬಂಧ ಪಟ್ಟ ಕಂದಾಯ ಇಲಾಖೆ ಅಧಿಕಾರಿಗಳು ನಿಮ್ಮ ಜಮೀನು ಹಾಗೂ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಮಹಾಜರ್ ಮಾಡಿ ಜಮೀನು ಖಾತೆ ಹೊಂದಿದ ಮೃತನ ಕುಟುಂಬಸ್ಥರ ಹೆಸರಿಗೆ ಖಾತೆ ಮಾಡಿಕೊಡಲಾಗುವುದು. ಬಹಳ ವರ್ಷಗಳಿಂದ ಪೌತಿ ಖಾತೆ ಮಾಡಿಸಿಕೊಳ್ಳಲು ದಾಖಲೆಗಳ ಲಭ್ಯವಿಲ್ಲದೆ ತಾಲೂಕು ಕಚೇರಿಗೆ ಅಲೆದು ಸುಸ್ತಾದವರಿಗೆ ಈಗ ಪೌತಿ ಖಾತೆ ಮಾಡಿಸಿಕೊಳ್ಳಲು ಸುವರ್ಣ ಅವಕಾಶ ಸರಕಾರ ನೀಡಿದೆ .

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page