ಚಿತ್ರದುರ್ಗ ಆ.05:
ತಾಯಿ ಹಾಲು ಅಮೃತಕ್ಕೆ ಸಮಾನ ಮಗು ಜನಿಸಿದ ತಕ್ಷಣ ತಾಯಿಯ ಹಾಲನ್ನು ನೀಡಬೇಕು, ಹೊರಗಿನ ಹಾಲನ್ನು ಹಾಕದೆ ತಾಯಿ ಹಾಲನ್ನೇ ಅತಿ ಹೆಚ್ಚು ಹಾಕಬೇಕು ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿ.ಮಂಜುಳಾ ಹೇಳಿದರು.
ನಗರದ ಮೆದೇಹಳ್ಳಿ ರಸ್ತೆಯ ಆದರ್ಶ ಕಲ್ಯಾಣ ಮಂಟಪದ ಬಳಿ ಇರುವ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯ ಪಾನ ಸಪ್ತಾಹ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶ್ವ ಸ್ತನ್ಯಪಾನ ಸಪ್ತಾಹ 2024ರ ಘೋಷ ವಾಕ್ಯ ‘ಕೊರತೆಗಳನ್ನು ಕೊನೆಗೊಳಿಸಿ ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ’ ಎನ್ನುವ ಘೋಷವಾಕ್ಯದಂತೆ ಗರ್ಭಿಣಿ ಮತ್ತು ಬಾಣಂತಿಯರು ಹಾಗೂ ಮಕ್ಕಳ ತಾಯಂದಿರಿಗೆ ಎದೆಯ ಹಾಲಿನ ಮಹತ್ವವನ್ನು ಸಾರಿದರು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಗಮಿಸಿದ ಜೆ.ಕೆ.ದಾಸಪ್ಪ ಮಾತನಾಡಿ, ಬಾಲ್ಯ ವಿವಾಹದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಬಾಲ್ಯ ವಿವಾಹಗಳು ಕಂಡುಬAದಲ್ಲಿ ತಕ್ಷಣ 1098 ಮಕ್ಕಳ ಸಹಾಯವಾಣಿಗೆ ಉಚಿತ ಕರೆ ಮಾಡಿ ಮಾಹಿತಿ ನೀಡಬಹುದು. ಕರೆ ಮಾಡಿದವರ ವೈಯಕ್ತಿಕ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮೇಲ್ವಿಚಾರಕಿ ಎಚ್.ಎಸ್‌ಮಂಜುಳಾ, ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ ಬಾಯಿ, ಆರೋಗ್ಯ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments