ತಾಲೂಕಿನ ವಿವಿಧ ಕಾಲೇಜುಗಳ ಒಕ್ಕೂಟದ ಫುಟ್ಬಾಲ್ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

by | 18/10/23 | ಕ್ರೇಡೆ

ಚಳ್ಳಕೆರೆ: ತಾಲೂಕಿನ ವಿವಿಧ ಕಾಲೇಜುಗಳ ಒಕ್ಕೂಟದ ವಿದ್ಯಾರ್ಥಿನಿಯರ ತಂಡ ಫುಟ್ಬಾಲ್ ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಇಂದು ನಡೆಯಲಿರುವ ರಾಜ್ಯಮಟ್ಟದ ಫುಟ್ಬಾಲ್ ಕ್ರೀಡೆ ಆಡಲು ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳೆಸಿತು.
ಈ ವೇಳೆ ಮಾತನಾಡಿದ ತಂಡದ ವ್ಯವಸ್ಥಾಪ ಟಿ.ಅಬ್ದಲ್ ವಾಹಿದ್ ತಾಲೂಕಿನ ವಿವಿಧ ಕಾಲೇಜುಗಳ ಒಕ್ಕೂಟದ ಬಾಲಕ ಹಾಗೂ ಬಾಲಕಿಯರ ಫುಟ್ಬಾಲ್ ತಂಡದ ವಿದ್ಯಾರ್ಥಿಗಳು ತಾಲೂಕು ಹಾಗೂ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಈಗ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಈಗಾಗಲೇ ಸ್ಪರ್ಧಾರ್ಥಿಗಳಿಗೆ ಸೂಕ್ತ ತರಬೇತಿಯನ್ನು ನೀಡಿದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗುವ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ತಾಲೂಕಿಗೆ ಉತ್ತಮ ಹೆಸರನ್ನು ತರುವ ಉತ್ಸಾಹದಲ್ಲಿದ್ದಾರೆ ಇಂದು ಚಳ್ಳಕೆರೆ ನಗರದಿಂದ ಬಾಗಲಕೋಟೆಗೆ ಕ್ರೀಡೆಗೆ ಹೋ ಹೊರಟಿದ್ದೇವೆ. ಸೂಕ್ತ ಭದ್ರತೆ ಹಾಗೂ ಸೂಕ್ತ ವ್ಯವಸ್ಥೆಗಳೊಂದಿಗೆ ವಿದ್ಯಾರ್ಥಿನಿಯರನ್ನು ಜವಾಬ್ದಾರಿತವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಲಾಗುವುದು

ಎಸ್ ಆರ್ ಎಸ್ ಶಾಲೆಯ ವಿದ್ಯಾರ್ಥಿನಿ ಐಶ್ವರ್ಯ ಮಾತನಾಡಿ ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯವಾಗುತ್ತದೆ ಈಗಾಗಲೇ ನಮ್ಮ ತಂಡ ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.ಈ ಯಶಸ್ಸಿಗೆ ಪೋಷಕರು ಹಾಗೂ ಶಾಲೆಯ ಶಿಕ್ಷಕರಿಂದ.ಮತ್ತು ತರಬೇತುದಾರರ ಎಲ್ಲರ ಮಾರ್ಗದರ್ಶನ ಮತ್ತು ಸಹಕಾರದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಲು ಸಾಧ್ಯವಾಗಿದೆ ನಮ್ಮ ತಂಡದ ಎಲ್ಲಾ ಸದಸ್ಯರು ಈಗಾಗಲೇ ಫುಟ್ ಬಾಲ್ ಕ್ರೀಡೆಯಲ್ಲಿ ಪೂರ್ವಭ್ಯಾಸ ಮಾಡಿ ತಯಾರಿ ಮಾಡಿಕೊಂಡಿದ್ದು ರಾಜ್ಯಮಟ್ಟದಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ವಿಶ್ವಾಸವಿದೆ ಎಂದು ತಿಳಿಸಿದರು.
ಬೆಳಗೆರೆ ಬಿ ಸೀತಾರಾಮ ಶಾಸ್ತ್ರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ನೇಹ ಮಾತನಾಡಿ ಪಾಠದಷ್ಟೇ ಕ್ರೀಡೆಗಳು ಮಹತ್ವ ನೀಡುತ್ತಿರುವುದು ಸಂತಸದ ವಿಚಾರ ಈ ಕ್ರೀಡೆಗೆ ಸಹಕಾರ ನೀಡಿದಂತಹ ಕಾಲೇಜಿನ ಪ್ರಾಚಾರ್ಯರಿಗೂ ಉಪನ್ಯಾಸಕರಿಗೂ ಎಲ್ಲರಿಗೂ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ರಾಜ್ಯಮಟ್ಟದಲ್ಲೂ ಜಯಶೀಲರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುತ್ತೇನೆ ಎಂಬ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ವಿವಿಧ ಕಾಲೇಜಿನ ಕ್ರೀಡಾಪಟು ವಿದ್ಯಾರ್ಥಿನಿಯರಾದ,ಮಹಾಲಕ್ಷ್ಮಿ ,ಸ್ನೇಹ, ಅಮೂಲ್ಯ,ಸಂಗೀತ,ವಾಣಿಶ್ರೀ,ಪಲ್ಲವಿ, ಯಶಸ್ವಿನಿ ಅಕ್ಷಿತಾ ಸುಪ್ರೀತಾ ಸೇರಿದಂತೆ ಕ್ರೀಡಾಪಟುಗಳು ಇದ್ದರು

ಈ ಸಂದರ್ಭದಲ್ಲಿ ಕ್ರೀಡಾಪಟುಗಳು ಹಾಗೂ ವೀರ ಶಾಲೆಗಳ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *