ಚಳ್ಳಕೆರೆ ಜನಧ್ವನಿ ವಾರ್ತೆ ಡಿ.17. ಸರಕಾರಿ ನೌಕರನೊಬ್ಬ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ. ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಭೂಮಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿ ಈಗ ಚುನಾವಣೆ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುರುಲಿಂಗಪ್ಪ(52) ವಾಲ್ಮೀಕಿ ನಗರದ ಮನೆಯಲ್ಲಿ ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ.
ತಾಲ್ಲೂಕಿನ ತಿಮ್ಮಪ್ಪಯ್ಯ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿ ಪತ್ನಿ ವಿಜಯಕಲಾ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಾವನಾ, ಮಾನ್ಯ ಎಂಬ ಪುತ್ರಿಯರಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್ ಐ ಶಿವರಾಜ್ ಹಾಗೂ ಕಸಬಾ ಕಂದಾಯ ನಿರೀಕ್ಷಕ ಲಿಂಗೇಗೌಡ ಭೇಟಿ ನೀಡಿದ್ದು ಪೋಲಿಸ್ ತನಿಖೆಯಿಂದ ಆತ್ಮಹತ್ಯೆಯ ನಿಖರವಾದ ಮಾಹಿತಿ ಬಯಲಾಗಬೇಕಾಗಿದೆ .
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments