ಹಿರಿಯೂರು :
ನಗರದ ನೆಹರು ಮೈದಾನದಲ್ಲಿ ಡಿಸೆಂಬರ್ 21 ಹಾಗೂ 22 ರಂದು ನಡೆಯಲಿರುವ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ನಿರುದ್ಯೋಗಿ ಯುವಕ ಯುವತಿಯರು ಭಾಗವಹಿಸುವ ಮೂಲಕ ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂಬುದಾಗಿ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್ ರವರು ಮನವಿ ಮಾಡಿದರು.
ನಗರದ ಶಾಸಕರ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಬೃಹತ್ ಉದ್ಯೋಗಮೇಳ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ 60 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 50 ಸಾವಿರಕ್ಕೂ ಹೆಚ್ಚು ಜನರು ಉದ್ಯೋಗ ಅವಕಾಶಗಳನ್ನು ಪಡೆಯಬಹುದಾಗಿದೆ, ತಾಲ್ಲೂಕಿನಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಬೇಕೆಂಬ ಉದ್ದೇಶದಿಂದ ಉದ್ಯೋಗಮೇಳ ಹಮ್ಮಿಕೊಳ್ಳಲಾಗಿದ್ದು, ಯುವಜನಾಂಗ ಭಾಗವಹಿಸಬೇಕು ಎಂಬುದಾಗಿ ಅವರು ಹೇಳಿದರು.
ಡಿಸೆಂಬರ್ 22 ರಂದು ಸಂಜೆ ಗಂಗಾವತಿ ಪ್ರಾಣೇಶ್ ಹಾಗೂ ತಂಡದಿಂದ ನಗೆಹಬ್ಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ತಾಲ್ಲೂಕಿನ ಸಮಸ್ತ ನಾಗರೀಕರೂ ಈ ಉದ್ಯೋಗ ಮೇಳ ಹಾಗೂ ನಗೆಹಬ್ಬ ಈ ಎರಡೂ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ಅವರು ಮನವಿ ಮಾಡಿದರು.
ಈ ಸಭೆಯಲ್ಲಿ ನಗರಸಭೆ ಸದಸ್ಯರುಗಳಾದ ಸಣ್ಣಪ್ಪ, ಮಹೇಶ್ ಪಲ್ಲವ, ಬಾಲಕೃಷ್ಣ, ಸರವಣ, ಚಿರಂಜೀವಿ, ಮುಖಂಡರುಗಳಾದ ಎಂ.ಒ.ಮಂಜುನಾಥ್, ಲೋಕೇಶ್, ಮಂಜುಳಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ತಾಲ್ಲೂಕಿನ ನಿರುದ್ಯೋಗಿ ಯುವಕ ಯುವತಿಯರುಗಳು ಉದ್ಯೋಗಮೇಳದ ಸದುಪಯೋಗವನ್ನ ಪಡೆದುಕೊಳ್ಳಿ ರಾಜ್ಯ ಪ್ರವರ್ಗ-1ರ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಮನವಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments