ಹಿರಿಯೂರು :
ತಾಲ್ಲೂಕಿನ ಪ್ರತಿ ಮನೆಮನೆಗೂ ಶುದ್ದ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಸರ್ಕಾರದ ವತಿಯಿಂದ ಜಲಜೀವನ್ ಮಿಷನ್ ಯೋಜನೆ ರೂಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ಹೇಳಿದರು.
ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿ ಮನೆಮನೆನಲ್ಲಿ ಸಂಪರ್ಕ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ತಾಲ್ಲೂಕಿನ ವಾಣಿವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯ ತಾಲ್ಲೂಕಿಗೆ ಪ್ರಕೃತಿ ಕೊಟ್ಟಿರುವ ವರದಾನವಾಗಿದ್ದು, ಪ್ರತಿ ಮನೆಗೂ ಶುದ್ದ ಕುಡಿಯುವ ನೀರು, ಕೆರೆಗಳಿಗೆ ಶಾಶ್ವತ ನೀರಾವರಿ, ವೇದಾವತಿ ಸುವರ್ಣಮುಖಿ ನದಿ ಪಾತ್ರದಲ್ಲಿ ಸರಣಿ ಚೆಕ್ ಡ್ಯಾಂ ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಲಾಗುವುದು ಎಂದರು.
ಧರ್ಮಪುರ ಹೋಬಳಿ ಹಾಗೂ ಜನರ ಶತಮಾನದ ಬೇಡಿಕೆಯಾದ ಫೀಡರ್ ನಾಲೆ ಕಾಮಗಾರಿ ಪ್ರಗತಿಯಲ್ಲಿದ್ದು ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಿ, ಏಳು ಕೆರೆಗಳಿಗೆ ನೀರು ತುಂಬಿಸಲಾಗುವುದು, ಹಂತಹಂತವಾಗಿ ಧರ್ಮಪುರ ಐಮಂಗಳ ಹೋಬಳಿ ವ್ಯಾಪ್ತಿಯ ಕೆರೆಗಳ ಪುನಶ್ಚೇತನ ಹಾಗೂ ನೀರು ತುಂಬಿಸಲು ಯೋಜನೆ ರೂಪಿಸಲಾಗುವುದು ಎಂಬುದಾಗಿ ಹೇಳಿದರು .
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಕೆಂಪಣ್ಣ, ಚಿಕ್ಕೇಗೌಡ, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್ ಬಾಬು, ಈರಲಿಂಗೇಗೌಡ, ಶ್ರವಣಗೆರೆ ಚಂದ್ರು, ಬಂಡೀಗೌಡ, ನಟರಾಜ್, ಭೂತೇಶ್, ನಾಗರಾಜಪ್ಪ, ರಂಗಸ್ವಾಮಿ, ಜುಂಜೇಗೌಡ, ಮಧುಸೂದನ್, ಚಿದಾನಂದ್ ಇತರರು ಉಪಸ್ಥಿತರಿದ್ದರು.
ತಾಲ್ಲೂಕಿನ ಪ್ರತಿ ಮನೆಮನೆಗೂ ಶುದ್ದ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಜಲಜೀವನ್ ಮಿಷನ್ ಯೋಜನೆ ರೂಪಿಸಲಾಗಿದೆ : ಸಚಿವ ಡಿ.ಸುಧಾಕರ್
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments