ತಾಲ್ಲೂಕಿನ ಹತ್ತುಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ತರಗತಿಗಳನ್ನು ಆರಂಭಿಸಲು ಇಲಾಖೆ ಅನುಮತಿ ನೀಡಿದೆ : ಬಿಇಓ ಸಿ.ಎಂ. ತಿಪ್ಪೇಸ್ವಾಮಿ

by | 20/06/24 | ಶಿಕ್ಷಣ


ಹಿರಿಯೂರು:
ತಾಲ್ಲೂಕಿನಲ್ಲಿ ಈಗಾಗಲೇ 12 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ತರಗತಿಗಳು ನಡೆಯುತ್ತಿದ್ದು, ಈ ವರ್ಷದಿಂದ ಮತ್ತೆ ಹೆಚ್ಚುವರಿಯಾಗಿ ಹತ್ತು ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ತರಗತಿ ಪ್ರಾರಂಭಿಸಲು ಇಲಾಖೆ ಅನುಮತಿ ನೀಡಿದೆ ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ. ತಿಪ್ಪೇಸ್ವಾಮಿ ತಿಳಿಸಿದರು.
ನಗರದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಬುಧವಾರದಂದು ಇಂಗ್ಲೀಷ್ ಮಾಧ್ಯಮ ಮಂಜೂರಾಗಿರುವ 10 ಶಾಲೆಗಳ ಮುಖ್ಯ ಶಿಕ್ಷಕರುಗಳಿಗೆ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಹಿಂದಿನ ವರ್ಷ ಮರಡಿಹಳ್ಳಿ, ಹೊಸಯಳನಾಡು, ಯರಬಳ್ಳಿ, ಹಿರಿಯೂರು ನಗರದ ಬಸ್ ನಿಲ್ದಾಣ ಶಾಲೆ, ನೆಹರು ಮೈದಾನ ಮತ್ತು ಆಜಾದ್ ನಗರ, ಹರಿಯಬ್ಬೆ, ಆದಿವಾಲ, ಮಸ್ಕಲ್, ಮ್ಯಾಕ್ಲೂರಹಳ್ಳಿ, ಧರ್ಮಪುರ, ರಂಗೇನಹಳ್ಳಿಗಳಿಗೆ ಇಂಗ್ಲೀಷ್ ಮಾಧ್ಯಮ ಮಂಜೂರಾಗಿತ್ತು.
ಈ ವರ್ಷ ತಾಲ್ಲೂಕಿನ ಜವಗೊಂಡನಹಳ್ಳಿ, ಸೂರಪ್ಪನಹಟ್ಟಿ, ಬಡಗೊಲ್ಲರಹಟ್ಟಿ, ವೇಣಕಲ್ಲುಗುಡ್ಡ, ಕೋಡಿಹಳ್ಳಿ, ಭರಂಪುರ, ಹಿರಿಯೂರು ಪಟ್ಟಣದ ಗೋಪಾಲಪುರ ಬಡಾವಣೆಯ ಶಾಲೆ, ಸೊಂಡೆಕೆರೆ ಮತ್ತು ಹೂವಿನಹೊಳೆ ಗ್ರಾಮಗಳಲ್ಲಿ ಇಂಗ್ಲೀಷ್ ಮಾಧ್ಯಮಕ್ಕೆ ಅನುಮತಿ ದೊರೆತಿದೆ.
ಈ ತಕ್ಷಣದಿಂದ ಒಂದನೇ ತರಗತಿಯಲ್ಲಿ ಮಾತ್ರ ಈ ವರ್ಷಕ್ಕೆ ಇಂಗ್ಲೀಷ್ ಮಾಧ್ಯಮ ತರಗತಿ ಪ್ರಾರಂಭಿಸಬೇಕು.ಈ ಸಂಬಂಧ ಇಲಾಖೆ ಸೂಚನೆಯಂತೆ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು, ಇಂಗ್ಲೀಷ್ ಮಾಧ್ಯಮ ಆರಂಭವಾಗಿರುವ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕು. ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳಕ್ಕೆ ಶಿಕ್ಷಕರು ಮುತುವರ್ಜಿ ವಹಿಸಬೇಕು. ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಬೇಕು ಎಂಬುದಾಗಿ ಅವರು ತಾಕೀತು ಮಾಡಿದರು.
ಈ ಸಭೆಯಲ್ಲಿ ಬಿಆರ್ ಸಿ ತಿಪ್ಪೇರುದ್ರಪ್ಪ, ನೋಡಲ್ ಅಧಿಕಾರಿ ಸವಿತಾ, ಸಿಆರ್ಪಿಗಳಾದ ಜಾವೇದ್ ಬಾಷಾ, ಯೋಗೇಶ್, ಚನ್ನಕೇಶವ ಮೂರ್ತಿ, ಮಂಜುನಾಥ್ ಹಾಗೂ ಇಂಗ್ಲೀಷ್ ಮಾಧ್ಯಮ ಮಂಜೂರಾಗಿರುವ 10 ಶಾಲೆಗಳ ಮುಖ್ಯ ಶಿಕ್ಷಕರುಗಳು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page