ಚಿತ್ರದುರ್ಗ ನ.10:
ಸರ್ಕಾರೇತರ ಸಂಸ್ಥೆಗಳು ಆರೋಗ್ಯ ಯೋಜನೆಗಳು ಮತ್ತು ಸಮುದಾಯದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.
ನಗರದ ದಾವಣಗೆರೆ ರಸ್ತೆಯ ಹೊರವಲಯದ ವಿಮುಕ್ತಿ ವಿದ್ಯಾ ಸಂಸ್ಥೆಯ ದಮ್ಮ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ವಿಮುಕ್ತಿ ವಿದ್ಯಾ ಸಂಸ್ಥೆ ಮತ್ತು ಬಸವೇಶ್ವರ ವಿದ್ಯಾ ಸಂಸ್ಥೆ ಸಹಯೋಗದೊಂದಿಗೆ ವಿಶೇಷ ಚೇತನ ಮಾನಸಿಕ ಅಸ್ವಸ್ಥತೆ ಇರುವ ಮಕ್ಕಳಿಗೆ ಆರೋಗ್ಯ ತಪಾಸಣೆ ಹಾಗೂ ಸರ್ಕಾರೇತರ ಸಂಸ್ಥೆಯ ಸದಸ್ಯರುಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರೇತರ ಸಂಸ್ಥೆಗಳ ಸದಸ್ಯರು ಆರೋಗ್ಯ ಇಲಾಖೆಯ ಯೋಜನೆಗಳ ಅರಿವು ಪಡೆದು ಆರೋಗ್ಯ ಯೋಜನೆಗಳು ಮತ್ತು ಸಮುದಾಯದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸಿ ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಮಾತನಾಡಿ, ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮದ ಅಡಿಯಲ್ಲಿ 0- 18 ವರ್ಷದ ವಯೋಮಾನದ ಎಲ್ಲಾ ಮಕ್ಕಳಿಗೂ ಉಚಿತ ಆರೋಗ್ಯ ತಪಾಸಣೆ ನಡೆಸಲು ತಾಲೂಕಿನಲ್ಲಿ ಎರಡು ವೈದ್ಯಕೀಯ ತಂಡಗಳನ್ನು ರಚಿಸಲಾಗಿದೆ. ತಾಲೂಕಿನ ಎಲ್ಲಾ ಗ್ರಾಮಗಳಿಗೂ ಸಂಚರಿಸಿ ಅಂಗನವಾಡಿ ಮತ್ತು ಶಾಲಾ ಮಕ್ಕಳಲ್ಲಿ ಕಂಡುಬರುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ ಬೆಳವಣಿಗೆ ನ್ಯೂನ್ಯತೆ ಅಂಗವಿಕಲತೆ ದೃಷ್ಟಿ ದೋಷ ಶ್ರವಣದೋಷ ಇತರೆ ಕಾಯಿಲೆಗಳನ್ನು ಗುರುತಿಸಿ ಉನ್ನತ ಮಟ್ಟದ ಚಿಕಿತ್ಸೆಗೆ ಹೈಟೆಕ್ ಆಸ್ಪತ್ರೆಗಳಿಗೆ ನಿರ್ದೇಶಿಸಿ ಉಚಿತ ಚಿಕಿತ್ಸೆ ಆರೈಕೆಯನ್ನು ನೀಡಲಾಗುತ್ತಿದೆ ಎಂದರು.
ರಾಷ್ಟ್ರೀಯ ಅಂದತ್ವ ನಿವಾರಣ ಕಾರ್ಯಕ್ರಮದ ಅಡಿಯಲ್ಲಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಸಾರ್ವಜನಿಕರ ದೃಷ್ಟಿ ದೋಷಗಳನ್ನು ಪತ್ತೆ ಹಚ್ಚಿ ಅಗತ್ಯವಿರುವವರಿಗೆ ಕನ್ನಡಕ ವಿತರಣೆ ಶಸ್ತ್ರ ಚಿಕಿತ್ಸೆ ನೀಡಿ ದೃಷ್ಟಿ ದೋಷ ನಿವಾರಣಾ ಕಾರ್ಯಕ್ರಮವನ್ನು ಉಚಿತವಾಗಿ ನೀಡಲಾಗುತ್ತಿದೆ. ರಾಷ್ಟ್ರೀಯ ಕಿಶೋರಿ ಸ್ವಾಸ್ಥ್ಯ ಕಾರ್ಯಕ್ರಮದ ಅಡಿ ಹದಿಹರಿಯದ ಹೆಣ್ಣು ಮಕ್ಕಳಲ್ಲಿ ಬರುವ ತೊಂದರೆಗಳಿಗೆ ಆಪ್ತ ಸಮಾಲೋಚನೆ ಚಿಕಿತ್ಸೆಯ ಮೂಲಕ ಉಚಿತವಾಗಿ ಆರೋಗ್ಯ ಸೇವೆ ನೀಡಲಾಗುತ್ತಿದೆ. ಅಲ್ಲದೆ ಕ್ಷಯರೋಗ ಕುಷ್ಟರೋಗ ಇತರೆ ಸಾಂಕ್ರಾಮಿಕ ರೋಗಗಳನ್ನ ಪತ್ತೆ ಹಚ್ಚಿ ಉಚಿತ ಚಿಕಿತ್ಸೆಯನ್ನೂ ಸಹ ನೀಡಲಾಗುತ್ತಿದೆ. ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದ ಅಡಿಯಲ್ಲಿ ಗರ್ಭಿಣಿ ಆರೈಕೆ ಬಾಣಂತಿ ಆರೈಕೆ ಮಕ್ಕಳಿಗೆ ಲಸಿಕೆ ಉಚಿತವಾಗಿ ನೀಡಲಾಗುತ್ತಿದೆ ಆಯುμÁ್ಮನ್ ಭವ ಪ್ರಧಾನ ಮಂತ್ರಿ ಜನ ಆರೋಗ್ಯ ಕಾರ್ಯಕ್ರಮದ ಅಡಿ ರೂ. 5 ಲಕ್ಷಗಳವರೆಗೆ ಉನ್ನತ ಮಟ್ಟದ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಸಹ ಬರಿಸಲಾಗುತ್ತಿದೆ. ಸರ್ಕಾರೇತರ ಸಂಸ್ಥೆಗಳು ರಾಷ್ಟ್ರೀಯ ಆರೋಗ್ಯ ಯೋಜನೆಗಳ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸಿ ಸದುಪಯೋಗ ಪಡಿಸಿಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಮೂಗಪ್ಪ, ಬಿ.ಜಾನಕಿ, ಕ್ಯಾಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಚಿನ್, ರಾಷ್ಟ್ರ್ರೀಯ ಬಾಲಸ್ವಾಸ್ಥ್ಯ ತಂಡದ ವೈದ್ಯಾಧಿಕಾರಿ ಡಾ.ವಾಣಿ, ಆಯುμï ಇಲಾಖೆಯ ಡಾ.ರೇμÁ್ಮ, ನೇತ್ರಾಧಿಕಾರಿ ಪೂಜಾ, ಶುಶ್ರೂಷಕಿ ಅಕ್ಷತಾ, ವಿಮುಕ್ತಿ ವಿದ್ಯಾ ಸಂಸ್ಥೆಯ ಅನ್ನಪೂರ್ಣ ವಿಶ್ವಸಾಗರ್, ಬಸವೇಶ್ವರ ವಿದ್ಯಾ ಸಂಸ್ಥೆಯ ಶಂಕರಪ್ಪ, ಫಲಾನುಭವಿಗಳು ಉಪಸ್ಥಿತರಿದ್ದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಸರ್ಕಾರೇತರ ಸಂಸ್ಥೆಗಳು ಸಮುದಾಯದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments