ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಮಕ್ಕಳಿಗೆ ಲಸಿಕೆಗಳು ಎದೆ ಹಾಲಿನಷ್ಟೇ ಮಹತ್ವವಾದುದು

by | 12/10/23 | ಆರೋಗ್ಯ


ಚಿತ್ರದುರ್ಗ ಅ.12:
ಮಕ್ಕಳಿಗೆ ಲಸಿಕೆಗಳು ಎದೆ ಹಾಲಿನಷ್ಟೇ ಮಹತ್ವವುಳ್ಳದ್ದಾಗಿದೆ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಹೇಳಿದರು.
ಇಲ್ಲಿನ ಜೆ.ಜೆಹಟ್ಟಿ ಅಂಗನವಾಡಿ “ಎ” ಕೇಂದ್ರದಲ್ಲಿ ಪರಿಣಾಮಕಾರಿ ಮಿಷನ್ ಇಂದ್ರಧನುμï ಲಸಿಕಾ ಅಭಿಯಾನದ ಮೂರನೇ ಸುತ್ತಿನ ನಾಲ್ಕನೇ ದಿನದ ಲಸಿಕಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಕೊಡಿಸಿ. 12 ಮಾರಕ ರೋಗಗಳಿಂದ ರಕ್ಷಣೆ ನೀಡಿ. ಮಕ್ಕಳಿಗೆ ಲಸಿಕೆಗಳು ಎದೆ ಹಾಲಿನಷ್ಟೇ ಮಹತ್ವವುಳ್ಳದ್ದಾಗಿದೆ. ಬಿಟ್ಟು ಹೋಗಿರುವ ಲಸಿಕಾ ದಿನಚರಿ ಸರಿಪಡಿಸಿಕೊಳ್ಳಿ ಎಂದು ಹೇಳಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಮಾತನಾಡಿ, ಅಂತರದ ಹೆರಿಗೆ ಕುಟುಂಬ ಯೋಜನೆ ಅನುಸರಿಸಿಕೊಳ್ಳುವುದು ಕುಟುಂಬ ಯೋಜನೆಯಲ್ಲಿ ಪುರುಷರ ಸಹಭಾಗಿತ್ವ ಮಹತ್ವವಾಗಿರುತ್ತದೆ ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್ ಮಾತನಾಡಿ, ಸ್ವಚ್ಛತೆ ಕಾಪಾಡಿ ಸಾಂಕ್ರಾಮಿಕ ರೋಗಗಳಾದ ಕರುಳು ಬೇನೆ, ಅತಿಸಾರಬೇದಿ, ನಿರ್ಜಲೀಕರಣವಾಗದಂತೆ ನಿಮ್ಮ ಮಕ್ಕಳನ್ನು ಸಂರಕ್ಷಿಸಿ ಎಂದರು.
ಅಂಗನವಾಡಿ ಕೇಂದ್ರಗಳಲ್ಲಿ ಓಆರ್‍ಎಸ್ ಪಟ್ಟಣ ಬಳಕೆ ಮಾಡಿ, ಘನ ತ್ಯಾಜ್ಯ ವಸ್ತುಗಳ ಸರಿಯಾದ ಜಾಗದಲ್ಲಿ ವಿಲೇವಾರಿ ಮಾಡಿ, ಸೊಳ್ಳೆಗಳು ಸಂತಾನೋತ್ಪತ್ತಿ ಆಗದಂತೆ ನೋಡಿಕೊಳ್ಳಿ ಎಂದರು.
ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಎಂ.ಬಿ.ವಿನ್ಸಿ ಅವರು 20 ಮಕ್ಕಳಿಗೆ ವಿವಿಧ ಹಂತದ ಲಸಿಕೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಗರ್ಭಿಣಿ ಹೆಣ್ಣು ಮಕ್ಕಳಿಗೆ ಪೌಷ್ಟಿಕ ಆಹಾರ ಸೇವನೆ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಫಾತಿಮಾ, ಅಂಗನವಾಡಿ ಕಾರ್ಯಕರ್ತೆ ಹೇಮ ಇದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *