ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ.ಕಲಮರಹಳ್ಳಿ ಮಲ್ಲಿಕಾರ್ಜುನ ಆಯ್ಕೆ

by | 23/02/23 | ಸಾಂಸ್ಕೃತಿಕ

ಚಳ್ಳಕೆರೆ ಫೆ.23 ದಿನಾಂಕ 12.03.2023ನೇ ಭಾನುವಾರ ದಂದು ನಗರದಲ್ಲಿ ನಡೆಯುವ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ನಾಡಿನ ಜಾನಪದ ಹಾಗೂ ಬುಡಕಟ್ಟು ಸಮುದಾಯದ ಸಾಹಿತ್ಯ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಜಾನಪದ ವಿದ್ವಾಂಸ ಡಾ. ಕಲಮರಹಳ್ಳಿ ಮಲ್ಲಿಕಾರ್ಜುನರವರನ್ನು ಚಳ್ಳಕೆರೆ ನಾಲ್ಕನೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಘೋಷಿಸಿದರು.

ಸಮ್ಮೇಳನದ ಪ್ರಯುಕ್ತ ಈಗಾಗಲೆ ೨-೩ ಬಾರಿ ಕರ‍್ಯಕಾರಿ ಸಮಿತಿ ಸಭೆ ನಡೆಸಲಾಗಿದೆ. ಪ್ರಚಾರ ಸಮಿತಿ, ಸ್ವಾಗತ, ಹಣಕಾಸು, ಕರ‍್ಯಕ್ರಮ ನಿರ್ವಹಣೆ, ಆಹಾರ, ವೇದಿಕೆ ಹೀಗೆ ವಿವಿಧ ಸಮಿತಿ ರಚನೆಯ ಮೂಲಕ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಸಹಕಾರ ಹಾಗೂ ಆರ್ಥಿಕ ನೆರವು ನೀಡುವಂತೆ ಸಂಘ-ಸAಸ್ಥೆ, ತಾಲ್ಲೂಕು ಮಟ್ಟದ ಅಧಿಕಾರಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಖ್ಯಾತ ಕಥೆಗಾರ ತಿಪ್ಪಣ್ಣ ಬಿ.ಮರಿಕುಂಟೆ, ಸಮ್ಮೇಳನದ ನೆನಪಿಗೆ ತಾಲ್ಲೂಕು ಸಾಹಿತ್ಯ, ಸಂಸ್ಕೃತಿ, ಕಲೆ, ಜಾನಪದ, ಕೃಷಿ ಹಾಗೂ ರಾಜಕೀಯ ಅಂಶಗಳನ್ನೊಳಗೊAಡ ಸ್ಮರಣ ಸಂಚಿಕೆ ಪುಸ್ತಕವನ್ನು ತಪ್ಪದೆ ಹೊರತರಬೇಕು ಎಂದು ಕಸಾಪ ತಾಲ್ಲೂಕು ಅಧ್ಯಕ್ಷರಲ್ಲಿ ಮನವಿ ಮಾಡಿದರು.

ತಾಲೂಕು ಸಮೇಳನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಿವೃತ್ತ ಪ್ರಾಚಾರ್ಯ. ಸಾಹಿತಿ ಡಾ ಕಲಮರಹಳ್ಳಿ ಮಲ್ಲಿಕಾರ್ಜುನ

ಬಂಡಾಯ ಸಾಹಿತಿ ಡಾ.ಸಿ.ಶಿವಲಿಂಗಪ್ಪ, ಸೂಕ್ತವಾದ ವ್ಯಕ್ತಿಯನ್ನು ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಕಸಾಪದ ಕೆಲಸ ಶ್ಲಾಘನೀಯವಾದುದು.
ಭಾಷಣದ ಪ್ರತಿ ಸಂಕ್ಷಿಪ್ತವಾಗಿರಬೇಕು. ಸಮ್ಮೇಳನದ ಅಧ್ಯಕ್ಷರ ಭಾಷಣಕ್ಕೆ ಯಾವುದೇ ರೀತಿಯ ಕಡಿವಾಣ ಹಾಕಬಾರದು.
ತಾಲ್ಲೂಕಿನ ಮೌಖಿಕ-ಶಿಷ್ಟ ಪರಂಪರೆಯ ಸಾಹಿತ್ಯ, ಮಹಿಳಾ ಚಿಂತನೆ, ಕೃಷಿ ಕ್ಷೇತ್ರದ ಬದಲಾವಣೆ ದೂರದೃಷ್ಟಿ ಚಿಂತನೆಯ ಗಂಭೀರ ಗೋಷ್ಠಿಗಳು ಆಯೋಜನೆ ಮಾಡಬೇಕು ಎಂದು ಸಲಹೆ ನೀಡಿದರು.

ಸಮ್ಮೇಳನದಲ್ಲಿ ಕಸಾಪ ಹೋಬಳಿ ಘಟಕದ ಅಧ್ಯಕ್ಷ ದಯಾನಂದ, ಗೌರವ ಸಂಚಾಲಕ ಯು.ಎಸ್.ವಿಷ್ಣುಮೂರ್ತಿರಾವ್, ಕಸಾಪ ತಾಲ್ಲೂಕು ಘಟಕದ ಪ್ರಧಾನ ಕರ‍್ಯದರ್ಶಿ ಉಪ್ಪಾರಹಟ್ಟಿ ಚಿತ್ತಯ್ಯ, ನಿರ್ದೇಶಕ ಡಾ.ಜಿ.ವಿ.ರಾಜಣ್ಣ, ಶಿವಲಿಂಗಪ್ಪ ಸಮ್ಮೇಳನದ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಜೆ.ತಿಪ್ಪೇಸ್ವಾಮಿ, ರನ್ಸಿಪಾಲ್ ಆನಂದ್ ಹೋಬಳಿ ಘಟಕದ ನಿರ್ದೇಶಕ ಮೃತ್ಯಂಜಯ ಇದ್ದರು. ಇನ್ನೂ ಅನೇಕ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು

Latest News >>

ಮಹಾವೀರರ ತತ್ವ ಆದರ್ಶಗಳು ಸರ್ವಕಾಲಕ್ಕೂ ಪ್ರಸ್ತುತ: ತಹಸಿಲ್ದಾರ್ ರೆಹಾನ್ ಪಾಷ

ಚಳ್ಳಕೆರೆ: ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಜೈನ ಸಮುದಾಯ ವತಿಯಿಂದ ಇಂದು ಮಹಾವೀರ  ಜಯಂತಿಯನ್ನು ಲೋಕಸಭಾ ಚುನಾವಣೆ...

ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ನ ಸ್ಥಳಕ್ಕೆಮುಖ್ಯಕಾರ್ಯದರ್ಶಿಯಾದ ಅಂಜುಮ್ ಫರ್ವೇಜ್ ಭೇಟಿ

ಹಿರಿಯೂರು: ವಾಣಿವಿಲಾಸ ಸಾಗರದ ಐಮಂಗಲ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ಸ್ಥಳಕ್ಕೆ...

ಸಡಗರ ಸಂಭ್ರಮದಿಂದ ಜರುಗಿದ ಶ್ರೀರಾಮನವಮಿ- ಶ್ರೀರಾಮ ಭಕ್ತರಿಂದ ಪಾನಕ. ಕೋಸಂಬರಿ ವಿತರಣೆ- ವಿಶೇಷ ಪೂಜೆ.

ಚಳ್ಳಕೆರೆ ಜನಧ್ವನಿ ವಾರ್ತೆ ಏ17. ಶ್ರೀರಾಮನವಮಿ ಅಂಗವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶ್ರೀರಾಮ ಜಪದೊಂದಿಗೆ ಸಡಗರ ಸಂಭ್ರಮದಿಂದ...

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡವಂತ ಹುನ್ನಾರ ನಡೆಸಲಾಗಿದೆ ಎಂಬುದಾಗಿ ರೈತ ಮುಖಂಡ :ಕಸವನಹಳ್ಳಿ ರಮೇಶ್ ಆರೋಪ

ಹಿರಿಯೂರು: ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ ಹಾಗೂ ಭದ್ರಾ...

ಬೆಳೆವಿಮೆ ಪರಿಹಾರದಲ್ಲಿ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ.ಮರುಪರಿಶೀಲಿಸಿ ಹೆಚ್ಚುವರಿ ಪರಿಹಾರ ಕೊಡಿಸಲು ಪ್ರಯತ್ನ: ಎಚ್.ಎನ್.ಶಿವೇಗೌಡ

ಹಿರಿಯೂರು: ಬೆಳೆವಿಮೆ ಪರಿಹಾರದಲ್ಲಿ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಮರುಪರಿಶೀಲಿಸಿ ಹೆಚ್ಚುವರಿ ಪರಿಹಾರ ಕೊಡಿಸಲು...

ಯುಗಾದಿ ಹಬ್ಬಕ್ಕೆ ಬಂದವರಿಗೆ ಬೆಂಗಳೂರಿಗೆ ತೆರಳಲು ಬಸ್ಸಿಗಾಗಿ ಸಾರಿಗೆ ಬಸ್ಸು ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು.

ಚಳ್ಳಕೆರೆ ಏ11 ಯುಗಾದಿ ಹಬ್ಬ ಮುಗಿಸಿಕೊಂಡು ಮತ್ತೆ ಬೆಂಗಳೂರಿಗೆ ತೆರಳಲು ಸಾರಿಗೆ ಬಸ್ಸುಗಳ ವ್ಯವಸ್ಥೆಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ....

ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಅಗತ್ಯವಸ್ತುಗಳ ಖರೀದಿ ಬಲು ಜೋರು..

ಚಳ್ಳಕೆರೆ ಚಳ್ಳಕೆರೆ ಏ.8 ಅಗತ್ಯ ವಸ್ತುಗಳ ಬೆಳೆ ಏರಿಕೆ , ಬಿಸಿಲಿನ ತಾಪ ಹಾಗೂ ಬರಗಾಲದ ನಡುವೆಯೂ ರಂಜಾನ್ ಹಾಗೂ ಯುಗಾದಿ ಹಬ್ಬದ ಖರೀದಿ ಭರಾಟೆ...

ಯುಗಾದಿ ಹಾಗೂ ರಂಜಾನ್ ಹಬ್ಬಗಳನ್ನು‌ ಶಾಂತಿ‌ಸೌಹಾರ್ಧತೆಯಿಂದ ಆಚರಿಸಿ ಠಾಣಾಧಿಕಾರಿ ಕೆ.ಕುಮಾರ್.

ಚಳ್ಳಕೆರೆ ಏ.8 ಈ ಬಾರಿ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಒಟ್ಟಾಗಿ ಬಂದಿದ್ದು, ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಠಾಣಾಧಿಕಾರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page