ತಾಲ್ಲೂಕು ಮಟ್ಟದ ಪಿಯು ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್.

by | 07/09/23 | ಕ್ರೇಡೆ


ಚಿತ್ರದುರ್ಗ ಸೆ.7:
ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಮಹಾರಾಣಿ ಸಂಯಕ್ತ ಪದವಿಪೂರ್ವ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಚಿತ್ರದುರ್ಗ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಎರಡು ದಿನಗಳ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಲಾಯಿತು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ನುಡಿಗಳನ್ನು ನುಡಿದರು.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಆರ್.ಪುಟ್ಟಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ಎಸ್. ಸಾಗರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ ಎನ್ನುವ ಮಾತನ್ನು ಕ್ರೀಡಾಪಟುಗಳಿಗೆ ತಿಳಿಸಿದರು.
ಮೊದಲ ದಿನದ ಕ್ರೀಡಾಕೂಟದಲ್ಲಿ ಬಾಲಕ, ಬಾಲಕಿಯರ ಗುಂಪು ಆಟಗಳಾದ ಕೋಕೋ, ಕಬ್ಬಡಿ, ವಾಲಿಬಾಲ್, ಥ್ರೋಬಾಲ್ ಸೇರಿದಂತೆ ವಿವಿಧ ಕ್ರೀಡೆಗಳು ನಡೆದವು.
ಈ ಸಂದರ್ಭದಲ್ಲಿ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಲ್.ರಂಗಪ್ಪ, ಶ್ರೀ ಸತ್ಯನಾರಾಯಣಸ್ವಾಮಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸೂರನಾಯಕ, ಮಹಾರಾಣಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಟಿ.ಜಯಣ್ಣ ಸೇರಿದಂತೆ ಚಿತ್ರದುರ್ಗ ತಾಲ್ಲೂಕಿನ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಅಡಿಯಲ್ಲಿ ಬರುವ ಎಲ್ಲಾ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ವರ್ಗದವರು ಇದ್ದರು.
ಫೋಟೋ ವಿವರ: ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದಲಿ ಬುಧವಾರ ಹಮ್ಮಿಕೊಂಡಿದ್ದ ಚಿತ್ರದುರ್ಗ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಎರಡು ದಿನಗಳ ಕ್ರೀಡಾಕೂಟದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಕ್ರೀಡಾಜ್ಯೋತಿ ಸ್ವೀಕಾರ ಮಾಡಿದರು.

Latest News >>

ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ ಜುಲೈ27: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿAದ ಜೀವನ ಮಾಡುವ...

ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಗೀತ ಸಿಂಚನದಂತಹ ಕಾರ್ಯಕ್ರಮಗಳು ಅತ್ಯಗತ್ಯ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ: ಬಿ.ಎಸ್.ರಘುನಾಥ್

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು...

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page