ತಿಮ್ಮಪ್ಪನ ದರ್ಶನ ಮಾಡಲು ಹೋದ ಬೆಳಗಾವಿ ಮೂಲದ ಐವರು ರಸ್ತೆ ಅಪಘಾತದಲ್ಲಿ ಸಾವು.

by | 15/09/23 | ಅಪಘಾತ


ಹೈದ್ರಾಬಾದ್: ಆಂಧ್ರಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ಬೆಳಗಾವಿ ಐದು ಮಂದಿ ಭಕ್ತರು ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯ ಕೆವಿಪಲ್ಲಿ ತಾಲೂಕಿನ ಮಠಂಪಲ್ಲಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ ,ಬೆಳಗಾವಿ ಜಿಲ್ಲೆಯ ನಿವಾಸಿಗಳು ಕ್ರೂಸರ್ ವಾಹನದ ಮೂಲಕ ತಿರುಪತಿ ಪ್ರವಾಸ ಕೈಗೊಂಡಿದ್ದರು. ಮಠಂಪಲ್ಲಿ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನದಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿ 16 ಜನರು ಪ್ರಯಾಣಿಸುತ್ತಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸಮೀಪದ ರುಯಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಜರುಗಿದೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *