ಹಿರಿಯೂರುನ.5
ತುಮಕೂರು ಜಿಲ್ಲಾ ಆಸ್ಪತ್ರೆಯವರ ಬೇಜಾಬ್ದಾರಿತನ ಹಾಗೂ ನಿರ್ಲಕ್ಷ್ಯದಿಂದಾಗಿ ಒಬ್ಬ ಗರ್ಭಿಣಿ ಮಹಿಳೆ ಮತ್ತು ಅವಳಿಗೆ ಜನಿಸಿದ ಇಬ್ಬರು ಅವಳಿ ಮಕ್ಕಳು ಸಾವನ್ನಪ್ಪಿರುವುದು ನಿಜಕ್ಕೂ ಖಂಡನೀಯ ಎಂಬುದಾಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾದ ಕೆ.ಟಿ.ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ.
ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯ ನೇತೃತ್ವವನ್ನು ವಹಿಸಿ, ಗರ್ಭಿಣಿ ಮಹಿಳೆ ಮತ್ತು ಇಬ್ಬರು ಅವಳಿ ಮಕ್ಕಳ ಸಾವಿಗೆ ಕಾರಣರಾದ ತಪ್ಪಿತಸ್ಥ ಜಿಲ್ಲಾಸ್ಪತ್ರೆ ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ತಾಲ್ಲೂಕು ಶಿರಸ್ತೇದಾರರ ಮೂಲಕ ಸರ್ಕಾರವನ್ನು ಒತ್ತಾಯಿಸಿ,ಅವರು ಮಾತನಾಡಿದರು.
ಹೆರಿಗೆ ನೋವಿನಿಂದ ನರಳುತ್ತಿದ್ದ ಮಹಿಳೆಯನ್ನು ಕೇವಲ ಆರೋಗ್ಯ ಕಾರ್ಡ್ ಮತ್ತು ಆಧಾರ್ ಕಾರ್ಡ್ ಇಲ್ಲವೆಂಬ ಸಣ್ಣ ಕಾರಣದಿಂದ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ, ಮನೆಗೆ ಕಳುಹಿಸಿದ್ದು, ಮನೆಗೆ ಹೋದ ಗರ್ಭಿಣಿ ಮಹಿಳೆಗೆ ಅಧಿಕ ರಕ್ತಸ್ರಾವವಾಗಿ ತಾಯಿ ಮತ್ತು ಅವರ ಇಬ್ಬರು ಅವಳಿ ಮಕ್ಕಳು ಸಾವನಪ್ಪಿದ್ದಾರೆ ಎಂದರಲ್ಲದೆ,
ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ತಾಯಿ ಮತ್ತು ಮಕ್ಕಳ ಸಾವನ್ನಪ್ಪಿರುವುದಲ್ಲದೆ, ಒಂದು ಹೆಣ್ಣುಮಗು ತಾಯಿಯನ್ನು ಕಳೆದುಕೊಂಡು ಅನಾಥವಾಗಿದೆ, ಇದಕ್ಕೆ ಕಾರಣವಾದ ಆಸ್ಪತ್ರೆಯ ತಪ್ಪಿತಸ್ಥ ಅಧಿಕಾರಿಗಳನ್ನು ಈ ಕೂಡಲೇ ಅಮಾನತ್ತುಗೊಳಿಸಬೇಕು, ಮತ್ತು ಈ ಕೂಡಲೇ ಆರೋಗ್ಯ ಸಚಿವರು ರಾಜೀನಾಮೆ ಕೊಡಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾದ ಕೆ.ಟಿ.ತಿಪ್ಪೇಸ್ವಾಮಿ, ನಗರಾಧ್ಯಕ್ಷರಾದ ಡಾ.ಉಮೇಶ್ ಹಾಗೂ ಉಪಾಧ್ಯಕ್ಷರಾದ ಮನ್ಸೂರ್ ಅಲಿ ಖಾನ್ ಮತ್ತು ಪ್ರಧಾನ ಕಾರ್ಯದರ್ಶಿ ಮುಹಿದುಲ್ಲ ಹಾಗೂ ಮಹಿಳಾ ನಗರ ಘಟಕ ಅಧ್ಯಕ್ಷರಾದ ರಾಧಾ, ಚೈತ್ರ ಚಂದ್ರಪ್ಪ, ಎಳನಾಡು ತಿಮ್ಮಾರೆಡ್ಡಿ, ಗೋಪಾಲಪ್ಪ ಸೇರಿದಂತೆ ಎಪಿಪಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ತುಮಕೂರು ಜಿಲ್ಲಾಆಸ್ಪತ್ರೆ ಅಧಿಕಾರಿಗಳನ್ನು ಕೂಡಲೇ ಅಮಾನತ್ತುಗೊಳಿಸುವಂತೆ ಕೆ.ಟಿ.ತಿಪ್ಪೇಸ್ವಾಮಿ ಆಗ್ರಹ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments