ಹೊಳಲ್ಕೆರೆ ನ.29
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಇನೋವಾ ಕಾರ್ ನಲ್ಲಿ ಸಾಗಿಸುತ್ತಿದ್ದ 8 ಕೋಟಿ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬಳಿ ಹೊಳಲ್ಕೆರೆ
ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಚಿತ್ರದುರ್ಗದ ಉದ್ಯಮಿಯೊಬ್ಬರಿಗೆ ಸೇರಿದ ಹಣ ಇದಾಗಿದ್ದು, ಶಿವಮೊಗ್ಗಕ್ಕೆ ಹಣ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಈ ಕುರಿತಾಗಿ ಯಾವುದೇ ದೂರು ದಾಖಲಾಗಿಲ್ಲ. ವಿಚಾರಣೆ ಬಳಿಕ ಕೇಸ್ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
0 Comments