ಹಿರಿಯೂರು
ದಾನಗಳಲ್ಲಿ ಅತ್ಯಂತ ಶ್ರೇಷ್ಠದಾನ ಎಂದರೆ ರಕ್ತದಾನವಾಗಿದ್ದು, ರಕ್ತದಾನ ಮಾಡುವುದರಿಂದ ಸಾಯುವ ಪರಿಸ್ಥಿತಿಯಲ್ಲಿರುವ ವ್ಯಕ್ತಿಯ ಜೀವ ಉಳಿಸುವುದರ ಜೊತೆಗೆ ನಾವು ಆಗಾಗ ರಕ್ತದಾನ ಮಾಡುವುದರಿಂದ ನಮ್ಮ ದೇಹದಲ್ಲಿ ಹೊಸದಾಗಿ ರಕ್ತ ಉತ್ಪತ್ತಿಯಾಗಿ ಉತ್ತಮ ಆರೋಗ್ಯವನ್ನು ಸಹ ಪಡೆಯಬಹುದಾಗಿದೆ ಎಂಬುದಾಗಿ ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ನಾಗೇಶ್ ಹೇಳಿದರು.
ತಾಲ್ಲೂಕಿನ ಯಲ್ಲದಕೆರೆ ಗ್ರಾಮ ಪಂಚಾಯತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಯಲ್ಲದಕೆರೆ ಹಾಗೂ ಲೈಫ್ ಲೈನ್ ರಕ್ತ ನಿಧಿ ಕೇಂದ್ರ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ 53 ಜನರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದ್ದು ಈ ಶಿಬಿರದ ವಿಶೇಷವಾಗಿತ್ತು.
ಈ ಶಿಬಿರದ ನೇತೃತ್ವವನ್ನು ಕೃ.ಪ.ಸ.ಸಂಘ ಅಧ್ಯಕ್ಷರಾದ ಸಿ.ಮಂಜುನಾಥ್ ಯಲ್ಲದಕೆರೆ ವಹಿಸಿದ್ದರು. ಶಿಬಿರದಲ್ಲಿ ಯಲ್ಲದಕೆರೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ನಯನ ರಮೇಶ್, ಸದಸ್ಯ ಧರ್ಮರಾಜ, ಸ್ವತಃ ರಕ್ತದಾನ ಮಾಡಿ ಇತರರಿಗೆ ಮಾದರಿಯಾದರು. ಗ್ರಾಮ ಪಂಚಾಯತಿಯ ಸರ್ವ ಸದಸ್ಯರು ಅಧಿಕಾರಿಗಳು ಯುವಕರು ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೊಳಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments