ದೆಹಲಿಯ ಅಮೃತಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಚಳ್ಳಕೆರೆ ಆರೋಗ್ಯ ನಿರೀಕ್ಷಕರಾದ ಗೀತಾ.

by | 01/11/23 | ಸುದ್ದಿ

ದೆಹಲಿ ಜನಧ್ವನಿ ವಾರ್ತೆ ನ.1.ದೆಹಲಿಯ ಅಮೃತಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ
ಪಾಲ್ಗೊಂಡಿರುವ ಚಳ್ಳಕೆರೆ ಆರೋಗ್ಯ ನಿರೀಕ್ಷಕರಾದ ಗೀತಾ.


ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ “ನನ್ನ ಮಣ್ಣು ನನ್ನ ದೇಶ” ಎಂಬ ಕಾರ್ಯಕ್ರಮದ ಮೂಲಕ ದೇಶದ ಎಲ್ಲಾ ರಾಜ್ಯಗಳ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ, ನಗರಸಭೆ, ಪುರಸಭೆ ಹಾಗೂ ಗ್ರಾಮೀಣ ಪ್ರದೇಶದ ಗ್ರಾಮಪಂಚಾಯಿತಿಗಳಿಂದ ಸಂಗ್ರಹ ಮಾಡಿರುವ ಪವಿತ್ರವಾದ ಮಣ್ಣನ್ನು ದೆಹಲಿಯ ರಾಜಭವನ ಮುಂಭಾಗದಲ್ಲಿರುವ ಅಮೃತ ಕಲಶ ಪ್ರತಿಷ್ಠಾಪನೆ ಮಾಡಿರುವ ಕಾರ್ಯಕ್ರಮಕ್ಕೆ ಸಮರ್ಪಣೆ ಮಾಡಲಾಯಿತು ಎಂಬುದಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಳ್ಳಕೆರೆ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಗೀತ ಜಬಧ್ವನಿ ಡಿಜಿಟಲ್ ಮಾಧ್ಯಕ್ಜೆ ತಿಳಿಸಿದ್ದಾರೆ.
ಚಳ್ಳಕೆರೆ ನಗರಸಭೆ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಅಮೃತ ಕಳಶ ಯಾತ್ರೆಯ ಮೂಲಕ ಚಳ್ಳಕೆರೆ ನಗರ ವತಿಯಿಂದ ಸಂಗ್ರಹಣೆ ಮಾಡಿರುವ ಮಣ್ಣನ್ನು ದೆಹಲಿಯ ರಾಜಭವನ ಮುಂಭಾಗದಲ್ಲಿ ಅಕ್ಟೋಬರ್ 30 ಮತ್ತು 31 ರಂದು ಅಮೃತ ಕಲಶ ಪ್ರತಿಷ್ಠಾಪನೆ ಮಾಡಿರುವ ಕಾರ್ಯಕ್ರಮದಲ್ಲಿ ಅಮೃತವಾಟಿಕ ಎಂಬ ವೀರ ಯೋಧರಿಗೆ ವಂದನಾ ಕಾರ್ಯಕ್ರಮದಲ್ಲಿ ಅರ್ಪಣೆ ಮಾಡಲಾಯಿತು ಎಂಬುದಾಗಿ ಮಾಹಿತಿ ತಿಳಿಸಿದ್ದಾರೆ.
ದೆಹಲಿಯ ಅಮೃತ ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವಆರೋಗ್ಯ ನಿರೀಕ್ಷಕಿ ಗೀತಾರವರು ದೂರದ ದೆಹಲಿಯಿಂದ ವಾಟ್ಸ್ ಆಪ್ ಮೂಲಕ ಜನಧ್ವನಿ ಡಿಜಿಟಲ್ ಮಾಧ್ಯಮಕ್ಕೆ ಪೋಟೋ ಗಳನ್ನು ನೀಡಿದ್ದಾರೆ ತಮ್ಮ ವಿಶಿಷ್ಠ ಅನುಭವಗಳನ್ನು ಸಡಗರ ಸಂಭ್ರಮದಿಂದ ಈ ರೀತಿ ಹಂಚಿಕೊಂಡರು.
ಈ ಅಮೃತ ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮ ನಮ್ಮ ಜೀವಿತ ಅವಧಿಯಲ್ಲಿ ಇದೊಂದು ವಿಶಿಷ್ಠ ಕಾರ್ಯಕ್ರಮವಾಗಿದ್ದು, ಮೈ ರೋಮಾಂಚನಗೊಳಿಸುವ ಅನುಭವವಾಯಿತು, ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ದೇಶ, ಭಾಷೆ, ಗಡಿ, ಜಾತಿ,ಮತಗಳನ್ನು ಮೀರಿ, ಯಾವುದೇ ಬೇಧಭಾವವಿಲ್ಲದೆ ಜನರು ಭಾಗವಹಿಸಿರುವುದು ದೇಶದ ಸೌಹಾರ್ದತೆ ಹಾಗೂ ಐಕ್ಯತೆಯ ಸಂದೇಶವಾಗಿದೆ ಎಂದರಲ್ಲದೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ಅವಕಾಶ ಸಿಕ್ಕಿದ್ದು, ಜನ್ಮಜನ್ಮಾಂತರದ ಪುಣ್ಯ ಎಂಬುದಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page