ದೇವರಾಜ್ ಅರಸ್ ಇವರ ಜನಪರ ಆಡಳಿವನ್ನು ಇಂದಿನ ಜನಪ್ರತಿನಿಧಿಗಳು ಅನುಸರಿಸಿದರೆ ದೇಶ ಅಭಿವೃದ್ಧಿ ಶಾಸಕ.ಟಿ.ರಘುಮೂರ್ತಿ.

by | 20/08/23 | ಸಾಂಸ್ಕೃತಿಕ

ಚಳ್ಳಕೆರೆ ಆ.20.ಶ್ರೀಮಂತ ಅರಸು ಮನೆತನದಲ್ಲಿ ಹುಟ್ಟಿದರೂ ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ದೇವರಾಜ ಅರಸು ಶ್ರಮಿಸಿದರು. ಅವರ ತತ್ವ–ಸಿದ್ಧಾಂತವನ್ನು ಅಳವಡಿಸಿಕೊಳ್ಳಬೇಕು. ಮನುಷ್ಯರನ್ನು ಮನುಷ್ಯರನ್ನಾಗಿ ನೋಡಬೇಕು’ ಎಂದು ಶಾಸಕ ಟಿ.ರಘುಮೂರ್ತಿ ಅಭಿಪ್ರಾಯ ಪಟ್ಟರು.
ನಗರದ ಹೊರವಲಯದ ಡಿ ದೇವರಾಜ ಅರಸು ವಸತಿ ಶಾಲೆಯಲ್ಲಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಡಿ ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
‘ಜೀತ ಹಾಗೂ ಮಲ ಹೊರುವ ಪದ್ಧತಿಯ ನಿರ್ಮೂಲನೆಗೆ ಅರಸು ಶ್ರಮಿಸಿದರು. ಅವರು ನೀಡಿದ ಕೊಡುಗೆಗಳು ಮಾದರಿಯಾಗಿವೆ’ ಎಂದರು.
‘ಬೆಂಗಳೂರಿನಲ್ಲಿ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಚಾಲನೆ ನೀಡಿದರು. ಹೊಲ ಉಳುವವನೇ ಒಡೆಯ ಎಂದು ನೊಂದವರ ಧ್ವನಿಯಾಗಿ, ಅರಸುರವರ ಜನಪರ ಆಡಳಿತ ವೈಖರಿಯನ್ನು ಇಂದಿನ ರಾಜಕಾರಣಿಗಳು ಮೈಗೂಡಿಸಿಕೊಳ್ಳಬೇಕು
ಅರಸುರವರು ದೀನ ದಲಿತರಿಗೆ ಅತ್ಯಂತ ಕೆಳ ವರ್ಗದ ಜನರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಿ ಬಸವ ಬುದ್ಧ ಅಂಬೇಡ್ಕರ್ ಅವರ ಆದರ್ಶಗಳನ್ನು ಅನುಸರಿಸಿಕೊಂಡು ಮುಖ್ಯಮಂತ್ರಿಯಾಗಿ ಅಧಿಕಾರವನ್ನು ಜನರ ಪರವಾಗಿ ನಿರ್ವಹಿಸಿ ಹಿಂದುಳಿದ ವರ್ಗಗಳ ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ
ರಾಜಕಾರಣವನ್ನು ಎಲ್ಲರೂ ಮಾಡುತ್ತಾರೆ ಆದರೆ ರಾಜ್ಯದ ಒಬ್ಬ ಮುಖ್ಯಮಂತ್ರಿಯಾಗಿ ಬಡ ಹಾಗೂ ಹಿಂದುಳಿದ ವರ್ಗಗಳ ಜನರ ಮನದಲ್ಲಿ ಉಳಿಯುವಂತಹ ಕಾರ್ಯಕ್ರಮಗಳನ್ನು ರೂಪಿಸಿದಂತಹ ಧೀಮಂತ ರಾಜಕಾರಣಿಗಳಲ್ಲಿ ದೇವರಾಜ ಅರಸರ ರವರು ಮೊದಲಿಗರಾಗುತ್ತಾರೆ ಉಳುವವನೆ ಭೂಮಿಯ ಒಡೆಯ ವೃದ್ಧಾಪ್ಯ ವೇತನ ವಿಧವಾ ವೇತನ ಜೀತ ಪದ್ಧತಿ ನಿರ್ಮೂಲನೆ ಮಾಡಿದರು ಇಂದಿನ ರಾಜಕಾರಣಿಗಳು ದೇವರಾಜ್ ಅರಸುರವರ ಆಡಳಿತದ ವೈಖರಿಗಳನ್ನು ಮೈಗೂಡಿಸಿಕೊಂಡು ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕಿದೆ ಇಂದಿನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೇವರಾಜ ಅರಸುರವರ ಸಿದ್ಧಾಂತಗಳನ್ನ ಪಾಲಿಸುತ್ತಿರುವುದರಿಂದ ಜನಪರ ಕಾರ್ಯಕ್ರಮಗಳನ್ನು ನೀಡಿ ಮಹಿಳೆಯರ ಬಡವರ ಹಾಗೂ ಹಿಂದುಳಿದ ವರ್ಗಗಳ ಶೋಷಿತ ಸಮುದಾಯಗಳ ಮುಖ್ಯಮಂತ್ರಿ ಯಾಗಿ ಹೊರಹಮ್ಮಿದ್ದಾರೆ ಎಂದು ಶಾಸಕ ಟಿ.ರಘುಮೂರ್ತಿ ಶ್ಲಾಘಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದಿವಾಕರ್ ಮಾತನಾಡಿ ದೇವರಾಜ ಅರಸುರವರು ದೀನ ದಲಿತರ ಬಂಧುವಾಗಿ ಎಲ್ ಜಿ ಹಾವನೂರರವರ ವರದಿ ಅನುಷ್ಠಾನ ಗೊಳಿಸಿ ಹಿಂದುಳಿದ ವರ್ಗಗಳಿಗೆ ನ್ಯಾಯವನ್ನು ದೊರಕಿಸಿಕೊಟ್ಟರು ಗ್ರಾಮೀಣ ಪ್ರದೇಶಗಳಲ್ಲಿನ ರೈತರ ಕೃಷಿ ಕೈಸಾಲಗಳನ್ನು ಮನ್ನ ಗೊಳಿಸಿ ರೈತರ ಹಿತವನ್ನು ಕಾಪಾಡಿದರು ಇವರ ಅಧಿಕಾರಾವಧಿಯಲ್ಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ 165 ಸ್ಥಾನಗಳನ್ನು ಹಾಗೂ ಲೋಕಸಭೆಯಲ್ಲಿ 27 ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕ ಗುರುನಾಥ್ ದೇವರಾಜ ಅರಸುರವರ ಕುರಿತು ಉಪನ್ಯಾಸ ನೀಡಿದರು ದೇವರಾಜ ಅರಸು ವಸತಿ ಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ಪಿಯುಸಿ ಪದವಿಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಹಶೀಲ್ದಾರ್ ರೆಹಾನ್ ಪಾಷಾ. ಡಿ ವೈ ಎಸ್ಪಿ ಟಿ.ಬಿ ರಾಜಣ್ಣ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ ರಾಘವೇಂದ್ರ . ಸದಸ್ಯ‌ರಮೇಶ್ ಗೌಡ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ತಾ ಪಂ ಪ್ರಭಾರ ಇ ಒ ಟಿ .ಹೆಚ್ ಸಂತೋಷ್ ಪೌರಾಯುಕ್ತ ಸಿ ಚಂದ್ರಪ್ಪ. ರೇವಣ್ಣ ಶಿವಲಿಂಗಪ್ಪ .ಶಿವರಾಜ್ ಶ್ರೀನಿವಾಸ್ .ಮೇಘ ಹರಿಪ್ರಸಾದ್. ಲಿಂಗೇಗೌಡ .ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ವಸತಿ ಶಾಲೆಯ ವಿದ್ಯಾರ್ಥಿಗಳು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page