ದೇಶದ ಇತಿಹಾಸದಲ್ಲಿ ದಲಿತ ಮತ್ತು ಹಿಂದುಳಿದ ವರ್ಗದಲ್ಲಿ ಜನಿಸಿದ ಬಹುತೇಕರೆಲ್ಲರೂ ಸಹ ದೇಶದ ಮಹಾನ್ ದಾರ್ಶನಿಕರಾಗಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಉಪ್ಪಾರ ಸಮಾಜದ ನಿಕಟಪೂರ್ವ ಅಧ್ಯಕ್ಷ ಆರ್ ಮೂರ್ತಿ

by | 17/06/24 | ಸುದ್ದಿ


ಚಳ್ಳಕೆರೆ ದೇಶದ ಇತಿಹಾಸದಲ್ಲಿ ದಲಿತ ಮತ್ತು ಹಿಂದುಳಿದ ವರ್ಗದಲ್ಲಿ ಜನಿಸಿದ ಬಹುತೇಕರೆಲ್ಲರೂ ಸಹ ದೇಶದ ಮಹಾನ್ ದಾರ್ಶನಿಕರಾಗಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಉಪ್ಪಾರ ಸಮಾಜದ ನಿಕಟಪೂರ್ವ ಅಧ್ಯಕ್ಷ ಆರ್ ಮೂರ್ತಿ ಹೇಳಿದರು
ಆಂಧ್ರಗಡಿಯ ದೊಡ್ಡಬಾದಿಹಳ್ಳಿ ಗ್ರಾಮದಲ್ಲಿ ಗ್ರಾಮದ ಉಪ್ಪಾರ ಸಮುದಾಯ ಚಳ್ಳಕೆರೆ ತಾಲೂಕು ಉಪ್ಪಾರ ಸಂಘ, ಚಿತ್ರದುರ್ಗ ಜಿಲ್ಲಾ ಉಪ್ಪಾರ ಸಮಾಜ ಹಾಗೂ ಯುವಕ ಸಂಘಗಳ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಭಗೀರಥ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಸಾರೋಟಿನಲ್ಲಿ ಪ್ರತಿಷ್ಟಾಪಿಸಿದ್ದ ಭಗೀರಥ ಮಹರ್ಷಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು
ಬುಧ್ದ, ಬಸವ, ಅಂಬೇಡ್ಕರ್, ಭಗೀರಥ, ವಾಲ್ಮೀಕಿ, ಕೃಷ್ಣ ಮತ್ತು ಕನಕರೆಲ್ಲರೂ ಕೂಡ ಶೋಷಿತ ಸಮುದಾಯದಲ್ಲಿ ಹುಟ್ಟಿ ಬೆಳೆದು ಸಮಾಜೋಪಯೋಗಿ ಕಾರ್ಯಗಳನ್ನು ಕೈಗೊಂಡು ನಿಸ್ವಾರ್ಥ ಜೀವನ ಸಾಗಿಸಿ ನಮ್ಮ ದೇಶಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ ಈ ಎಲ್ಲಾ ದಾರ್ಶನಿಕ ಜಯಂತ್ಯುತ್ಸವಗಳನ್ನು ಹಿಂದುಳಿದವರೆಲ್ಲರೂ ಒಟ್ಟಿಗೆ ಸೇರಿಕೊಂಡು ಆಚರಿಸಬೇಕಿದೆ ಎಂದರು
ಚಿತ್ರದುರ್ಗ ಡಯಟ್ ನಿವೃತ್ತ ಉಪನ್ಯಾಸಕ ಗಂಗಣ್ಣ ಪ್ರಾಸ್ತಾವಿಕ ಮಾತನಾಡಿ ರಾಜ್ಯಾದ್ಯಂತ ಉಪ್ಪಾರ ಸಮಾಜ ಸಂಘಟಿತರಾಗಿ ಗ್ರಾಮ ಹೋಬಳಿ ತಾಲೂಕು ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ನಮ್ಮ ಕುಲಗುರು ಭಗೀರಥ ಮಹರ್ಷಿಯ ಜಯಂತಿ ಆಚರಿಸುವ ವೇಳೆ ನಮ್ಮ ದೇಶಿ ಕಲೆಗಳು ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಕಲಾಪ್ರದರ್ಶನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಆಯೋಜಿಸಬೇಕು ಎಂದರು
ಚಳ್ಳಕೆರೆ ತಾಲೂಕು ಉಪ್ಪಾರ ಸಮಾಜದ ಅಧ್ಯಕ್ಷ ಹನುಮಂತಪ್ಪ ಮಾತನಾಡಿ ಸಿರಿವಾಳ ಓಬಳಾಪುರ ಗ್ರಾಪಂ ವ್ಯಾಪ್ತಿಯ ದೊಡ್ಡಬಾದಿಹಳ್ಳಿ ಗ್ರಾಮದಲ್ಲಿ ನಮ್ಮ ಸಮಾಜ ೧೬ ನೇ ವರ್ಷದ ಜಯಂತಿಯನ್ನು ಶ್ರಧ್ದಾ ಭಕ್ತಿಯಿಂದ ಆಚರಣೆ ಮಾಡಿ ನಾಡಿನ ಸಮಾಜದ ಜನರಿಗೆ ಉತ್ತಮ ಸಂದೇಶವನ್ನು ಸಾರಿದ್ದಾರೆ ಉಪ್ಪಾರ ಸಮಾಜದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ನಗರ ಪ್ರದೇಶಗಳಲ್ಲಿನ ಉಪ್ಪಾರ ವಿದ್ಯಾರ್ಥಿನಿಲಯಗಳನ್ನು ಬಳಸಿಕೊಂಡು ಶಿಕ್ಷಣ ಕೊಡಿಸಬೇಕು ಎಂದರು
ಇದೇ ವೇಳೆ ಸಾರೋಟಿನಲ್ಲಿ ಭಗೀರಥ ಮಹರ್ಷಿಯ ಭಾವಚಿತ್ರವನ್ನು ಪ್ರತಿಷ್ಟಾಪಿಸಿ ವಿವಿಧ ಹೂವುಗಳಿಂದ ಅಲಂಕರಿಸಿ ಪೂಜಿಸಿ ಉಪ್ಪು ಮತ್ತು ಜೇನುತುಪ್ಪ ಹಣ್ಣು ಕಾಯಿ ದೀಪ ಧೂಪಗಳಿಂದ ಪೂಜಿಸಿ ಗ್ರಾಮದ ಬೀದಿಗಳಲ್ಲಿ ಜನಪದ ವಾದ್ಯಗಳ ಮೂಲಕ ಮೆರವಣಿಗೆ ಕೈಗೊಂಡರು ನೆರೆದಿದ್ದವರಿಗೆ ಪ್ರಸಾದ ವಿತರಿಸಿದರು
ಇದೇ ವೇಳೆ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಸಾಧಕರನ್ನು ಗೌರವಿಸಲಾಯಿತು ಸಂದರ್ಭದಲ್ಲಿ ಮೊಳಕಾಲ್ಮೂರು ತಾಲೂಕು ಅಧ್ಯಕ್ಷ ಶ್ರೀಪತಿ, ಹಿರಿಯೂರು ಅಧ್ಯಕ್ಷ ರಾಮಣ್ಣ, ಚಳ್ಳಕೆರೆ ಅಧ್ಯಕ್ಷ ಹನುಮಂತಪ್ಪ, ಭಗೀರಥ ಯುವಕ ಸಂಘದ ಡಿಎಂಕೆ ರವಿ, ಉಪ್ಪಾರ ಸಮುದಾಯದ ಮುಖಂಡರಾದ ಮಾರುತಿ, ಪ್ರಶಾಂತ್, ಮಂಜಣ್ಣಯಾದವ್, ಆಲೂರು ರಾಮಾಂಜಿನೇಯ, ಹುಚ್ಚೋಳಪ್ಪ, ಗಂಗಣ್ಣ, ಮಹಾಂತೇಶ ತಿಪ್ಪೇಸ್ವಾಮಿ, ತಾಲೂಕು ಮತ್ತು ಹೋಬಳಿ ವ್ಯಾಪ್ತಿಯ ಉಪ್ಪಾರ ಸಮಾಜದ ಮುಖಂಡರು ಪದಾಧಿಕಾರಿಗಳು ಗ್ರಾಮಸ್ಥರು ಇದ್ದರು

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page