ದೇಶದ ಪ್ರಸ್ತುತ ಸಮಸ್ಯೆ ಗಳ ನಿವಾರಣೆಗೆ ಡಾ.ಬಿ.ಆರ್.ಅಂಬೇಡ್ಕರ್ ವಿಚಾರ ಧಾರೆ ಅತ್ಯಗತ್ಯವಾಗಿದ್ದು, ದೇಶದ ಪ್ರತಿಯೊಬ್ಬರೂ ಅಂಬೇಡ್ಕರ್ ಚಿಂತನೆಗಳನ್ನು ಅರಿತುಕೊಳ್ಳಬೇಕಿದೆ ಎಂದು ಶಾಸಕ ಟಿ.ರಘುಮೂರ್ತಿ

by | 06/12/22 | ಸುದ್ದಿ

ಚಳ್ಳಕೆರೆ.
ದೇಶದ ಪ್ರಸ್ತುತ ಸಮಸ್ಯೆ ಗಳ ನಿವಾರಣೆಗೆ ಡಾ.ಬಿ.ಆರ್.ಅಂಬೇಡ್ಕರ್ ವಿಚಾರ ಧಾರೆ ಅತ್ಯಗತ್ಯವಾಗಿದ್ದು, ದೇಶದ ಪ್ರತಿಯೊಬ್ಬರೂ ಅಂಬೇಡ್ಕರ್ ಚಿಂತನೆಗಳನ್ನು ಅರಿತುಕೊಳ್ಳಬೇಕಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ದಲಿತ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಜನಪ್ರತಿನಿಧಿಗಳು, ವಿವಿಧ ದಲಿತ ಸಂಘಟನೆಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿದರು.
ಅಸ್ಪೃಶ್ತತೆ ಎಂಬ ಸಾಮಾಜಿಕ ಪಿಡುಗು ನಿವಾರಣೆ ಮಾಡಿ ಸಮ ಸಮಾಜದಕ್ಕಾಗಿ ಶ್ರಮಿಸಿದವರು ದೇಶದ ಏಳಿಗೆಗಾಗಿ ಅವರು ಕೊಟ್ಟ ಕೊಡುಗೆ ಅನನ್ಯ. ವಿಶ್ವದಲ್ಲೇ ಮಾದರಿಯಾದ ಸಂವಿದಾನ ಸಮಾನತೆ ಭಾತೃತ್ವ ಸೌಹಾರ್ದತೆಯನ್ನು ಸಾರುತ್ತದೆ ಅವರು ತೋರಿಸಿದ ಹಾದಿಯಲ್ಲಿಲ ನಡೆಯುವ ಸಂಕಲ್ಪ ಮಾಡುವಂತೆ ತಿಳಿಸಿದರು.
ಮಾಜಿ ನಗರಸಭೆ ಅಧ್ಯಕ್ಷೆ ಜಯಲಕ್ಷಿö್ಮ ಮಾತನಾಡಿ ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ಅಂಬೇಡ್ಕರ್ ಅವರು ರೂಪಿಸಿದ್ದ ಹಿಂದೂ ಕೋಡ್ ಬಿಲ್ ಗೆ ವಿರೋಧ ವ್ಯಕ್ತವಾಯಿತು. ಮೊದಲ ರಾಷ್ಟçಪತಿಯಾಗಿದ್ದ ಬಾಬು ರಾಜೇಂದ್ರ ಪ್ರಸಾದ್ ಯಾವುದೇ ಕಾರಣಕ್ಕೂ ಈ ಬಿಲ್ಲಿಗೆ ಅಂಕಿತ ಹಾಕುವುದಿಲ್ಲ ಎಂದು ಘೋಷಿಸಿದರು ನೊಂದ ಅಂಬೇಡ್ಕರ್ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಹಳದಿನಗಳ ನಂತರ ಮಹಿಳೆಯ ಹಕ್ಕುಗಳಿಗೆ ಜೀವ ನೀಡಿದರು ಎಂದು ವಿಷಾದಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಜಿಪಂ ಸದಸ್ಯ ಪ್ರಕಾಶ್‌ಮೂರ್ತಿ, ಗ್ರಾಪಂ ಉಪಾಧ್ಯಕ್ಷ ಆನಂದ್, ಮಾಜಿ ತಾಪಂ ಸದಸ್ಯ ಸಮರ್ಥರಾಯ್, ಮಾಜಿ ನಗರಸಭೆ ಸದಸ್ಯ ಟಿ.ವಿಜಯ್‌ಕುಮಾರ್, ಕೆ.ಟಿ.ಕುಮಾರಸ್ವಾಮಿ, ಎಂ.ರವಿಶ್‌ಕುಮಾರ್, ನಗರಸಭೆ ಸದಸ್ಯರಾದ ವೀರಭದ್ರಯ್ಯ,ಇಂದ್ರೇಶ್, ತಾಪಂ ಇಒ ಜಿ.ಕೆ. ಹೊನ್ನಯ್ಯ, ಬಿಇಒ ಕೆ.ಎಸ್.ಸುರೇಶ್, ಪೌರಾಯುಕ್ತ ಚಂದ್ರಪ್ಪ ಮಾತನಾಡಿದರು.
ನಗರಸಭೆ ಅಧ್ಯಕ್ಷೆ ಸುಮಕ್ಕ, ಸದಸ್ಯರಾದ ರಮೇಶ್‌ಗೌಡ, ಕವಿತ, ಶ್ರೀನಿವಾಸ್, ಶಿವಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಮಾಜಿ ತಾಪಂ ಸದಸ್ಯ ಜಿ.,ವೀರೇಶ್, ಸಮಾಜಕಲ್ಯಾಣಾಧಿಕಾರಿ ಮಂಜಪ್ಪ, ಶಿಶುಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ,ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ವಿವಿಧ ದಲಿತ ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *