ಹಿರಿಯೂರು :
ಗ್ರಾಮೀಣ ಜನರಿಗೆ ಸರ್ಕಾರದ ದೌರ್ಜನ್ಯ ನಿಯಂತ್ರಣ ಕಾಯ್ದೆ ಬಗ್ಗೆ ಸೂಕ್ತ ಅರಿವು ಮೂಡಿಸುವಂತಹ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮಗಳು ಪ್ರತಿ ಹಳ್ಳಿ ಹಳ್ಳಿಗಳಲ್ಲೂ ನಡೆಯುವಂತಾಗಬೇಕು ಎಂಬುದಾಗಿ ಮೇಟಿಕುರ್ಕೆ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಎಸ್.ಹನುಮಂತರಾಯ ಹೇಳಿದರು.
ತಾಲ್ಲೂಕಿನ ಬಿರೇನಹಳ್ಳಿ ಗ್ರಾಮದಲ್ಲಿ ಗ್ರಾಮದ ಜನರಿಗೆ ದೌರ್ಜನ್ಯ ನಿಯಂತ್ರಣ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಜನ ಜಾಗೃತಿ ಬೀದಿ ನಾಟಕ, ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ನೇತೃತ್ವದಲ್ಲಿ ದೌರ್ಜನ್ಯ ನಿಯಂತ್ರಣ ಕಾಯ್ದೆಯ ಬಗ್ಗೆ ನಡೆಸಲಾದ ಬೀದಿನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮಗಳಲ್ಲಿ ದೇವಸ್ಥಾನಕ್ಕೆ ಪ್ರವೇಶ ಇಲ್ಲದಿರುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ವೈಯಕ್ತಿಕ ವಿಚಾರವಾಗಲಿ ಜಾತಿನಿಂದನೆ ಆಗಲಿ ನಡೆಯಬಾರದು ಒಂದು ಪಕ್ಷ ನಡೆದರೆ ಆ ಬಗ್ಗೆ ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೂಕ್ತ ಕಾನೂನು ರೀತಿಯ ಕ್ರಮಕೈಗೊಳ್ಳಲಾಗುತ್ತದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮವನ್ನು ಕುರಿತು ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ದಿನೇಶ್ ರವರು ಗ್ರಾಮೀಣ ಪ್ರದೇಶಗಳಲ್ಲಿ ಅಲ್ಲಲ್ಲಿ ಇನ್ನೂ ಅಸ್ಪೃಶ್ಯತೆ ಆಚರಣೆ ಕಂಡು ಬರುತ್ತಿದ್ದು, ಇದು ಸಂಪೂರ್ಣ ನಿರ್ಮೂಲನವಾಗಬೇಕು, ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಗ್ರಾಮೀಣ ಹೋಟೆಲ್ ಗಳಲ್ಲಿ ಯಾವುದೇ ರೀತಿಯ ಜಾತಿನಿಂದನೆ ಮಾಡಬಾರದು ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರಾದ ಹೇಮೇಗೌಡ್ರು, ಫಯಾಜ್, ಮುಖ್ಯೋಪಾಧ್ಯಾಯರು, ಊರಿನ ಗ್ರಾಮಸ್ಥರು, ಮಾನಸಂ ತಂಡದ ನಾಯಕ ಹಾಗೂ ಕಲಾವಿದರಾದ ಎಚ್.ಎಸ್.ಮಾರುತೇಶ್, ಹಾಗೂ ತಂಡದವರಾದ ಆಶಾ, ಕುಮಾರ್, ಚನ್ನಬಸಪ್ಪ, ರಮೇಶ್, ಲತಾ, ಇವರುಗಳು ಬೀದಿ ನಾಟಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ದೌರ್ಜನ್ಯನಿಯಂತ್ರಣಕಾಯ್ದೆ ಬಗ್ಗೆ ಅರಿವುಮೂಡಿಸುವ ಕಾರ್ಯಕ್ರಮಗಳು ಪ್ರತಿ ಹಳ್ಳಿಗಳಲ್ಲೂ ನಡೆಯಬೇಕು ಮೇಟಿಕುರ್ಕೆ ಗ್ರಾಪಂ.ಅಧ್ಯಕ್ಷ ಎಸ್.ಹನುಮಂತರಾಯ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments