ಚಿತ್ರದುರ್ಗ. ಮಾರ್ಚ್29:
ಮಾರ್ಚ್ 29 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸಮಾಜಶಾಸ್ತ್ರ ವಿಷಯದ ಪರೀಕ್ಷೆಗೆ 502 ವಿದ್ಯಾರ್ಥಿಗಳು ಮತ್ತು ಗಣಕವಿಜ್ಞಾನ ವಿಷಯದ ಪರೀಕ್ಷೆಗೆ 28 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 530 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಸಮಾಜಶಾಸ್ತ್ರ ವಿಷಯದಲ್ಲಿ 4886 ವಿದ್ಯಾರ್ಥಿಗಳು ನೊಂದಣಿಯಾಗಿದ್ದು, 4384 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 502 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಗಣಕ ವಿಜ್ಞಾನ ವಿಷಯದಲ್ಲಿ 1072 ವಿದ್ಯಾರ್ಥಿಗಳು ನೊಂದಣಿಯಾಗಿದ್ದು, 1044 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 28 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ಇರುವುದಿಲ್ಲ. ಮಾರ್ಚ್ 29ರಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮುಕ್ತಾಯಗೊಂಡಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು ತಿಳಿಸಿದ್ದಾರೆ.
=======
ದ್ವಿತೀಯ ಪಿಯು ಪರೀಕ್ಷೆ: 530 ವಿದ್ಯಾರ್ಥಿಗಳು ಗೈರು
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments