ಧಾರ್ಮಿಕ ಕಾರ್ಯಕ್ರಮಗಳಿಂದ ಶಾಂತಿ-ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ : ಸಚಿವ ಸುಧಾಕರ್

by | 01/09/23 | ಸುದ್ದಿ


ಹಿರಿಯೂರು :
ಧಾರ್ಮಿಕ ಕಾರ್ಯಕ್ರಮಗಳಿಂದ ಶಾಂತಿ-ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರಾಜ್ಯದಲ್ಲಿ ಹೊಸಯೋಜನೆಗಳನ್ನು ನೀಡುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವಂತೆ ಮಾಡಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲ್ಲೂಕಿನ ಮಸ್ಕಲ್ ಮಟ್ಟಿ ಕಾರ್ಯಕ್ಷೇತ್ರದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಸಾಮೂಹಿಕ ಸತ್ಯನಾರಾಯಣಸ್ವಾಮಿ ಪೂಜೆ” ಹಾಗೂ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಗೀತಾ ಮಾತನಾಡಿ, ಸಮಾಜದಲ್ಲಿ ಅಳಿದು ಹೋಗುತ್ತಿರುವ ನಮ್ಮ ಪಾರಂಪರಿಕ ದೇಶೀಯ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವುದು ನಮ್ಮನಿಮ್ಮೆಲ್ಲರ ಆದ್ಯಕರ್ತವ್ಯವಾಗಿದ್ದು, ಇಂತಹ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಜನಾ ಕಾರ್ಯಕ್ರಮದ ಮೂಲಕ ಸಮಾಜದಲ್ಲಿ ಶಾಂತಿ ಹಾಗೂ ನೆಮ್ಮದಿಯನ್ನು ಕಾಪಾಡಲು ಸುಲಭ ಸಾಧ್ಯ ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸಕರಾಗಿ ಡಾ.ವಿ.ವೀರಣ್ಣ, ಪ್ರಾಂಶುಪಾಲರು ಪಂಚಲಿಂಗೇಶ್ವರ ಪ್ರಥಮ ದರ್ಜೆ ಕಾಲೇಜು ಧರ್ಮಪುರ ಇವರು ಧಾರ್ಮಿಕ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 10 ಹಲವಾರು ಕಾರ್ಯಕ್ರಮಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಸಭೆಗೆ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ವಿನಯ್ ಕುಮಾರ್ ಸುವರ್ಣ, ತಾಲ್ಲೂಕು ಯೋಜನಾಧಿಕಾರಿಗಳಾದ ಹರಿಪ್ರಸಾದ್ ರೈ, ಪೂಜಾ ಸಮಿತಿಯ ಅಧ್ಯಕ್ಷರಾದ ಸೆಂದಿಲ್ ಕುಮಾರ್, ಮಸ್ಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಕೊಲ್ಲಮ್ಮ, ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಡಾ.ಪ್ರಿಯ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page