ಚಳ್ಳಕೆರೆ: ತಾಲೂಕಿನ ನರಹರಿ ನಗರದಲ್ಲಿರುವ ಶ್ರೀ ನರಹರೇಶ್ವರ ದೇವಾಲಯದ ಪ್ರಾಂಗಣದಲ್ಲಿ ಹಮ್ಮಿಕೊಂಡಿದ್ದ ದಿವ್ಯ ಮಂಗಳ ವಿಗ್ರಹ ಅನಾವರಣ ಮಹೋತ್ಸವದ ಕಾರ್ಯಕ್ರಮದಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ ರಘುಮೂರ್ತಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಶ್ರೀ ನರಹರಿ ಸೇವಾ ಪ್ರತಿಷ್ಠಾನ ವತಿಯಿಂದ ಇಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯವಾದದ್ದು ಸಮಾಜದಲ್ಲಿ ನಾವು ಎಷ್ಟೇ ಎತ್ತರಕ್ಕೆ ಬೆಳೆದರು ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ನಡೆದಾಗ ಮಾತ್ರ ನಮ್ಮಲ್ಲಿನ ಆತ್ಮಸ್ಥೈರ್ಯ ಹೆಚ್ಚಾಗಲು ಸಾಧ್ಯ ನಮ್ಮ ಮನಸ್ಸನ್ನು ಪ್ರಶಾಂತವಾಗಿಡಲು ಆಧ್ಯಾತ್ಮಿಕ ಕಾರ್ಯಕ್ರಮಗಳು ಸಹಕಾರಿ ಆಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮಂಜುನಾಥ್, ಸಂಜೀವಮೂರ್ತಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments