ಚಳ್ಳಕೆರೆ ಜನಧ್ವನಿ ವಾರ್ತೆ ಅ.29 ಈ ದೇಶದ ಇತಿಹಾಸದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅವರ ಹೋರಾಟ ಅವಿಸ್ಮರಣೀಯ. ಚೆನ್ನಮ್ಮನ ಸ್ವಾಭಿಮಾನ ಮತ್ತು ದೇಶಾಭಿಮಾನ ಇಂದಿನ ಪೀಳಿಗೆ ಅರಿತು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ನಗರದ ವೀರಶೈವ ಕಲ್ಯಾಣ ಮಂಟದಲ್ಲಿ ವೀರಶೈವ ಸೇವಾ ಸಂಘ, ರಾಣಿ ಚನ್ನಮ್ಮ ಜಯಂತೋತ್ಸವ ಸಮಿತಿ,ಹಾಗೂ ವಿವಿಧ ವೀರಶೈವ ಸಂಘಟನೆಗಳಿಂದ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಿತ್ತೂರು ಚೆನ್ನಮ್ಮ ಅವರು ಮಾಡಿದ ಕಾರ್ಯಗಳಿಂದ ಇತಿಹಾಸದ ಪುಟದಲ್ಲಿ ಅವರು ಅಜರಾಮರವಾಗಿದ್ದಾರೆ. ಇಂತಹ ಮಹನೀಯರ ಕುರಿತಾಗಿ ಅಧ್ಯಯನ ಮಾಡುವ ಮೂಲಕ ಮತ್ತಷ್ಟು ತಿಳಿದುಕೊಳ್ಳಬೇಕು. ಧೈರ್ಯ ಶೌರ್ಯ ಕೆಚ್ಚೆದೆಯ ಹೋರಾಟದ ಕಿತ್ತೂರು ಚೆನ್ನಮ್ಮ ಗುಣಗಳನ್ನು ಅಳವಡಿಸಿಕೊಂಡು ಬೆಳೆಸಿಕೊಂಡಾಗ ಮಾತ್ರ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ. ಈ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಮಹನೀಯರ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಕುಮಾರ್. ವೀರಶೈವ ಸಮಾಜ ಸೇವಾ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ .ಕೆ.ಸಿ. ನಾಗರಾಜ್,ಮಾತನಾಡಿದರು, ನಗರಸಭೆ ಸದಸ್ಯರಾದ ಸಾವಿತ್ರಮ್ಮ ಬಿ.ಟಿ.ರಮೇಶ್ ಗೌಡ. ಸಮಾಜದಮುಖಂಡರಾದ ಕೆ.ಬಸವರಾಜ್,ಕೆ.ಎಂ.ಜಗದೀಶ್,ಕೆ.ಟಿ.ಶಿವಕುಮಾರ್, ಹೆಚ್.ಪ್ರಕಾಶ್, ಟಿ.ನಾಗೇಂದ್ರಪ್ಪ,ಎಲ್.ರುದ್ರಮುನಿ, ಪದ್ಮನಾಗರಾಜ್,ಮಂಜುಳಾ ನಾಗರಾಜ್,ಪ್ರೇಮ ಮಂಜುನಾಥ್, ಲೋಕಣ್ಣ. ಇತರರಿದ್ದರು.
ಧೈರ್ಯ ಶೌರ್ಯ ಕೆಚ್ಚೆದೆಯ ಹೋರಾಟದ ಕಿತ್ತೂರು ಚೆನ್ನಮ್ಮ ಗುಣಗಳನ್ನು ಅಳವಡಿಸಿಕೊಂಡು ಬೆಳೆಸಿಕೊಂಡಾಗ ಮಾತ್ರ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ. ಈ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಮಹನೀಯರ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments