ನಕಾಶೆ ಕಂಡ ದಾರಿ,ಸ್ಮಶಾನ ಭೂಮಿ ಒತ್ತುವರಿ ಸೇರಿದಂತೆ ಕಂದಾಯ ಇಲಾಖೆಯಲ್ಲೇ ಹೆಚ್ಚು ಸಮಸ್ಯೆಗಳು ಬಾಕಿದ್ದು ಪೊಲೀಸ್ ಇಲಾಖೆ, ಕಂದಾಯ, ತಾಪಂ ಇಲಾಖೆಗಳು ಜಂಟಿಯಾಗಿ ಸಮಸ್ಯೆ ಬಗೆಹರಿಸುವಂತೆ ಶಾಸಕ ಟಿ.ರಘುಮೂರ್ತಿ.

by | 04/07/24 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಜು.4 ನಕಾಶೆ ಕಂಡ ದಾರಿ,ಸ್ಮಶಾನ ಭೂಮಿ ಒತ್ತುವರಿ ಸೇರಿದಂತೆ ಕಂದಾಯ ಇಲಾಖೆಯಲ್ಲೇ ಹೆಚ್ಚು ಸಮಸ್ಯೆಗಳು ಬಾಕಿದ್ದು ಪೊಲೀಸ್ ಇಲಾಖೆ, ಕಂದಾಯ, ತಾಪಂ ಇಲಾಖೆಗಳು ಜಂಟಿಯಾಗಿ ಸಮಸ್ಯೆ ಬಗೆಹರಿಸುವಂತೆ ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳ ಗಮನಸೆಳೆದರು.
ನಗರದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾಡಳಿತ , ತಾಲೂಕು ಆಡಳಿತವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.\
ಸ್ವಂತ ಭೂಮಿ ಇದ್ದವರು ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡುತ್ತಾರೆ ತುಂಡು ಭೂಮಿ ಇಲ್ಲದವರು ಪರದಾಡುವಂತಾಗಿದ್ದು ಒತ್ತುವರಿ ಯಾಗಿರುವ ಹಾಗೂ ಸ್ಮಶಾನವಿಲ್ಲದ ಗ್ರಾಮಗಳಿಗೆ ಸರಕಾರಿ ಭೂಮಿ ಗುರುತಿಸುವುದು . ಸರಕಾರಿ ಭೂಮಿ ಇಲ್ಲದೆದಿದ್ದ ಖಾಸಗಿ ಜಮೀನು ಗುರುತಿಸುವುದು ಮಾಡುವ ಕೆಲಸ ಆಗಬೇಕು, ನಿವೇಶನ ರಹಿತರಿಗೆ ಆಶ್ರಯ ವಸತಿಯೋಜನೆ ಸರಕಾರಿ ಭೂಮಿ ಗುರುತಿಸ ಬೇಕು ಎಂದು ತಿಳಿಸಿದರು.
ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರು ವಿದ್ಯುತ್ , ಸ್ವಚ್ಚತೆ ವಿಚಾರದಲ್ಲಿ ಪಿಡಿಒ ಹಾಗೂ ಸದಸ್ಯರ ನಡುವೆ ಹೊಂದಾಣಿಕೆಯಿಲ್ಲದೆ ಸದಸ್ಯರು ಪಿಡಿಒ ವರ್ಗಾವಣೆ ಮಾಡುವಂತೆ ಒತ್ತಡ ಹಾಕುತ್ತಾರೆ ಪಿಡಿಒಗಳು ಕಾನೂನು ನಿಯಮ ಉಲ್ಲಂಘನೆ ಮಾಡದೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಜತೆಗೆ ಅಧ್ಯಕ್ಷ ಸದಸ್ಯರನ್ನು ಗೌರವಿಸಬೇಕು.
ಗ್ರಾಮೀಣ ಜನರು ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಿಗೆ ಅಲೆದಾಡ ಬಾರದು ಎಂಬ ಉದ್ದೇಶದಿಂದ ತಾಲೂಕು, ಹೋಬಳಿ ಮಟ್ಟದ ಜನಸಂಪರ್ಕ ಸಭೆಯಗಳನ್ನು ಆಯೋಜಿಸಿಲಾಗಿದೆ ಗ್ರಾಮೀಣ ಜನರು ಸೌಲಭ್ಯಗಳನ್ನು ಪಡೆಯಲು ಬಂದಾಗ ಇಲ್ಲದ ನೆಪ ಹೇಳಿ ಅಲೆದಾಡುವುದನ್ನು ತಪ್ಪಿಸಿ ಸಕಾಲಕ್ಕೆ ಕೆಲಸ ಮಾಡಿಕೊಡುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ವೆಂಕಟೇಶ್ ಮಾತನಾಡಿ ಸರಕಾರದ ಸೌಲಭ್ಯಗಳನ್ನು ಅರ್ಹ ಫಲಾನುಬವುಗಳಿಗೆ ತಲುಪಿಸಲು ಅಧಿಕಾರಿಗಳು ಮುಂದಾಗ ಬೇಕು , ಕೆಲಸ ಮಾಡದೆ ವಿಳಂಭ ಮಾಡಿದಾಗ ಜನಸಂಪರ್ಕ ಸಭೆಯ್ಲಿ ಅರ್ಜಿ ಸಲ್ಲಸಿದರೆ ಸ್ಥಳದಲ್ಲೇ ಬಗೆಹರಿಸಲಾಗುವುದು .
ಈಗಾಗಲೆ 50ಕ್ಕೂ ಹೆಚ್ಚು ಕುಟುಂಬಗಳು ವಾಸಮಾಡುವ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಿ ಹಕ್ಕು ಪತ್ರ ವಿತರಣೆ ಮಾಡಲಾಗಿದೆದ.
ಜಿಲ್ಲಾ ಕೇಂದ್ರದಲ್ಲಿ ಶಾಶ್ವತ ದೂರು ಸ್ವೀಕರಿಸಲು ಕೇಂದ್ರ ಪ್ರಾರಂಭಿಸಲಾಗಿದೆ ಜಿಲ್ಲಾ ಕೇಂದ್ರಕ್ಕೆ ಬಾರದವರು ತಾಲೂಕು ಹೋಬಳಿ ಕೇಂದ್ರಗಳಲ್ಲಿ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬುದು. ಜಿಲ್ಲಾಹಾಗೂ ತಾಲೂಕು ಕೇಂದ್ರಗಳಿಗೆ ಅಲೆದಾಡಿವುದನ್ನು ಬಿಟ್ಟು ಇಂತಹ ಜನಸಂಪರ್ಕಸಭೆಯಲ್ಲಿ ನಿಮ್ಮ ಸಮಸ್ಯೆಗಳಿಗೆ ಪರಿಹಾಯ ದೊರೆಯಲಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಸೋಮಶೇಖರ್ ಮಾತನಾಡಿ ಜನರಿಂದ ಜನರಿಗೋಷ್ಕರವೇ ಹಮ್ಮಿಕೊಂಡಿರುವ ಜನಸಂಪರ್ಕಸಭೆಗಳಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳಿರುತ್ತಾರೆ ಸ್ಥಳಿಯ ಹೋಬಳಿ ಹಾಗೂ ತಾಲೂಕು ಮಟ್ಟದಲ್ಲಿ ಬಗೆಹರಿಯದ ಸಮಸ್ಯೆಗಳಲ್ಲಿ ಇಲ್ಲಿಪರಿಹಾರ ದೊರೆಯಲ್ಲಿ ಇಲ್ಲಿ ದೊರೆಯದಿದ್ದಲ್ಲಿ ಸರಕಾರಕ್ಕೆ ಕಳಿಸಿಕೊಡಲಾಗುವುದು ಹೆಚ್ಚಿನ ಸಂಖ್ಯೆಯಲ್ಲಿಇಂತಹ ಸಭೆಗಳಲ್ಲಿ ಭಾಗವಹಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಿಳಿಸಿದರು.
ಜನಸಂಪರ್ಕಸಭೆಯಲ್ಲಿ ಅರ್ಜಿಗಗಳನ್ನು ನೀಡಲು ನೂಗುನುಗ್ಗಲು ಸರದಿ ಸಾಲಿನಲ್ಲಿ ನಿಂತು ಸಮಸ್ಯೆಗಳ ಅರ್ಜಿಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಯಿತು.
ಜನಸಂಪರ್ಕಸಭೆ ಅರ್ಜಿಗಳ ಸ್ವೀಕರಿಸಲು ಸೀಮಿತ.

ಜಾಜೂರು ಗ್ರಾಪಂ ವ್ಯಾಪ್ತಿಯ ಕಾಮಸಮುದ್ರ ಗ್ರಾಮದ ಸ್ಮಶಾನೊತ್ತುವರಿ ತೆರವುಗೊಳಿಸುವಂತೆ ತಾಲೂಕು ಕಚೇರಿ , ಹೊಬಳಿ ಮಟ್ಟದ ಜನಸಂಪರ್ಕ ಸಭೆಯಲ್ಲಿ ಅರ್ಜಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾಮಸಮುದ್ರದ ಸುರೇಶ್. ಯಾದಲಕಟ್ಟೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಜನ ಸಂಪರ್ಕ ಸಭೆಯಲ್ಲಿ ಅರ್ಜಿನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಯಾದಲಗಟ್ಟೆ ಜನನ್ನಾಥ್. ವಿವಿಧ ಗ್ರಾಮಗಳಿಂದ ಬಂದ ರೈತರು ರೈತರ ಜಮೀನುಗಳಿಗೆ ಹೋಗುವ ದಾರಿ ಬಿಡಿಸಿಕೊಡುವಂತೆ ಕಂದಾಯ ಇಲಾಖೆ, ಜನಸಂಪರ್ಕ ಸಭೆಗಳನ್ನು ಅರ್ಜಿಗಳನ್ನು ನೀಡಿ ಕಚೇರಿಗೆ ಅಲೆದಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತರು ಆರೋಪಿಸಿದರು. ಪಾವಗಡ ರಸ್ತೆಯ ಸ್ಮಶಾನಭೂಮಿಯನ್ನು ರೈಲ್ವೇ ಇಲಾಖೆಯೇ ಒತ್ತುವರಿ ಮಾಡಿಕೊಂಡಿದ್ದು ಸ್ಮಶಾನ ಅಭಿವೃದ್ಧಿ ಮಾಡಲು ಹೋದ ಅಧಿಕಾರಿಗಳ ಮೇಲೆಯೇ ದೂರು ನೀಡಿದ್ದಾರೆ ಎಂದು ಭದ್ರಿ ಮನವಿ ನೀಡಿದರು.


ಜನಸಂಪರ್ಕ ಸಭೆಯಲ್ಲಿ ಕಂದಾಯ ಇಲಾಖೆ ಹಾಗೂ ನಗರಸಭೆ ಬಗ್ಗೆ ಸಮಸ್ಯೆಗಳ ಸುರಿ ಮಳೆ ಗೈದರು.
ಸಭೆಯಲ್ಲಿ ನಗರಸಭೆ ಸದಸ್ಯರಾದ ವೀರಭದ್ರಪ್ಪ, ರಾಘವೇಂದ್ರ, ಮಲ್ಲಿಕಾರ್ಜುನ, ಶಿವಕುಮಾರ್, ಪಾಲಮ್ಮ , ಜಯಣ್ಣ, ನೇತಾಜಿ ಪ್ರಸನ್ನ, ರಮೇಶ್ ಗೌಡ, ಸುಮ, ಕವಿತ, ಜಯಲಕ್ಷ್ಮಿ,ಚಳ್ಳಕೆರೆಪ್ಪ, ಭದ್ರಿ, ಅನ್ವರ್ ,ಜಿಪಂ ಉಪಕಾರ್ಯದರ್ಶಿ ರಂಗಸ್ವಾಮಿ, ಉಪವಿಭಗಧಿಕಾರಿ ಕಾರ್ತೀಕ್ , ಜಂಟಿ ಕೃಷಿ ನಿರ್ದೇಶಕ ಡಾ.ಮಂಜುನಾಥ್, ಡಿವೈಎಸ್ಪಿ ರಾಜಣ್ಣ, ನಗರ ಯೋಜನಾಧಿಕಾರಿ ಮದುಸೂಧನ್, ತಹಶೀಲ್ದಾರ್ ರೇಹಾನ್ ಪಾಷ, ತಾಪಂ ಇಒ ಶಶಿಧರ್, ಪೌರಾಯುಕ್ತ ಚಂದ್ರಪ್ಪ ಜಿಲ್ಲಾ ಹಾಗೂ ತಾಲೂಕು ಮಟ್ಟದವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page