ಹಿರಿಯೂರು :
ಅಂಗನವಾಡಿ ಕೇಂದ್ರಗಳಿಗೆ ಬರುವ ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಸುವ ಜೊತೆಗೆ ಕಲಿಕೆಯಲ್ಲಿ ಸಂತಸವನ್ನು ಮೂಡಿಸುವ ನಿಟ್ಟಿನಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಸಿಡಿಪಿಓ ಆರ್.ಮಂಜುನಾಥ್ ಹೇಳಿದರು.
ನಗರದ ಮಿರ್ಜಾ ಬಡಾವಣೆಯ ವಾರ್ಡ್ ನಂಬರ್ 8ರಲ್ಲಿ ಬಸವನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ 2 ರಿಂದ 6 ವರ್ಷದ ಮಕ್ಕಳಿಗೆ ಕ್ರೀಡಾಕೂಟ ಏರ್ಪಡಿಸಲಾಗಿದ್ದು, ಈ ಕ್ರೀಡೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪಾರಿತೋಷಕ ನೀಡಲಾಯಿತಲ್ಲದೆ, ಈ ಕ್ರೀಡಾ ಕಾರ್ಯಕ್ರಮದ ಜೊತೆಗೆ ಮಕ್ಕಳಿಗೆ ಮನೋರಂಜನೆ ಕಾರ್ಯಕ್ರಮ ಸಹ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಎಸಿಡಿಪಿಓ ಸಂತೋಷ್, ಮುಖಂಡರಾದ ಪಿ.ಎಸ್.ಸಾದತ್ ವುಲ್ಲಾ, ಕೆಂಪರಾಜು, ಹನುಮೇಶ್, ಮೇಲ್ವಿಚಾರಕರಾದ ತಾಯಿ ಮುದ್ದಮ್ಮ, ಹಾಗೂ ಕಾರ್ಯಕರ್ತೆ ಶೃತಿ ಮತ್ತು ಶ್ರೀದೇವಿ, ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ನಗರದಬಸವನಕಟ್ಟೆ ಅಂಗನವಾಡಿಕೇಂದ್ರದಲ್ಲಿ ನಡೆದ ಮಕ್ಕಳ ದಿನಾಚರಣೆಯ ಕಾರ್ಯಕ್ರಮ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments