ನಗರದಲ್ಲಿ ಕರವೇ ಪ್ರತಿಷ್ಠಾಪಿಸಿದ ಪ್ರತಿಮೆಗಳ ತೆರವು ವಿರುದ್ಧ ನಗರಸಭೆಗೆ ಕಾರ್ಯಕರ್ತರಿಂದ ಮುತ್ತಿಗೆ ಹಾಕಿ ಪ್ರತಿಭಟನೆ

by | 31/10/23 | ಪ್ರತಿಭಟನೆ


ಹಿರಿಯೂರು:
ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪ್ರತಿಮೆ ಹಾಗೂ ಬೆಂಗಳೂರು ರಸ್ತೆಯ ರಂಜಿತ್ ಹೋಟೆಲ್ ಬಳಿ ರಾಷ್ಟ್ರಕವಿ ಕುವೆಂಪುರವರ ಪ್ರತಿಮೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಷ್ಠಾಪಿಸಲಾಗಿತ್ತು. ಇದನ್ನು ನಗರಸಭೆ ವತಿಯಿಂದ ಪೊಲೀಸ್ ಇಲಾಖೆಯ ಸಹಕಾರದಲ್ಲಿ ತೆರವುಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರತಿಮೆಗಳನ್ನು ಮರು ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಿರಿಯೂರು ನಗರಸಭೆಗೆ ಧಿಕ್ಕಾರ, ಕನ್ನಡ ವಿರೋಧಿ ನಗರಸಭೆಗೆ ಅಧಿಕಾರಿಗಳಿಗೆ ಧಿಕ್ಕಾರ, ಎಂಬುದಾಗಿ ಘೋಷಣೆಗಳನ್ನು ಕೂಗಿದರಲ್ಲದೆ ಪ್ರತಿಮೆಗಳನ್ನು ಮರುಸ್ಥಾಪಿಸಿದರೆ ಶಾಂತಿ ಇಲ್ಲದಿದ್ದರೆ ನಗರದಲ್ಲಿ ಕ್ರಾಂತಿ, ಪ್ರತಿಮೆಗಳನ್ನು ನಗರಸಭೆ ಮರುಸ್ಥಾಪಿಸಬೇಕು, ಈ ಕೂಡಲೇ ಸ್ಥಳಕ್ಕೆ ಜಿಲ್ಲಾಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಆಗಮಿಸಿ, ಈ ಬಗ್ಗೆ ಭರವಸೆ ನೀಡಬೇಕು ಎಂಬುದಾಗಿ ಒತ್ತಾಯಿಸಿದರು.
ಅಂತಿಮವಾಗಿ ಸಂಜೆ 4 ಗಂಟೆಯ ಸುಮಾರಿಗೆ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರಲ್ಲದೆ, ನೀವು ಪ್ರತಿಷ್ಠಾಪಿಸುತ್ತಿರುವುದು ಕನ್ನಡ ನಾಡು-ನುಡಿಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿಗಳ ಪ್ರತಿಮೆ, ಈಗ ನಗರಸಭೆ ಕೌನ್ಸಿಲ್ ಇಲ್ಲದಿರುವುದಿಂದ ಕೌನ್ಸಿಲ್ ಆಯ್ಕೆ ನಂತರ ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಜಿಲ್ಲಾಧಿಕಾರಿಗಳ ಒಪ್ಪಿಗೆ ಪಡೆದು, ಈ ಮಹಾನ್ ವ್ಯಕ್ತಿಗಳ ಪ್ರತಿಮೆಗೆ ಸೂಕ್ತ ಜಾಗದಲ್ಲಿ ಪ್ರತಿಷ್ಠಾಪಿಸೋಣ ಈ ವಿಚಾರದಲ್ಲಿ ನನ್ನ ಸಂಪೂರ್ಣ ಬೆಂಬಲ ಇದೆ ಎಂಬುದಾಗಿ ಪ್ರತಿಭಟನಾಕಾರರ ಮುಂದೆ ಘೋಷಿಸಿದರಲ್ಲದೆ
ನಗರದಲ್ಲಿ ಯಾವುದೇ ಪ್ರತಿಮೆಗಳನ್ನು ಪ್ರತಿಷ್ಠಾಪಿಸಬೇಕಾದರೆ ಅದರದೇ ಆದ ನೀತಿ-ನಿಯಮಗಳಿವೆ, ಆ ಪ್ರಕಾರ ಪ್ರತಿಮೆಗಳನ್ನು ಪ್ರತಿಷ್ಟಾಪಿಸೋಣ, ಸದ್ಯದ ಪರಿಸ್ಥಿತಿಯಲ್ಲಿ ಪ್ರತಿಭಟನೆ ಹಿಂಪಡೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಮನವೊಲಿಸಿದರು. ಸಚಿವರಾದ ಡಿ.ಸುಧಾಕರ್ ರವರ ಭರವಸೆಯ ಮೇರೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.
ಈ ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಟಿ.ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್,ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಚಂದ್ರಕಲಾ, ಕರವೇ ತಾಲೂಕು ಅಧ್ಯಕ್ಷರಾದ ರಾಮಕೃಷ್ಣಪ್ಪ, ತಾಲೂಕು ಗೌರವಾಧ್ಯಕ್ಷ ಗೋ.ಬಸವರಾಜ್, ಮಾಜಿ ಅಧ್ಯಕ್ಷರಾದ ಉದಯಶಂಕರ್ ,ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾದ ರಾಜಣ್ಣ, ಚಳ್ಳಕೆರೆ ತಾಲೂಕು ಅಧ್ಯಕ್ಷರಾದ ವೆಂಕಟೇಶ್, ಹಿರಿಯೂರು ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಡಿ.ಕೆ.ಎಸ್ ದಾದಾಪೀರ್, ನಗರಾಧ್ಯಕ್ಷ ಜಾಕೀರ್, ಚಿತ್ರದುರ್ಗ ನಗರ ಅಧ್ಯಕ್ಷ ಪಿ ರಮೇಶ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಘನಶ್ಯಾಮ್, ತಾಲೂಕು ಸಂಘಟನಾ ಕಾರ್ಯದರ್ಶಿ ಎಂ ಕೆ ಜಾಫರ್, ಗಿರೀಶ್ ನಗರ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಸುಹೇಲ್, ಸುಮಾ, ಮಂಜುಳಾ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷ ಕಾಂತಿ ಕುಮಾರ್, ಬಸವರಾಜ್ ಕಾಂತರಾಜ್ ರವಿ ಜಮೀರ್ ಹಾಗೂ ಮಲ್ಲೇಣು ಅಪ್ಪು ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *