ನಗರದಲ್ಲಿ “ಮಕ್ಕಳ ರಾಷ್ಟ್ರೀಯ ಭಾವೈಕ್ಯತಾ” ಮೇಳವನ್ನು ಜಿಲ್ಲಾಉಸ್ತುವಾರಿ ಸಚಿವ ಡಿ.ಸುಧಾಕರ್ ರಿಂದ ಉದ್ಘಾಟನೆ

by | 03/01/24 | ಸುದ್ದಿ


ಹಿರಿಯೂರು :
ನಗರದ ಗಿರೀಶ ಪ್ರೌಢಶಾಲೆ ಆವರಣದಲ್ಲಿ ಇದೇ ಜನವರಿ 4ರ ಗುರುವಾರ ಬೆಳಿಗ್ಗೆ 10ಗಂಟೆಗೆ ಭಾರತ ಸೇವಾದಳ ಶತಮಾನೋತ್ಸವದ ಅಂಗವಾಗಿ “ಮಕ್ಕಳ ರಾಷ್ಟ್ರೀಯ ಭಾವೈಕ್ಯತಾ” ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಕ್ಷೇತ್ರಶಿಕ್ಷಣಾಧಿಕಾರಿಗಳಾದ ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ನಗರದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಂದ ಪ್ರತಿಶಾಲೆಗೆ ಇಬ್ಬರು ಮಕ್ಕಳು ಹಾಗೂ ಶಿಕ್ಷಕರು ಸೇವಾದಳದ ಸಮವಸ್ತ್ರವನ್ನು ಧರಿಸಿ, ಕಡ್ಡಾಯವಾಗಿ ಭಾಗವಹಿಸಬೇಕು ಎಂಬುದಾಗಿ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಅಂಗವಾಗಿ ಪ್ರಧಾನ ರಸ್ತೆ ಮೂಲಕ ಮಕ್ಕಳ ಜಾತ ಮೆರವಣಿಗೆ ಹೊರಟು ಗಾಂಧಿ ಸರ್ಕಲ್ ನಿಂದ ದುರ್ಗಮ್ಮ ದೇವಸ್ಥಾನದ ನಂತರ ತೇರುಮಲ್ಲೇಶ್ವರ ಬೀದಿಯಿಂದ ಬಿಇಓ ಕಛೇರಿ ಮೂಲಕ ಗುರುಭವನದಲ್ಲಿ ಮೆರವಣಿಗೆ ಮುಕ್ತಾಯಗೊಂಡು ನಂತರ ಮಧ್ಯಾಹ್ನ 1 ಗಂಟೆಗೆ ಮಕ್ಕಳ ಮೇಳ ಪ್ರಾರಂಭವಾಗಲಿದೆ ಎಂಬುದಾಗಿ ಅವರು ಮಾಹಿತಿ ನೀಡಿದ್ದಾರೆ.
ಈ ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ಉದ್ಘಾಟನೆ ನೆರವೇರಿಸಲಿದ್ದಾರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ್ ಸೇವಾದಳದ ಅಧ್ಯಕ್ಷರಾದ ಎಂ,ಪಿ,ತಿಪ್ಪೇಸ್ವಾಮಿ ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಸಿ,ಎಂ,ತಿಪ್ಪೇಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಕ ಮನೋಹರ್, ಜಿಲ್ಲಾ ವಲಯ ಸಂಘಟಕ ಅಣ್ಣಯ್ಯ, ಜಿಲ್ಲಾ ಉಪಾಧ್ಯಕ್ಷ ಮಲಕಪ್ಪ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್, ಪ್ರೌಢಶಾಲಾ ಸಹಶಿಕ್ಷಕ ಸಂಘದ ಅಧ್ಯಕ್ಷ ಅಶೋಕ, ಸರ್ಕಾರಿ ನೌಕರಿ ಸಂಘದ ಅಧ್ಯಕ್ಷ ಶಿವಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಅನುದಾನಿತ ಪ್ರೌಢಶಾಲೆ ಸಂಘದ ಕಾರ್ಯದರ್ಶಿ ಮಂಜುನಾಥ್, ಶ್ರೀಲೋಕಮ್ಮ, ರಾಜಪ್ಪ, ರಮೇಶ್, ಶ್ರೀಧರ್, ರಮೇಶ್ ನಾಯ್ಕ, ಮೋಕ್ಷನಾಥಯ್ಯ, ಹಾಗೂ ಯತೀಶ್ ರವರು ಭಾಗವಹಿಸಲಿದ್ದಾರೆ.
ಈ “ಮಕ್ಕಳ ರಾಷ್ಟ್ರೀಯ ಭಾವೈಕ್ಯತಾ” ಮೇಳ ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲೆಗಳ ಮಕ್ಕಳು, ಶಿಕ್ಷಕ-ಶಿಕ್ಷಕಿಯರು, ವಿವಿಧ ಸಂಘಸಂಸ್ಥೆಗಳ ಮುಖಂಡರು, ನಗರದ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ಕಾರ್ಯಕ್ರಮದ ಸಂಘಟಕರು ಮನವಿ ಮಾಡಿದ್ದಾರೆ.

Latest News >>

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ – ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ...

ಕರ್ನಾಟಕ ಮಾಧ್ಯಮ ಮಹಾಕೂಟ ಜಿಲ್ಲಾ ಅಧ್ಯಕ್ಷರಾಗಿ ಕರುನಾಡು ಜಿಯಾ ಉಲ್ಲಾ ಆಯ್ಕೆ

ಚಳ್ಳಕೆರೆ ಕರ್ನಾಟಕ ಮಾಧ್ಯಮ ಮಹಾಕೂಟ ಜಿಲ್ಲಾ ಅಧ್ಯಕ್ಷರಾಗಿ ಕರುನಾಡು ಜಿಯಾ ಉಲ್ಲಾ ಆಯ್ಕೆ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರ್ನಾಟಕ...

ಜೂ.21 ರ ಶುಕ್ರವಾರ ಬೆಳಗ್ಗೆ 10- 30 ಕ್ಕೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ತಾಪಂ ಇಒ ಶಶಿಧರ್

ಚಳ್ಳಕೆರೆ ಜೂ.19ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜೂ21 ರ ಶುಕ್ರವಾರ ಬೆಳಗ್ಗೆ 10-30 ಕ್ಕೆ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ...

ಗೋವಿಂದಕಾರಜೋಳರನ್ನು ಕೇಂದ್ರಸಚಿವರಾಗಿ ಮಾಡಬೇಕೆಂದು ಹೆಗ್ಗೆರೆ ಮಂಜುನಾಥ್ ಒತ್ತಾಯ

ಹಿರಿಯೂರು: ರಾಜ್ಯದಲ್ಲಿ ಅತಿ ಹೆಚ್ಚು ಎಡಗೈ ಸಮುದಾಯದವರಿದ್ದು, ಈ ಬಾರಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹಾಗೆಯೇ ಚಿತ್ರದುರ್ಗ ಲೋಕಸಭಾ...

ಮಹನೀಯರ ಜಯಂತಿ: ಅರ್ಥಪೂರ್ಣ ಆಚರಣೆಗೆ ನಿರ್ಧಾರ- ಬಿ.ಟಿ. ಕುಮಾರಸ್ವಾಮಿ

ಚಿತ್ರದುರ್ಗ ಜೂನ್19: ಇದೇ ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಜುಲೈ 02 ರಂದು ಡಾ. ಫ.ಗು. ಹಳಕಟ್ಟಿಯವರ ಜನ್ಮದಿನದ ಅಂಗವಾಗಿ...

ಯೋಗ ನಡಿಗೆಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ

ಚಿತ್ರದುರ್ಗ ಜೂನ್18: 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page