ನಗರದ ನಗರಸಭೆಗೆ ಜಿಲ್ಲಾಧಿಕಾರಿ ವೆಂಕಟೇಶ್ ಭೇಟಿ ನಗರಸಭೆಯ ಆಯುಕ್ತರು,ಅಧಿಕಾರಿಗಳೊಂದಿಗೆ ಸಭೆ

by | 21/06/24 | ಸುದ್ದಿ


ಹಿರಿಯೂರು:
ಇದೀಗ ಪ್ರಸ್ತುತ ತಿಂಗಳು ಮಳೆಗಾಲ ಆಗಿರುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ನಗರದ ಜನರ ಉತ್ತಮ ಆರೋಗ್ಯಕ್ಕಾಗಿ ನಗರದ ಸ್ವಚ್ಛತೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ ಎಂಬುದಾಗಿ ನಗರಸಭೆ ಆಡಳಿತಾಧಿಕಾರಿಗಳು ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಗಳಾದ ಟಿ.ವೆಂಕಟೇಶ್ ಹೇಳಿದರು.
ನಗರದ ನಗರಸಭೆಗೆ ಭೇಟಿ ನೀಡಿದ ಚಿತ್ರದುರ್ಗ ಜಿಲ್ಲಾಧಿಕಾರಿಗಳಾದ ಟಿ.ವೆಂಕಟೇಶ್ ರವರು ನಗರಸಭೆ ಆಯುಕ್ತರು, ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ, ಅವರು ಮಾತನಾಡಿದರು.
ಇದೀಗ ಮಳೆಗಾಲವಾಗಿರುವುದರಿಂದ ನದಿ ನೀರು ಸೇರಿದಂತೆ ಎಲ್ಲ ಕಡೆ ಹೊಸ ನೀರುಬಂದು ನೀರು ಕಲುಷಿತಗೊಂಡಿದ್ದು, ಅಶುದ್ಧ ನೀರು ಕುಡಿಯುವುದರಿಂದ ಜಲಸಂಬಂದಿ ಕಾಯಿಲೆಗಳಾದ ಕಾಲರಾ, ಕರುಳು ಬೇನೆ, ಟೈಫಾಯಿಯ್ಡ್ ನಂತಹ ಕಾಯಿಲೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ನಗರದ ಜನರಿಗೆ ಶುದ್ಧ ನೀರು ಸರಬರಾಜು ಮಾಡುವ ಬಗ್ಗೆ ಹೆಚ್ಚಿನ ಗಮನಹರಿಸಬೇಕಿದೆ ಎಂದರು.
ನಗರದಲ್ಲಿ ಮಳೆ ನೀರು ಸಾರಾಗವಾಗಿ ಹರಿದುಹೋಗುವಂತೆ ರಾಜಕಾಲುವೆಗಳು, ಬಡಾವಣೆ ಚರಂಡಿಗಳಲ್ಲಿರುವ ಸಿಕ್ಕಿಹಾಕಿಕೊಂಡಿರುವ ಕಸಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಿ, ನೀರು ಸಾರಾಗವಾಗಿ ಹರಿದುಹೋಗುವಂತೆ ಮಾಡಲು ಪೌರಕಾರ್ಮಿಕರಿಗೆ ಅಗತ್ಯ ಸೂಚನೆ ನೀಡಬೇಕು ಎಂಬುದಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಕಂದಾಯ ವಸೂಲಾತಿ ಬಗ್ಗೆ ಪ್ರಶ್ನಿಸಿದ ಜಿಲ್ಲಾಧಿಕಾರಿಗಳು ಯಾವುದೇ ನಗರ ಅಭಿವೃದ್ಧಿಯಾಗಬೇಕಾದರೆ ನಗರದ ಕಂದಾಯ ವಸೂಲಾತಿ ಚನ್ನಾಗಿರಬೇಕು ಎಂದರಲ್ಲದೆ, ಇದೀಗ ಚುನಾವಣೆ ಕೆಲಸ ಕಾರ್ಯಗಳು ಮುಗಿದಿದ್ದು, ನಗರಸಭೆ ಸಿಬ್ಬಂದಿ ಇನ್ನೂ ಕಂದಾಯ ವಸೂಲಾತಿ ಕಡೆ ಹೆಚ್ಚಿನ ಗಮನಹರಿಸಬೇಕು ಎಂಬುದಾಗಿ ಹೇಳಿದರು.
ನಗರದ ಜನತೆಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡುವುದು ನಗರಸಭೆಯ ಆದ್ಯ ಕರ್ತವ್ಯವಾಗಿದ್ದು, ಈ ವಿಚಾರದಲ್ಲಿ ಯಾವುದೇ ಲೋಪವಾಗದಂತೆ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಕ್ರಮ ವಹಿಸುವ ಮೂಲಕ ಉತ್ತಮ ನಗರಸಭೆಯಾಗಲು ಪ್ರಯತ್ನ ನಡೆಸಬೇಕು ಎಂಬುದಾಗಿ ಮಾರ್ಗದರ್ಶನ ನೀಡಿದರು.
ಈಗಾಗಲೇ ಸರ್ಕಾರ ಎಲ್ಲಾ ಕಡೆ ಪ್ಲಾಸ್ಟಿಕ್ ಬಳಕೆಯನ್ನ ನಿಷೇದ ಮಾಡಲಾಗಿದ್ದು, ಆದರೂ ಸಹ ನಗರದ ಹಲವು ಕಡೆ ಬಡಾವಣೆಗಳಲ್ಲಿ ಅಂಗಡಿ, ಮುಂಗಟ್ಟುಗಳಲ್ಲಿ ವರ್ತಕರು ಪ್ಲಾಸ್ಟಿಕ್ ಬಳಕೆಯನ್ನು ಮಾಡುತ್ತಿದ್ದು, ಇಂತಹ ವರ್ತಕರನ್ನು ಗುರುತಿಸಿ, ಅವರಿಗೆ ನೋಟೀಸ್ ನೀಡಿ, ಅಗತ್ಯ ದಂಡ ವಿಧಿಸಬೇಕು, ಅಗತ್ಯ ಬಿದ್ದರೆ ಅವರ ಲೈಸನ್ಸ್ ರದ್ದುಗೊಳಿಸಬೇಕು ಎಂಬುದಾಗಿ ಹೇಳಿದರು.
ಈ ಸಭೆಯಲ್ಲಿ ನಗರಸಭೆ ಆಯುಕ್ತರಾದ ಮಹಂತೇಶ್, ಹಾಗೂ ನಗರಸಭೆ ವ್ಯವಸ್ಥಾಪಕರಾದ ರೆಹಮತ್, ಉನ್ನೀಸಾ, ಕಂದಾಯ ಅಧಿಕಾರಿ ಜಬೀವುಲ್ಲಾ, ಎಇಇ ರಾಜು, ಎಇ ಪ್ರಸನ್ನ ಕುಮಾರ್, ಅಕೌಂಟ್ ಸೂಪರಡೆಂಟ್ ಗೋವಿಂದರಾಜು, ಅಕೌಂಟೆಂಟ್ ಜನಾರ್ಧನ್ ಕರಡಿ, ಆರೋಗ್ಯ ನಿರೀಕ್ಷಕರಾದ ಮೀನಾಕ್ಷಿ, ಮಹಾಲಿಂಗಪ್ಪ, ಮಹಾಲಿಂಗರಾಜು, ಭೀಮರಾಜ್, ಸುಜಾತ, ನಯನ ಸೇರಿದಂತೆ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page