ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ನ್ಯಾಯಬೆಲೆ ಅಂಗಡಿ ಮಾಲೀಕರ ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಟಿ. ಕೃಷ್ಣಪ್ಪ

by | 14/12/22 | ಸಾಮಾಜಿಕ

ಚಳ್ಳಕೆರೆ;
ಚಳಿಗಾಲ ಅಧಿವೇಶನದಲ್ಲಿ ನ್ಯಾಯ ಬೆಲೆ ಅಂಗಡಿ ಮಾಲೀಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರ ಮೇಲೆ ಒತ್ತಡ ಹೇರುತ್ತೇವೆ ಎಂದು ನ್ಯಾಯಬೆಲೆ ಅಂಗಡಿ ಮಾಲೀಕರ ರಾಜ್ಯಧ್ಯಕ್ಷ ಟಿ. ಕೃಷ್ಣಪ್ಪ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನ್ಯಾಯ ಬೆಲೆ ಅಂಗಡಿ ಮಾಲೀಕರ ಸಭೆಯಲ್ಲಿ ಮಾತನಾಡಿದರು.
ವಿಶ್ವ ಆಹಾರ ಭದ್ರತೆ ಮಾರ್ಗಸೂಚಿಯಂತೆ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ನ್ಯಾಯ ಸಮ್ಮತ ಭದ್ರತೆ ನೀಡಬೇಕಿದೆ. ಆದರೆ, ರಾಜ್ಯದ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ತಾರತಮ್ಯ ಮಾಡಲಾಗುತ್ತಿದೆ. ಗೋವಾದಲ್ಲಿ ಒಂದು ಕ್ವಿಂಟಲ್ ಮಾರಾಟಕ್ಕೆ ೩೦೦ ರೂ, ಕೇರಳ ೨೨೦, ಮಹಾರಾಷ್ಟç ೨೧೦ ರೂ ಇದೆ. ರಾಜ್ಯದಲ್ಲಿ ಕೇವಲ ೧೦೦ ರೂಪಾಯಿ ಕೊಡಲಾಗುತ್ತಿದೆ. ಇದರಿಂದ ಅಂಗಡಿ ನಿರ್ವಹಣೆ ಮತ್ತು ಜೀವನ ನಡೆಸುವುದು ಕಷ್ಟವಾಗುತ್ತದೆ. ರಾಜ್ಯದಲ್ಲಿ ೧.೩೦ ಲಕ್ಷ ಪಡಿತರ ಚೀಟಿದಾರರಾದ ೪.೮೦ ಕೋಟಿ ಫಲಾನುಭವಿಗಳಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ.
ಕರೊನಾ ಪರಿಸ್ಥಿತಿಯಲ್ಲಿ ಯಾವುದೇ ನೆರವಿಲ್ಲದೆ ಬಡಕುಟುಂಬಗಳಿಗೆ ಪಡಿತರ ವಿತರಿಸಲಾಗಿದೆ. ಈಗಾಗಲೇ ರಾಜ್ಯದ ೪ ಲಕ್ಷ ನ್ಯಾಯಬೆಲೆ ಅಂಗಡಿ ಮಾಲೀಕರು ವಿವಿಧ ಬೇಡಿಕೆಗಳಿಗೆ ಅನೇಕ ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ. ಇದುವರೆಗೂ ಯಾವುದೇ ಬೇಡಿಕೆ ಈಡೇರಿಸಲಾಗಿಲ್ಲ. ಯಡಿಯೂರಪ್ಪ ಅವಧಿಯಲ್ಲಿ ಅಕ್ಕಿ, ಬೇಳೆ ಸೇರಿದಂತೆ ಇತರೆ ಪದಾರ್ಥಗಳನ್ನು ವಿತರಿಸಲು ಅವಕಾಶ ಕಲ್ಪಿಸಲಾಗಿತ್ತು. ಇದರಂತೆ ಕುಟುಂಬ ನಿರ್ವಹಣೆಗೆ ಬೇಕಾಗಿರುವ ಅಗತ್ಯ ಸಾಮಗ್ರಿಗಳನ್ನು ನ್ಯಾಯಬೆಲೆ ಅಂಗಡಿಯಲ್ಲಿ ವಿತರಿಸಲು ವ್ಯವಸ್ಥೆ ಕಲ್ಪಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದು ಹೇಳಿದರು.
ತಾಲೂಕು ಮಾಲೀಕರ ಸಂಘದ ಕಾರ್ಯದರ್ಶಿ ಚನ್ನಿಗರಾಮಯ್ಯ ಮಾತನಾಡಿ, ಕರೊನಾ ಪರಿಸ್ಥಿತಿಯಲ್ಲಿ ೫ ಜನ ನ್ಯಾಯಬೆಲೆ ಅಂಗಡಿ ಮಾಲೀಕರು ಮೃತಪಟ್ಟಿರುವ ಕುಟುಂಬಕ್ಕೆ ಇದುವರೆಗೂ ಪರಿಹಾರ ಸಿಕ್ಕಿಲ್ಲ. ಪಡಿತರ ವಿತರಣೆಯಲ್ಲಿ ಬಿಗಿಹಿಡಿತದ ನಿಯಮಗಳನ್ನು ಜಾರಿ ಮಾಡಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಪಡಿತರ ವಿತರಣೆಗೆ ಪ್ರತ್ಯೇಕವಾಗಿ ಬಯೋಮೆಟ್ರಿಕ್ ಪಡೆಯಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದ ಇದು ಸಾಧ್ಯವಾಗುತ್ತಿಲ್ಲ. ಪಡಿತರ ವಿತರಣೆಗೆ ಸರಳೀಕರಣ ಮಾಡಬೇಕು ಎಂದು ಒತ್ತಾಯಿಸಿದರು.
ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಬೊಪ್ಪಣ್ಣ, ಯಶೋಧಮ್ಮ, ನಾರಾಯಣಪ್ಪ, ವಸಂತಪ್ಪ, ಪಾರ್ವತಮ್ಮ, ನಾಗಲಕ್ಷಿö್ಮ, ಬಾಲನಾಗಮ್ಮ, ತಿಪ್ಪೇಸ್ವಾಮಿ, ನರಸಪ್ಪ, ಬೋರಣ್ಣ ಮತ್ತಿತರರು ಇದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *