ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ

by | 03/10/23 | ಕ್ರೇಡೆ

ಚಳ್ಳಕೆರೆ ಅ.3.ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ (ಪದವಿ ಪೂರ್ವ) ಚಿತ್ರದುರ್ಗ ಹಾಗೂ ಶ್ರೀ ನೀಲಕಂಠಯ್ಯ ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಚಳ್ಳಕೆರೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಮತ್ತು ವಿದ್ಯಾರ್ಥಿಗಳು ಬಾಲಕರ ಬಾಸ್ಕೇಟ್ ಬಾಲ್‌ನಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ವಿಜೇತರಾಗಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ವಿಜೇತ ಕ್ರೀಡಾಪಟುಗಳಿಗೆ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್.ಲಕ್ಷ್ಮಣ ಪ್ರಶಸ್ತಿ ಪತ್ರ ಫಲಕ ವಿತರಿಸಿ ನಂತರ ಮಾತನಾಡಿ ಪ್ರತಿಭೆ ಮತ್ತು ಕೌಶಲ್ಯ ಗ್ರಾಮೀಣಾ ಭಾಗದ ವಿದ್ಯಾರ್ಥಿಗಳಲ್ಲಿ ಇರುತ್ತದೆ. ಅನ್ನುವುದಕ್ಕೆ ಈ ವಿಜೇತ ಕ್ರೀಡಾಪಟುಗಳೇ ಸಾಕ್ಷಿ ಕ್ರೀಡೆಗಳಲ್ಲಿ ಸೋಲು ಗೆಲುವು ಭಾಗವಹಿಸುವುದು ಮುಖ್ಯ. ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗುತ್ತಾರೆ. ವಿಜೇತ ಬಯಲುಸೀಮೆ ಗ್ರಾಮೀಣಾ ಕ್ರೀಡಾಕೂಟಗಳಿಗೆ ಶುಭ ಹಾರೈಸಿದರು.
ರಾಜ್ಯಶಾಸ್ತç ಉಪನ್ಯಾಸಕ ಹಾಗೂ ಕ್ರೀಡಾ ಕಾರ್ಯದರ್ಶಿ ಹೆಚ್.ಆರ್.ಜಬೀವುಲ್ಲಾ ಮಾತನಾಡಿ ನನ್ನ ಶ್ರಮಕ್ಕೆ ಕ್ರೀಡಾಪಟುಗಳು ವಿಜೇತರಾಗಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲಾ ಮತ್ತು ಕಾಲೇಜಿಗೆ ಕೀರ್ತಿ ತಂದಿರುವುದು ತುಂಬಾ ಸಂತೋಷ ತಂದಿದೆ ಎಂದರು. ವಿಜೇತ ಕ್ರೀಡಾಪಟುಗಳು ಕ್ರೀಡಾ ಕಾರ್ಯದರ್ಶಿಯನ್ನು ಆಟದ ಮೈದಾನದಲ್ಲಿ ಮೇಲಕ್ಕೆ ಎತ್ತಿ ಜಯ ಘೋಷಣೆ ಕೂಗಿದರು.

ಬಾಲಕಿಯರ ವಾಲಿಬಾಲ್ ತಂಡ : ತನುಶ್ರೀ (ತಂಡದನಾಯಕಿ), ಯಶಸ್ವಿನಿ, ಸಂಜನ, ಕೀರ್ತನಾ, ಕೌಸರ್, ಅಕ್ಷತಾ, ಚಂದನ, ಮಾನಸ, ಐಶ್ವರ್ಯ
ಬಾಲಕಿಯರ ಕಬಡ್ಡಿ ತಂಡ : ಗಿರಿಜಮ್ಮ (ತಂಡದನಾಯಕಿ), ಸುಷ್ಮಿತ, ಸ್ಪಪ್ನ ಅರ್ಚನಾ, ಕಾವ್ಯ, ಮೇಘನಾ, ಪಲ್ಲವಿ
ಬಾಲಕರ ಬಾಸ್ಕೇಟ್‌ಬಾಲ್ ತಂಡ : ಅರುಣ್ (ತಂಡದ ನಾಯಕ) ಮಂಜುನಾಥ, ಅಭಿಯಾದವ್, ನವಾಜ್, ರಾಕೇಶ್
ಇದೇ ಸಂದರ್ಭದಲ್ಲಿ ಕ್ರೀಡಾ ಕಾರ್ಯದರ್ಶಿ ಇಮ್ರಾನ್, ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯದರ್ಶಿ ಹಾಗೂ ಸಾಹಿತಿ, ನಾಗರಾಜ್ ಬೆಳಗಟ್ಟ, ರಾಜ್ಯ ಪ್ರಶಸ್ತಿ ಪುರಸ್ಕೃತ ಉಪನ್ಯಾಸಕ ಡಾ. ತಿಮ್ಮಣ್ಣ, ಉಪನ್ಯಾಸಕರಾದ ಮಂಜುನಾಥ, ಕರುಡಪ್ಪ, ಪೂರ್ಣಚಾರ್, ಮಧು, ದೈಹಿಕ ಉಪನ್ಯಾಸಕ ರಿಜ್ವಾನ್, ವಾಲಿಬಾಲ್ ತರಬೇತಿದಾರರಾದ ಪವನ್ ಮತ್ತು ಚಮನ್, ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಕಾಲೇಜಿನ ಪ್ರಾಚಾರ್ಯ ಎಂ.ರವೀಶ್, ಉಪನ್ಯಾಸಕರ ವೃಂದ ಹಾಗೂ ಸಿಬ್ಬಂದಿ ಅಭಿನಂದಿಸಿದೆ.

Latest News >>

ನಗರದ ನಗರಸಭೆಗೆ ಜಿಲ್ಲಾಧಿಕಾರಿ ವೆಂಕಟೇಶ್ ಭೇಟಿ ನಗರಸಭೆಯ ಆಯುಕ್ತರು,ಅಧಿಕಾರಿಗಳೊಂದಿಗೆ ಸಭೆ

ಹಿರಿಯೂರು: ಇದೀಗ ಪ್ರಸ್ತುತ ತಿಂಗಳು ಮಳೆಗಾಲ ಆಗಿರುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ನಗರದ ಜನರ ಉತ್ತಮ...

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ

ಹಿರಿಯೂರು ಜೂ.21: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ

ಚಿತ್ರದುರ್ಗ ಜೂನ್.21: ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ...

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಮತ ಮಾನಸಿಕ ಸದೃಢತೆ ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿ

ಚಿತ್ರದುರ್ಗ ಜೂನ್21: ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ...

ವಿದ್ಯಾರ್ಥಿಗಳು ಪ್ರತಿ ದಿನ ಯೋಗಾಸನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ.

ನಾಯಕನಹಟ್ಟಿ:: ವಿದ್ಯಾರ್ಥಿಗಳು ಪ್ರತಿಯೊಬ್ಬರು ಯೋಗಾಸನ ಮಾಡುವುದು ರೂಡಿಸಿಕೊಂಡಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ. ಎಂದು ಶ್ರೀ...

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ – ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page