ನಗರದ ಹೂವಿನ ಮಾರುಕಟ್ಟೆಯಲ್ಲಿ ಹೂಬೆಳೆಗಾರ ರೈತರಿಗೆ ತುಂಬಾಅನ್ಯಾಯವಾಗುತ್ತಿದೆ:ಕೆ.ಪಿ.ಭೂತಯ್ಯ

by | 18/06/24 | ಪ್ರತಿಭಟನೆ


ಚಿತ್ರದುರ್ಗ:
ನಗರದ ಹೂವಿನ ಮಾರುಕಟ್ಟೆಯಲ್ಲಿ ಹೂ ಬೆಳೆಗಾರ ರೈತರಿಗೆ ತುಂಬಾ ಅನ್ಯಾಯವಾಗುತ್ತಿದೆ. ಅನೇಕ ಬಾರಿ ರೈತರು, ಅಂಗಡಿ ಮಾಲೀಕರು ಹಾಗೂ ಎಪಿಎಂಸಿ ಮಾರುಕಟ್ಟೆ ಅಧಿಕಾರಿಗಳೊಂದಿಗೆ ಹೂವಿನ ಅಳತೆಯನ್ನು 6 ಅಡಿಗೆ ಸೀಮಿತಗೊಳಿಸಿದ್ದರೂ ಇದನ್ನು ಮೀರಿ ವ್ಯಾಪಾರಗಾರರು ಸುಮಾರು 9 ರಿಂದ 10 ಅಡಿ ವರೆಗೂ ಅಳತೆ ಮಾಡುತ್ತಾರೆ. ಕೂಡಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರೈತರು, ಅಂಗಡಿಮಾಲೀಕರು, ಎಪಿಎಂಸಿ ಅಧಿಕಾರಿಗಳು ಸಭೆ ನಡೆಸಬೇಕೆಂದು ರಾಜ್ಯ ರೈತ ಮುಖಂಡರಾದ ಕೆ.ಪಿ. ಭೂತಯ್ಯ ಒತ್ತಾಯಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಹೂವು ಬೆಳೆಗಾರ ರೈತರೊಂದಿಗೆ ತೆರಳಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದ ಅವರು ನಗರದ ಎಪಿಎಂಸಿ ಆವರಣದಲ್ಲಿ ಹೂವಿನ ಮಾರುಕಟ್ಟೆ ಇದ್ದು, ಜಿಲ್ಲೆಯ ಸುತ್ತಮುತ್ತಲಿನ ಸುಮಾರು 50 ಹಳ್ಳಿಯ ರೈತರು ಹೆಚ್ಚಾಗಿ ಹೂವನ್ನು ಬೆಳೆಯುತ್ತಾರೆ. ಚಿತ್ರದುರ್ಗದಿಂದ ಹೂವು ಅನೇಕ ಬೇರೆ ಬೇರೆ ಜಿಲ್ಲೆಗಳಿಗೆ ಹಾಗೂ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೂ ಕೂಡ ಹೂವನ್ನು ರಫ್ತು ಮಾಡುತ್ತಾರೆ ಎಂದರಲ್ಲದೆ,
ಜಿಲ್ಲೆಯ ರೈತರು ಈಗ ಬರಗಾಲದಿಂದ ತತ್ತರಿಸಿದ್ದು, ಸರ್ಕಾರವು ಪೆಟ್ರೋಲ್ 3.00 ರೂಪಾಯಿ ಹಾಗೂ ಡೀಸೆಲ್ ರೂ 3.50 ದರ ಏರಿಕೆ ಮಾಡಿದ್ದರಿಂದ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತದೆ.ಆದ್ದರಿಂದ ಕೂಡಲೇ ಸರ್ಕಾರವು ಈ ದರವನ್ನು ವಾಪಸ್ಸು ಪಡೆಯಬೇಕೆಂದು ಹಾಗೂ ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರ್ಕಾರ ಕಡಿಮೆ ಮಾಡಬೇಕೆಂದು ಅವರು ಮನವಿ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಹಣವನ್ನು ಮಹಿಳೆಯರಿಗೆ ನೀಡುತ್ತಿದ್ದು, ಈ ಹಣವನ್ನು ಬಿತ್ತನೆ ಮಾಡುವ ಸಮಯಕ್ಕೆ ಬರುತ್ತದೆ ಎಂದು ರೈತ ಮಹಿಳೆಯರು ಬ್ಯಾಂಕಿನಲ್ಲಿ ಶೇಖರಣೆ ಮಾಡಿಕೊಂಡಿದ್ದಾರೆ. ಆದರೆ, ಈಗ ಬ್ಯಾಂಕಿನಲ್ಲಿ ಹಣ ಡ್ರಾ ಮಾಡಲು ಹೋದಾಗ ಈ ಹಣವನ್ನು ನಿಮ್ಮ ಸಾಲಕ್ಕೆ ಜಮಾ ಮಾಡಿಕೊಳ್ಳುತ್ತೇವೆ ಎಂಬುದಾಗಿ ಬ್ಯಾಂಕ್ ಮ್ಯಾನೇಜರ್ ಅವರು ಕೊಡುತ್ತಿಲ್ಲ ಎಂಬುದಾಗಿ ಅವರು ಆರೋಪಿಸಿದರು.
ಬೆಳೆ ಪರಿಹಾರ ಸಂಬಂಧಿತ ಯೋಜನೆ, ಉದ್ಯೋಗ ಖಾತರಿ ಹಣ, ವೃದ್ಧಾಪ್ಯ ವೇತನ, ವಿಧವೆಯರ ವೇತನ ಈ ಹಣವನ್ನು ಹೇಗೆ ಸಾಲಕ್ಕೆ ಜಮಾ ಮಾಡಿಕೊಳ್ಳವುದಿಲ್ಲವೋ ಅದೇ ರೀತಿ ಕೂಡಲೇ ಜಿಲ್ಲಾಧಿಕಾರಿಗಳು ಲೀಡ್ ಬ್ಯಾಂಕಿಗೆ ಮಾಹಿತಿ ನೀಡಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಹಣವನ್ನು ಸಾಲಕ್ಕೆ ಜಮಾ ಮಾಡಬಾರದೆಂದು ನಿರ್ದೇಶನ ನೀಡಬೇಕೆಂದು ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ರೈತ ಮುಖಂಡರಾದ ಕೆ.ಪಿ.ಭೂತಯ್ಯ, ಜಿಲ್ಲಾ ಉಪಾಧ್ಯಕ್ಷ ಚಿಕ್ಕವನಹಳ್ಳಿ ರುದ್ರಸ್ವಾಮಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಎಸ್. ಕೆ. ಕುಮಾರಸ್ವಾಮಿ,ಜಿ.ಪಿ. ತಿಪ್ಪೇಸ್ವಾಮಿ, ಜೆ. ಮಾಧವರೆಡ್ಡಿ, ಜಿಲ್ಲಾಕಾರ್ಯಾಧ್ಯಕ್ಷ ಹೊರಕೇರಪ್ಪ, ಕೆ.ಎಂ. ಕಾಂತರಾಜ್, ಎ.ಟಿ. ತಿಪ್ಪೇಸ್ವಾಮಿ, ತಾಲ್ಲೂಕು ಅಧ್ಯಕ್ಷ ಕೆ.ಸಿ. ಧನಂಜಯ, ಜಿ. ಕರಿಕರಿಬಸವಣ್ಣ, ಪಿ. ಮಾರುತಿ, ಮಲ್ಲಿಕಾರ್ಜುನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page