ನಗರಸಭೆ ಆಡಳೀತ ಯಂತ್ರಕ್ಕೆ ಚುರುಕು ಮುಟ್ಟಿಸುವರೇ … ಹ್ಯಾಟ್ರಿಕ್ ಗೆಲುವಿನ ಸರದಾರ ಶಾಸಕ ಟಿ.ರಘುಮೂರ್ತಿ ಸಾರ್ವಜನಿಕರ ಪ್ರಶ್ನೆ.

by | 16/05/23 | ಜನಧ್ವನಿ

ಚಳ್ಳಕೆರೆಜನಧ್ವನಿ ವಾರ್ತೆ ಮೇ 16
ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕರೇ ತುಕ್ಕು ಹಿಡಿದ ನಗರಸಭೆ ಆಡಳೀತ ಯಂತ್ರಕ್ಕೆ ಚುರುಕು ಮುಟ್ಟಿಸಬೇಕಿದೆ.
ಸದಾ ಜನಜಂಗುಳಿ, ಸಾಲು ನಿಂತಿರುವ ಜನ, ಅಧಿಕಾರಿಗಳ ಜೊತೆ ಮಾತಿನ ಚಕಮಕಿ, ಜನರಿಂದ ಗಿಜಿಗುಡುವ ಕಚೇರಿಯ ವಿವಿಧ ವಿಭಾಗಗಳು. ಇವೆಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಕಂಡು ಬರುವ ದೃಶ್ಯಗಳು. ಆದರೆ ಚಳ್ಳಕೆರೆ ನಗಸರಭೆಯ ವಿಚಾರಕ್ಕೆ ಬಂದರೆ ವ್ಯತಿರಿಕ್ತವಾದ ಸನ್ನಿವೇಶವನ್ನು ನಾವು ಕಾಣಬಹುದು ಅಂದರೆ ಇಲ್ಲಿನ ಸಿಬ್ಬಂದಿ ಕಾರ್ಯ ನಿರ್ವಹಿಸುವ ವಿಧಾನವೇ ಬೇರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ನಗರಸಭೆ ಕಚೇರಿಗೆ ನಗರದ ನಾಗರೀಕರು ಆಸ್ತಿ ತೆರಿಗೆ.ಇ-ಖಾತೆ, ಮನೆ ಕಟ್ಟಲು ಪರವಾನಿಗೆ, ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ನಾಗರೀಕರು ಸಿಬ್ಬಂದಿಗಳ ಬಳಿ ಅಲೆದಾಡಿದರೂ ಕೆಲಸಗಳೇ ಆಗುತ್ತಿಲ್ಲ ಎಂಬ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿವೆ.
ನಗರದಲ್ಲಿ ನಿವೇಶ ಹಾಗೂ ಆಸ್ತಿ ಮಾರಾಟ ಮಾಡ ಬೇಕಾದರೆ ಇ-ಸ್ವತ್ತು ಮಾಡಿಸಿಕೊಳ್ಳುವುದು ಅತ್ಯಾಗತ್ಯವಾಗಿದೆ ಕಾನೂನು ರೀತಿ ಇ-ಖಾತೆ ಮಾಡಿಸಿಕೊಳ್ಳ ಬೇಕಾದರೆ ಸ್ವತ್ತಿನ ಕಂದಾಯ ಕಟ್ಟುವುದು ಹಾಗು ಇದರ ಶುಲ್ಕು ಒಂದು ನೂರು ಎಂದು ಇದೆ ಆದರೆ ಇಲ್ಲಿ ಸುಮಾರು ಇ-ಸ್ವತ್ತು ಖಾತೆ ಮಾಡಿಸಿಕೊಳ್ಳಲು ಅಗತ್ಯ ದಾಖಲೆಗಳೊಂದಿಗೆ ಬಂದರೂ ಸಹ ತಿಂಗಳು ಗಟ್ಟಲೆ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಕಚೇರಿಗೆ ಅಲೆದು ಹೈರಾಣಾಗಿದ್ದಾರೆ ಹಣ ಹಾಗೂ ಮಧ್ಯವರ್ತಿಗಳಿಲ್ಲದೆ ಕಚೇರಿಯಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪಗಳಾಗಿವೆ.
ಜನನ-ಮರಣ ಪ್ರಮಾಣ ಪತ್ರ, ಇ-ಆಸ್ತಿ ದಾಖಲೆ, ಖಾತೆ ಬದಲಾವಣೆ, ನೀರಿನ ಸಂಪರ್ಕ, ಸ್ವಚ್ಛತೆ, ಬೀದಿದೀಪ, ಮನೆ ಲೈಸನ್ಸ್, ಅಂಗಡಿ ಲೈಸನ್ಸ್, ತೆರಿಗೆ ಪಾವತಿ ಹೀಗೆ ಅನೇಕ ಕೆಲಸಗಳಿಗಾಗಿ ಸಾರ್ವಜನಿಕರು ನಗರಸಭೆಗೆ ಆಗಮಿಸುತ್ತಾರೆ. ಸಕಾಲಕ್ಕೆ ಸರಿಯಾಗಿ ಸಾರ್ವಜನಿಕರಿಗೆ ಕೆಲಸ ಆಗದೆ ಜನರ ಸಮಸ್ಯೆಗಳನ್ನು ಬಗೆಹರಿಸಬೇಕಾದ ನಗರಸಭೆಯೇ ಸಮಸ್ಯೆಗಳ ತಾಣವಾದರೆ ಹೇಗೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ನಾಮಫಲಕವಿಲ್ಲ
ಕಂದಾಯ ವಿಭಾಗ, ದೂರು ವಿಭಾಗ, ಸಕಾಲ ವಿಭಾಗ, ಇಂಜನಿಯರಿAಗ್, ಟಪಾಲು, ಕಂಪ್ಯೂಟರ್, ಕುಡಿಯುವ ನೀರು, ಆರೋಗ್ಯ ನಿರೀಕ್ಷಕರ ವಿಭಾಗ ಹೀಗೆ ಇನ್ನು ವಿವಿಧ ವಿಭಾಗಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಯಾವ ವಿಭಾಗ ಎಲ್ಲಿವೆ, ಅಧಿಕಾರಿಗಳು ಯಾರು ಎಂಬುದು ಕೌಂಟರ್ ನಲ್ಲಿ ವಿಭಾಗಗಳ ನಾಮಫಲವಿಲ್ಲ ಹಾಗೂ ಅಧಿಕಾರಿಗಳು ,ಸಿಬ್ಬಂದಿಗಳು ಕರ್ತವ್ಯದ ವೇಳೆ ಗುರಿತನ ಚೀಟಿಗಳನ್ನು ಹಾಕಿಕೊಳ್ಳದೆ ಇದರುವುದು ಕಚೇರಿ ಸಿಬ್ಬಂದಿಯಾರು,ಸಾರ್ವಜನಿಕರು ಯಾರು ಎಂಬುದು ತಿಳಿಯದಂತಾಗಿದೆ.
ಚರಂಡಿಗಳಲ್ಲಿ ಹೂಳು,


ನಗರದ ಬಹುತೇಕ ವಾರ್ಡ್ಗಳಲ್ಲಿ ರಸ್ತೆಗಳು ಕಿತ್ತು ಹೋಗವೆ , ಪ್ರಮುಖ ರಸ್ತೆಯ ಪಕ್ಕದಲ್ಲಿರುವ ಚರಂಡಿಗಳು ಹೂಳು ತುಂಬಿದ್ದು ಗೊಬ್ಬೆದ್ದು ನಾರುತ್ತಿದ್ದು ಸಾರ್ವಜನಿಕರು ಮೂಗು ಮುಚ್ಚಿಕೊಂಡು ನಡೆಯ ಬೇಕಾದ ಅನಿವಾರ್ಯತೆ ಇದೆ. ಅದೇ ರೀತಿ ತ್ಯಾಗರಾಜ ನಗರದ ಪಾರ್ಕ್ ಬಳಿ ಇರುವ ಚರಂಡಿ ಹೂಳು ತುಂಬಿದ್ದು ಗೊಬ್ಬು ವಾಸನೆ ಬಡಿಯುತ್ತಿದ್ದು ಈ ಪಾರ್ಕ್ನಲ್ಲಿ ಪರಿಮಿಡ್ ಧ್ಯಾನ ಮಂದಿರ ಇರುವುದರಿಂದ ಮಹಿಳೆಯರು, ವೃದ್ದರು, ಸೇರಿದಂತೆ ಹಲವರು ಬರುತ್ತಾರೆ ಇಲ್ಲಿನ ಅವ್ಯವ್ಯಸ್ಥೆ ಸರಿಪಡಿಸಲು ನಗರಸಭೆ ಮುಂದಾಗುತ್ತಿಲ್ಲ.
ಹಲವು ಕಡೆ ಕುಡಿಯುವ ನೀರಿನ ಪೈಪ್ ಹೊಡೆದು ಚರಂಡಿ ಪಾಲಾಗುತ್ತಿವೆ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಎಂಬ ಆರೋಪಗಳು ನಾಗರೀಕರಲ್ಲಿ ಕೇಳಿ ಬರುತ್ತಿವೆ.

ವಿರೋಧ ಪಕ್ಷದ ಅಭ್ಯರ್ಥಿಗಳಿಗೆ ಆಹಾರವಾದ ನಗರಸಭೆ
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತಯಾಚನೆ ಮಾಡುವವೇಳೆ ಕ್ಷೇತ್ರ ಎಷ್ಟೇ ಅಭಿವೃದ್ಧಿಯಾಗಿದ್ದರೂ ಸಹ ಶಾಸಕರು ಏನು ಅಭಿವೃದ್ಧಿ ಮಾಡಿದ್ದಾರೆ ನಗರದಲ್ಲಿ ಸ್ವಚ್ಚತೆಯಿಲ್ಲ, ಚರಂಡಿಹೂಳು ತುಂಬಿವೆ. ಕಸ ಎಲ್ಲೆಂದರೆಲ್ಲಿ ಬಿದ್ದಿದೆ. ಬೀದಿ ದೀಪ ಇಲ್ಲ, ಕುಡಿಯುವ ನೀರು ಸರಿಯಾಗಿ ಜನರಿಗೆ ಬಿಡುತ್ತಿಲ್ಲ ಎಂದು ವಿರೋಧ ಪಕ್ಷದ ಅಭ್ಯರ್ಥಿಗಳು ಶಾಸಕರ ವಿರುದ್ದ ಆರೋಪ ಮಾಡಿರುವುದು ಕಂಡು ಬಂದಿದೆ,
ನಗರಸಭೆ ಅಧಿಕಾರಿಗಳು ,ಸಿಬ್ಬಂದಿಗಳು ಹಾಗೂ ಸದಸ್ಯರು ಸರಿಯಾಗಿ ಕೆಲಸ ಮಾಡಿದ್ದರೆ ಶಾಸಕರ ವಿರುದ್ದ ಆರೋಪಗಳು ಕೇಳಿ ಬರುತ್ತಿಲ್ಲ.
ಈಗಲಾದರೂ ನೂತನ ಶಾಸಕರು ಹಾಗೂ ಬಾವಿ ಸಚಿವರು ನಗರಸಭೆ ಕಾರ್ಯವೈಕರಿ ಹಾಗೂ ಕಾರ್ಯವಿಳಂಬ ಧೋರಣೆ ಅನುಸರಿಸುವ ಅಧಿಕಾರಿಗಳಿಗೆ, ಸಿಬ್ಬಂದಿಗೆ ಚುರುಕು ಮುಟ್ಟಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Latest News >>

ನಗರದ ನಗರಸಭೆಗೆ ಜಿಲ್ಲಾಧಿಕಾರಿ ವೆಂಕಟೇಶ್ ಭೇಟಿ ನಗರಸಭೆಯ ಆಯುಕ್ತರು,ಅಧಿಕಾರಿಗಳೊಂದಿಗೆ ಸಭೆ

ಹಿರಿಯೂರು: ಇದೀಗ ಪ್ರಸ್ತುತ ತಿಂಗಳು ಮಳೆಗಾಲ ಆಗಿರುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ನಗರದ ಜನರ ಉತ್ತಮ...

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ

ಹಿರಿಯೂರು ಜೂ.21: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ

ಚಿತ್ರದುರ್ಗ ಜೂನ್.21: ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ...

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಮತ ಮಾನಸಿಕ ಸದೃಢತೆ ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿ

ಚಿತ್ರದುರ್ಗ ಜೂನ್21: ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ...

ವಿದ್ಯಾರ್ಥಿಗಳು ಪ್ರತಿ ದಿನ ಯೋಗಾಸನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ.

ನಾಯಕನಹಟ್ಟಿ:: ವಿದ್ಯಾರ್ಥಿಗಳು ಪ್ರತಿಯೊಬ್ಬರು ಯೋಗಾಸನ ಮಾಡುವುದು ರೂಡಿಸಿಕೊಂಡಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ. ಎಂದು ಶ್ರೀ...

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ – ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page