ನಗರ ಪ್ರದೇಶದಲ್ಲಿ ಸರಕಾರಿ ಭೂಮಿಯಲ್ಲಿ ವಾಸ ಮಾಡುವ ಸಾವಿರಾರು ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಯಾಗದೆ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಶಾಸಕ ಟಿ.ರಘುಮೂರ್ತಿ.

by | 27/03/23 | ಸುದ್ದಿ

ಚಳ್ಳಕೆರೆ ಜನಶ್ವನಿ ವಾರ್ತೆ ಮಾ.27
ಯಾವುದೇ ದಾಖಲೆಗಳಲ್ಲೆ ವಾಸ ಮಾಡುತ್ತಿರುವ ಜನ ವಸತಿ ಪ್ರದೇಶಗಳು ಸರಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು ಈಗ ಸರಕಾರ ಅಂತಹ ಕುಟುಂಬಗಳಿಗೆ ಹಕ್ಕು ಪತ್ರ ನೀಡಲಾಗುತ್ತಿದೆ ಎಂದು ಶಾಸಕ ಟಿ.ರಘುಮುರ್ತಿ ಹೇಳಿದರು.
ನಗರದ ತಾಲೂಕು ಕಚೇರಿ ಆವರಣದಲ್ಲಿ ಹೊಸದಾಗಿ ಆಯ್ಕೆಯಾದ ಕಂದಾಯ ಗ್ರಾಮಗಳ1675 ನಿವಾಸಿಗಳಿಗೆ ಕಂದಯಾ ಇಲಾಖೆ ಆಯೋಜಿಸಿದ್ದ ಹಕ್ಕು ಪತ್ರವಿತರಿಸಿ ಮಾತನಾಡಿದರು.
ನಗರ ಪ್ರದೇಶಗಳಲ್ಲಿ ಸುಮಾರು ವರ್ಷಗಳಿಂದ ಸರಕಾರಿ ಭೂಮಿಯಲ್ಲಿ ವಾಸಮಾಡುವ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆಗೆ ನ್ಯಾಯಾಲಯದ ಮೆಟ್ಟಿಲೇರಿರುವುದರಿಂದ ಸಾವಿರಾರು ಕುಟುಂಬಗಳು ಹಕ್ಕು ಪತ್ರ ಹಾಗೂ ಸರಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ವಿಷಾಧಿಸಿದರು.
ಚಳ್ಳಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 19 ಗ್ರಾಮಗಳಲ್ಲಿ ಲಂಬಾಣಿ, ಬೋವಿ, ಯಾದವ, ಸೇರಿದಂತೆ ವಿವಿಧ ಸಮುದಾಯಗಳು ಸರಕಾರಿ ಹಾಗೂ ಖಾಸಗಿ ಭೂಮಿಯಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಂಟುAಬಗಳು ವಾಸ ಮಾಡುವ ಮಜರೆ ಗ್ರಾಮಗಳಲ್ಲಿ ಒಟ್ಟು 19 ಹಳ್ಳಿಗಳಲ್ಲಿ ವಾಸಿಸುವ 1575 ಜನರಿಗೆ ಹಕ್ಕುಪತ್ರ ವಿತರಿಸಿದರು.


ಈ ಗ್ರಾಮಗಳ ನಿವಾಸಿಗಳಿಗೆ ತಮ್ಮ ಮನೆಯಿರುವ ಜಾಗದ ಹಕ್ಕುಪತ್ರ ದೊರೆಯದೆ ಅಭದ್ರತೆಯ ಭಾವ ಕಾಡುತ್ತಿತ್ತು. ಈಗ ಅವರಿಗೆ ಹಕ್ಕು ಪತ್ರ ವಿತರಣೆಯಾಗಿರುವುದು ನೆಮ್ಮದಿ ಮೂಡಿಸಿದೆ. ಉಳಿದ ಗ್ರಾಮಗಳಲ್ಲಿಯೂ ಶೀಘ್ರ ಹಕ್ಕುಪತ್ರ ವಿತರಣೆಯಾಗಲಿದೆ. ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಬಡಕುಟುಂಬ ಹಾಗೂ ತಳ ಸಮುದಾಯದಕ್ಕೆ ಸರಕಾರದ ಸೌಲಭ್ಯಗಳನ್ನು ತಲುಪಿಸಲು ಮುಂದಾಗುವಮತೆ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಸೂಚಿಸಿದರು.
ಇದೇ ಸಂದರ್ಭದಲ್ಲಿ ಸರಕಾರಿ ಗೋಮಾಳದಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿ ವಾಸ ಮಾಡುತ್ತಿದ್ದು 69 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಸಿದಿರು ವಿಕಲಚೇತನರಿಗೆ ಅಗತ್ಯ ಪರಿಕರಗಳನ್ನು ವಿತರಣೆ ಮಾಡಿದರು.

ತಹಶೀಲ್ದಾರ್ ರೇಹಾನ್ ಪಾಷ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಸುಮಕ್ಕ , ಉಪಾಧ್ಯಕ್ಷೆ ಮಂಜಳ , ಗ್ರಾಪಂ ಅಧ್ಯಕ್ಷರಾದ ಕಾಟಮಲಿಂಗಯ್ಯ, ಜಯಬಾಯಿ ಕಂದಾಯ ನಿರೀಕ್ಷಕ ಲಿಂಗೇಗೌಡ, ಶಿರಸ್ತೆದಾರ್ ಸದಾಶಿವಪ್ಪ, ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page