ಹಿರಿಯೂರು:
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಒಟ್ಟುಗೂಡಿ ಹೆಚ್ಚಿನಮಟ್ಟದಲ್ಲಿ ತಂಬಾಕು ದಾಳಿಗಳನ್ನು ಕೈಗೊಂಡು ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂಬುದಾಗಿ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ನಗರಸಭೆ ಇಲಾಖೆಯಲ್ಲಿ ತಮ್ಮ ನಿಯಂತ್ರಣ ಕೋಶ ಮತ್ತು ತಂಬಾಕು ನಿಯಂತ್ರಣ ತನಿಖಾ ತಂಡವನ್ನು ರಚಿಸುವುದು ಮತ್ತು ತಂಬಾಕು ಮಾರಾಟಗಾರರಿಗೆ ಪರವಾನಗಿಯನ್ನು ನೀಡಬೇಕು ಅಲ್ಲದೆ, ಕೋಟ್ಪಾ-2003ರ ಕಾಯ್ದೆಯ ಕಲಂ 5 ಮತ್ತು 7ರ ಅಡಿಯಲ್ಲಿ ಎಫ್.ಐ.ಆರ್ ದಾಖಲಿಸಲು ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯವರು ಸೂಕ್ತಕ್ರಮ ಕೈಗೊಳ್ಳಬೇಕು ಎಂಬುದಾಗಿ ಸೂಚಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಹೆಚ್ಚಾಗಿರುತ್ತದೆ ಇದರಿಂದಾಗಿ ಶೇಕಡ 9 ರಷ್ಟು ಕ್ಯಾನ್ಸರ್ ನಿಂದ, ಶೇ.35ರಷ್ಟು ಹೃದಯಸಂಬಂಧಿ ಕಾಯಿಲೆಗಳಿಂದ, ಶೇ.16ರಷ್ಟು ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ಹಾಗೂ ಶೇ.3ರಷ್ಟು ಸಕ್ಕರೆ ಕಾಯಿಲೆ ಮತ್ತು ಪಾರ್ಶ್ವ ವಾಯು ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ.
ಈ ನಿಟ್ಟಿನಲ್ಲಿ ಗ್ರಾಮೀಣ ಮಟ್ಟದಲ್ಲಿ ಮತ್ತು ನಗರ ಪ್ರದೇಶಗಳಲ್ಲಿ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಸಾರ್ವಜನಿಕರಿಗೆ ಹೆಚ್ಚಿನ ಮಟ್ಟದಲ್ಲಿ ಅರಿವನ್ನು ಮೂಡಿಸಬೇಕು ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುವ ತೊಂದರೆಗಳ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂಬುದಾಗಿ ಹೇಳಿದರು.
ಜಿಲ್ಲಾ ಸಲಹೆಗಾರರಾದ ಬಿ.ಎಂ.ಪ್ರಭುದೇವ್ ಮಾತನಾಡಿ ಕೋಟ್ಟಾ-2003ರ ಕಾಯ್ದೆಯ ಕಲಂ 4ರ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ದಂಡ ವಿಧಿಸುವುದು. 6ಎ ಅಡಿಯಲ್ಲಿ 18ವರ್ಷದೊಳಗಿರುವ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಕ್ರಮವಹಿಸಬೇಕು ಎಂದರಲ್ಲದೆ,
6ಬಿ ಅಡಿಯಲ್ಲಿ ಶಿಕ್ಷಣಸಂಸ್ಥೆಗಳ ಸುತ್ತ-ಮುತ್ತ 100ಗಜಗಳ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ಗಮನ ಹರಿಸುವುದು. ಹಾಗೆ ಕಲಂ 5 ಮತ್ತು 7ರ ಅಡಿಯಲ್ಲಿ ಎಫ್.ಐ.ಆರ್. ದಾಖಲಿಸುವಂತೆ ಹಾಗೂ ಶಾಲೆಗಳ ಸುತ್ತ-ಮುತ್ತ 100ಗಜಗಳ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಆಗುತ್ತಿರುವ ಶಾಲೆಗಳಪಟ್ಟಿ ಮಾಡಬೇಕು ಎಂಬುದಾಗಿ ಹೇಳಿದರು.
ಸಾಮಾಜಿಕ ಕಾರ್ಯಕರ್ತರಾದ ಕೆ.ಎಂ.ತಿಪ್ಪೇಸ್ವಾಮಿ ಮಾತನಾಡಿ, ತಂಬಾಕು ವ್ಯಸನದಿಂದ ಮುಕ್ತರಾಗಲು ಜಿಲ್ಲಾದ್ಯಂತ ಇರುವ 11 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 5 ತಾಲ್ಲೂಕು ಸಾರ್ವಜನಿಕಆಸ್ಪತ್ರೆಗಳಲ್ಲಿ, ಜಿಲ್ಲಾ ಆಸ್ಪತ್ರೆಯಲ್ಲಿರುವಂತಹ ತಂಬಾಕುವ್ಯಸನ ಮುಕ್ತಕೇಂದ್ರ ಕೊಠಡಿ ಸಂಖ್ಯೆ:48ಎ ರಲ್ಲಿ ಹಾಗೂ ದಂತವಿಭಾಗದಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದಾಗಿ ಹೇಳಿದರು.
ಈ ಸಭೆಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಎ.ಇ.ಇ, ಆರ್.ಡ್ಬ್ಲ್ಯೂ.ಎಸ್ , ಎಸ್.ಯು.ಬಿ, ಆರೋಗ್ಯ ನಿರೀಕ್ಷಣಾಧಿಕಾರಿಗಳು, ನಗರಸಭೆ ಸಹಾಯಕ ಉಪನಿರೀಕ್ಷಕರು, ಹಿರಿಯೂರು ಪೊಲೀಸ್ ಇಲಾಖೆ, ಶಿಕ್ಷಣ ಸಂಯೋಜಕರು-ಶಿಕ್ಷಣ ಇಲಾಖೆ, ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆಯವರು ಹಾಗೂ ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕರು, ತಾಲ್ಲೂಕು ಪಂಚಾಯತ್, ದ್ವಿತೀಯ ದರ್ಜೆ ಸಹಾಯಕರು, ಪಿಡ್ಬ್ಯೂಡಿ ಇಲಾಖೆ, ಅಬಕಾರಿ ಇಲಾಖೆಯವರು, ಪೊಲೀಸ್ ನಿರೀಕ್ಷಕರು, ಗ್ರಾಮಾಂತರ ಪೊಲೀಸ್ ಠಾಣೆ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments