ನಟ ದರ್ಶನ್ ಗ್ಯಾಂಗ್ ಕೊಲೆ ಮಾಡಿದ ರೇಣುಕಾಸ್ವಾಮಿ ಮನೆಗೆ ರಾಜಕೀಯ ನಾಯಕರು ಭೇಟಿ ನೀಡಿ ಸಹಾಯ ಮಾಡುವ ಮೂಲಕ ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

by | 18/06/24 | ಸುದ್ದಿ


ಚಿತ್ರದುರ್ಗ ಜೂ.18 ನಟ ದರ್ಶನ್ ಗ್ಯಾಂಗ್ ಕೊಲೆ ಮಾಡಿದ ರೇಣುಕಾಸ್ವಾಮಿ ಮನೆಗೆ ರಾಜಕೀಯ ನಾಯಕರು ಭೇಟಿ ನೀಡಿ ಸಹಾಯ ಮಾಡುವ ಮೂಲಕ ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಟ ದರ್ಶನ್‌ ಗ್ಯಾಂಗ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿ ಮನೆಗೆ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ , ಪ್ರತಿಪಕ್ಷ ನಾಯಕ ಬಿ.ವೈ ವಿಜಯೇಂದ್ರ . ಸಂಸದ ಗೋವಿಂದ ಕಾರಜೋಳ ಮುಂತಾದವರು ಭೇಟಿ ನೀಡಿದ್ದು, ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.ವಿಜಯೇಂದ್ರ ಅವರು ಮೃತನ ಕುಟುಂಬಕ್ಕೆ 2 ಲಕ್ಷ ರೂ.ಗಳ ಧನಸಹಾಯ ನೀಡಿದ್ದಾರೆ.


ರೇಣುಕಾಸ್ವಾಮಿ‌ ಮನೆಗೆ ಭೇಟಿ ನೀಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಹತ್ಯೆ ಪ್ರಕರಣ ಕುರಿತು ಮತ್ತಷ್ಟು ಮಾಹಿತಿ ಪಡೆದು, ಸೂಕ್ತ ತನಿಖೆ ಮಾಡಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ರೇಣುಕಾಸ್ವಾಮಿ ತಂದೆ, ತಾಯಿ ಮಗನ ಭೀಕರ ಹತ್ಯೆ ಕುರಿತು ಕಣ್ಣೀರಿಟ್ಟು ನ್ಯಾಯಕ್ಕಾಗಿ ಮನವಿ ಮಾಡಿದರು. ರೇಣುಕಸ್ವಾಮಿ ಪತ್ನಿಗೆ ಉದ್ಯೋಗ ನೀಡುವಂತೆ, ಸೂಕ್ತ ತನಿಖೆ ಮಾಡಿಸುವಂತೆ ಒತ್ತಾಯಿಸಿದರು. ಗೃಹ ಸಚಿವ ಜಿ.ಪರಮೇಶ್ವರ್‌ಗೆ ಸಚಿವ ಡಿ.ಸುಧಾಕರ್, ಮಾಜಿ ಸಚಿವ ಹೆಚ್. ಆಂಜನೇಯ . ಶಾಸಕರಾದ ಕೆ.ಸಿ.ವೀರೇಂದ್ರಪಪ್ಪಿ. ಟಿ.ರಘುಮೂರ್ತಿಸೇರಿದಂತೆ ಸ್ಥಳೀಯ ಶಾಸಕರು ಸಾಥ್‌ ನೀಡಿದರು.

“ಕುಟುಂಬದವರಿಗೆ ಸಾಂತ್ವನ ಹೇಳಬೇಕು ಅಂತ ಬಂದಿದ್ದೇನೆ. ಇದು ಬಹಳ ನೋವು ಉಂಟು ಮಾಡಿದೆ. ಸರ್ಕಾರ ಯಾವುದೇ ಮುಲಾಜು ಇಲ್ಲದೇ ತನಿಖೆ ಮಾಡ್ತಿದೆ. ಈಗಾಗಲೇ ಸುಮಾರು 17 ಜನ ಆರೆಸ್ಟ್ ಆಗಿದ್ದಾರೆ. ರೇಣುಕಾ ಪತ್ನಿ ಗರ್ಭಿಣಿ ಆಗಿದ್ದಾರೆ. ಕುಟುಂಬಕ್ಕೆ ನ್ಯಾಯ ಒದಗಿಸಬೇಕು, ಉದ್ಯೋಗ ಕೊಡಿಸಬೇಕು ಎಂಬ ಬೇಡಿಕೆ ಇದೆ. ಸಿಎಂ ಜತೆ ಚರ್ಚೆ ಮಾಡ್ತೀನಿ ಅಂತ ಹೇಳಿದ್ದೇನೆ. ಯಾವುದೇ ರೀತಿ ತಪ್ಪು ಆಗದ ಹಾಗೆ ತನಿಖೆ ಮಾಡಿ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ. ಯಾರೂ ರಾಜಕೀಯ ಮಾಡಬಾರದು. ನಮ್ಮ ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೆ ಚೆನ್ನಾಗಿ ಕೆಲಸ ಮಾಡಿದ್ದಾರೆ” ಎಂದು ಪರಮೇಶ್ವರ ಈ ಸಂದರ್ಭದಲ್ಲಿ ನುಡಿದರು.
ವಿಜಯೇಂದ್ರ ರೇಣುಕಾ ಸ್ವಾಮಿ ಹತ್ಯೆ ಅಮಾನವೀಯ ಕೃತ್ಯ. ನಾಗರಿಕ ಸಮಾಜದ ಇದನ್ನು ಬೆಂಬಲಿಸಲು ಸಾಧ್ಯ ಇಲ್ಲ. ಪ್ರತಿಯೊಬ್ಬರೂ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸಬೇಕು. ಅವರ ಕುಟುಂಬ ನೋಡಿ ದುಃಖ ಆಗುತ್ತಿದೆ. ಆ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಆಗಬೇಕು. ರೇಣುಕಾ ಸ್ವಾಮಿ ಪತ್ನಿ 4 ತಿಂಗಳ ಗರ್ಭಿಣಿ. ಅವರಿಗೆ ಸರ್ಕಾರಿ ಉದ್ಯೋಗ ಜೊತೆಗೆ ಪರಿಹಾರ ಕೊಡಬೇಕು. ಯಾರೇ ಇದ್ದರೂ ತನಿಖೆ ಸರಿಯಾದ ರೀತಿಯಲ್ಲಿ ಆಗಬೇಕು. ಯಾವ ಒತ್ತಡಕ್ಕೂ ಮಣಿಯದೆ ತಪ್ಪಿತಸ್ತರಿಗೆ, ಕೊಲೆಗಡುಕರಿಗೆ ಶಿಕ್ಷೆ ಆಗಬೇಕು. ಪ್ರಕರಣದ ಬಗ್ಗೆ ಇಡೀ ದೇಶದಲ್ಲಿ ಚರ್ಚೆ ಆಗುತ್ತಿದ್ದು, ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದು ಮೃತನ ಮನೆಗೆ ಭೇಟಿ ನೀಡಿದ ಬಳಿಕ ಬಿ.ವೈ ವಿಜಯೇಂದ್ರ ನುಡಿದರು.

“ನಾನು ಇಲ್ಲಿ ರಾಜಕೀಯ ಬೆರೆಸಲು ಹೋಗುವುದಿಲ್ಲ. ಸಿಎಂ ಕೂಡಲೇ ಪರಿಹಾರ ಕೊಡುವ ನಿರ್ಧಾರ ಮಾಡಬೇಕು. ಪಕ್ಷದ ವತಿಯಿಂದ 2 ಲಕ್ಷ ರೂ. ಚೆಕ್ ಕೊಟ್ಟಿದ್ದೇವೆ. ಪರಿಹಾರ ಜೊತೆ ಜೊತೆಗೆ ಸರ್ಕಾರದ ಉದ್ಯೋಗವೂ ಬೇಕಿದೆ” ಎಂದು ಅವರು ನುಡಿದರು. ಅವರ ಜೊತೆಗೆ ಸಂಸದ ಗೋವಿಂದ ಕಾರಜೋಳ ಕೂಡ ಇದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page