ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರಬರಲಿದೆ:ಸಚಿವ ಡಿ ಸುಧಾಕರ್ ವಿಶ್ವಾಸ

by | 15/09/23 | ರಾಜಕೀಯ


ಚಳ್ಳಕೆರೆ:  ಮಧ್ಯ ಕರ್ನಾಟಕದ ಆರಾಧ್ಯ ದೈವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ನಮ್ಮ ಜಿಲ್ಲೆಯ ಆರಾಧ್ಯ ದೈವ ಎಲ್ಲ ವರ್ಗ ಧರ್ಮದ ಜನ ತಮ್ಮದೇ ದೇವರು ಎಂದು ಭಕ್ತಿಯಿಂದ ಪೂಜಿಸುವ ಪುಣ್ಯ ಸ್ಥಳ ನಾನು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಜ್ಯದಲ್ಲಿ ಮಂತ್ರಿಯಾಗುವ ಭಾಗ್ಯ ಭಗವಂತ ಕರುಣಿಸಿದ್ದಾನೆ ಇಡೀ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ ಸರ್ಕಾರ ಸಮರೋಪಾದಿಯಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿದೆ ರೈತರು ಯಾವುದೇ ರೀತಿ ಆತಂಕ ಪಡುವ ಪರಿಸ್ಥಿತಿ ಇಲ್ಲ ರೈತರ ಪರವಾಗಿ ನಮ್ಮ ಸರ್ಕಾರವಿದ್ದು ಬರದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲಿದೆ ಎಂದರು.


ಬೆಂಗಳೂರಿನ ಯಲಹಂಕ ಪ್ರಕರಣದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ನನ್ನ ರಾಜಕೀಯ ಏಳಿಗೆಯನ್ನು ಸಹಿಸದೆ ಕೆಲವರು ಸುಳ್ಳು ಕೇಸುಗಳನ್ನು ದಾಖಲಿಸಿದ್ದಾರೆ ಇಂತಹ ಬೆದರಿಕೆಗೆ ನಾನು ಎಂದಿಗೂ ಬಗ್ಗುವುದಿಲ್ಲ ಕಾನೂನಿನ ಪ್ರಕಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಸತ್ಯ ಸತ್ಯತೆ ರಾಜ್ಯದ ಜನತೆಗೆ ತಿಳಿಯಲಿದೆ.ನನ್ನ ವಿರುದ್ಧ ರಾಜಕೀಯ ಷಡ್ಯಂತರ ನಡೆಯುತ್ತಿದೆ ಪ್ರಕರಣ ಸಂಭವಿಸುವಾಗ ನಾನು ಬೆಂಗಳೂರಿನಲ್ಲಿ ಇರಲಿಲ್ಲ ರಾಜಕೀಯ ಜೀವನದಲ್ಲಿ ಇಂತಹ ಆರೋಪಗಳು ಸಹಜ ದೇವರು ಮತ್ತು ನ್ಯಾಯದಲ್ಲಿ ನಂಬಿಕೆ ಇಟ್ಟಿದ್ದೇನೆ ಭಗವಂತನ ಆಶೀರ್ವಾದದಿಂದ ನನ್ನ ರಾಜಕೀಯ ಜೀವನ ಉತ್ತಮವಾಗಲಿದೆ ಸಾರ್ವಜನಿಕ ಹಾಗೂ ರಾಜಕೀಯವಾಗಿ ನಾನು ಎಲ್ಲಾ ವರ್ಗದ ಜನರನ್ನು ಸಹೋದರ ಭಾವನೆಯಿಂದ ಕಂಡಿದ್ದೇನೆ ಈಗ ದಲಿತ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆ ಇದಕ್ಕೆ ಜಯ ಸಿಗುವುದಿಲ್ಲ ನಾನು ಯಾವುದೇ ತಪ್ಪು ಮಾಡದ ಕಾರಣ ರಾಜೀನಾಮೆ ನೀಡುವ ಪ್ರಶ್ನೆ ಸಂಭವಿಸುವುದಿಲ್ಲ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರು ಇದರ ಬಗ್ಗೆ ಮಾತನಾಡಿದ್ದಾರೆ ನನ್ನ ವ್ಯಕ್ತಿತ್ವ ಏನು ಎಂಬುದು ನನ್ನ ಕ್ಷೇತ್ರದ ಜನತೆಗೆ ಗೊತ್ತಿದೆ ಈ ಪ್ರಕರಣದ ಬಗ್ಗೆ ಹೆಚ್ಚು ಮಾತನಾಡದೆ ರಾಜ್ಯದ ಜನತೆಗೆ ಯಾವ ಕೆಲಸಗಳಾಗಬೇಕು ಎಂಬ ಆಲೋಚನೆಯೊಂದಿಗೆ ಸರ್ಕಾರದ ಪರವಾಗಿ ಕೆಲಸ ನಿರ್ವಹಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಂಕರ್ ಯಾದವ್, ಮಹಮ್ಮದ್ ಯುಸೆಫ್, ತಾರಕೇಶ್, p U ಸುನಿಲ್ ಕುಮಾರ್, ದಳವಾಯಿ ರುದ್ರಮನಿ, ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕಾರ್ಯನಿರ್ವಾಣಧಿಕಾರಿ  ಎಚ್ ಗಂಗಾಧರಪ್ಪ, ಸಿಬ್ಬಂದಿ ಎಸ್ ಸತೀಶ್, ಪಿಎಸ್ಐ ದೇವರಾಜ್, ಪೊಲೀಸ್ ಪೇದೆ ಅಣ್ಣಪ್ಪ, ಸೇರಿದಂತೆ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *