ಹಿರಿಯೂರು :
ಇಂದಿನ ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕಾದ ಅನಿವಾರ್ಯತೆ ಇದ್ದು, ಈ ನಿಟ್ಟಿನಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿನಿ ದುವಾಕರಾಟೆಯಲ್ಲಿ ಇಂಟರ್ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮೊದಲ ಬಹುಮಾನ ಪಡೆದಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಆವರಣದಲ್ಲಿ ಇಂಟರ್ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ 2024 ರಲ್ಲಿ 12 ವರ್ಷದ ಬಾಲಕಿಯರ ಕರಾಟೆ ವಿಭಾಗದಲ್ಲಿ ಮೊದಲ ಸ್ಥಾನಪಡೆದ ದುವಾದಸ್ತಗೀರ್ ಇವರಿಗೆ ವಿದ್ಯಾಸಂಸ್ಥೆಯ ವತಿಯಿಂದ ನೆನಪಿನ ಕಾಣಿಕೆ ನೀಡಿ, ನಂತರ ಅವರು ಮಾತನಾಡಿದರು.
ಇದೇ ತಿಂಗಳ ಆಗಸ್ಟ್ 4 ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಇಂಟರ್ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ 2024 ರಲ್ಲಿ ಭಾಗವಹಿಸಿ, ಬಹುಮಾನ ಪಡೆದಿರುವ ನಮ್ಮ ಶಾಲೆಯವಿದ್ಯಾರ್ಥಿನಿ ದುವಾದಸ್ತಗೀರ್ ಇವಳ ಸಾಧನೆ ಉಳಿದ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದ್ದು, ದುವಾ ಕರಾಟೆ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂಬುದಾಗಿ ಅವರು ಶುಭಹಾರೈಸಿದರು.
ಈ ಸಂದರ್ಭದಲ್ಲಿ ವಾಣಿವಿಲಾಸ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಶಿಕ್ಷಕಿಯರುಗಳಾದ ಶ್ರೀಮತಿ ನಂದಿನಿ, ಶ್ರೀಮತಿ ರಚನಾ, ಶ್ರೀಮತಿ ಹೇಮಲತಾ, ಶಿವರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments