ನಮ್ಮ ತಾಲ್ಲೂಕಿಗೆ ತಮಿಳುಜನಾಂಗದವರ ಕೊಡುಗೆ ಅಪಾರವಾಗಿದೆ : ಮಾಜಿ ಸಚಿವರಾದ ಡಿ.ಸುಧಾಕರ್

by | 11/03/23 | ರಾಜಕೀಯ


ಹಿರಿಯೂರು :
ನಮ್ಮ ತಾಲ್ಲೂಕಿಗೆ ತಮಿಳು ಜನಾಂಗದವರ ಕೊಡುಗೆ ಅಪಾರವಾಗಿದ್ದು, ನಮ್ಮ ವಾಣಿವಿಲಾಸ ಸಾಗರ ಜಲಾಶಯವನ್ನು ನಿರ್ಮಿಸಲು ಶ್ರಮಿಸಿರುವ ಕೀರ್ತಿ ಕೂಡ ಅವರಿಗೆ ಸಲ್ಲುತ್ತದೆ ಎಂದರಲ್ಲದೆ, ಈ ನಮ್ಮ ನಾಡಿನಲ್ಲಿ ಕನ್ನಡಿಗರು ಹಾಗೂ ತಮಿಳು ಜನಾಂಗದವರು ಅಣ್ಣ, ತಮ್ಮಂದಿರಂತೆ ಬಾಳುತ್ತಿದ್ದಾರೆ ಎಂಬುದಾಗಿ ಮಾಜಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಮಿಳು ಸಮಾಜದ ಮುಖಂಡರ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಳೆದ 2008 ರಲ್ಲಿ ಹಾಗೂ 2013ರ ಚುನಾವಣೆಯಲ್ಲಿ ನನ್ನ ಬಗ್ಗೆ ವಿರೋಧ ಪಕ್ಷದವರು ಅಪಪ್ರಚಾರ ಮಾಡಿ, ಸೋಲಿಸಿದರು ಕೂಡ ನಾನು ಈ ಕ್ಷೇತ್ರದಿಂದ ದೂರವಾಗದೇ ಇಲ್ಲಿಯ ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದೇನೆ, ಕಳೆದ ಈ 5 ವರ್ಷಗಳಲ್ಲಿ ಕ್ಷೇತ್ರದ ಜನರು ಬಿಜೆಪಿ ಸರ್ಕಾರದಿಂದ ಬೇಸತ್ತು ಹೋಗಿದ್ದಾರೆ, ಆದ್ದರಿಂದ ತಾಲ್ಲೂಕಿನ ಜನರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜೊತೆಯಲ್ಲಿ ಕೈಜೋಡಿಸಿ ಎಂಬುದಾಗಿ ಅವರು ಮನವಿ ಮಾಡಿದರು.
ಮಾಜಿ ನಗರಸಭಾ ಅಧ್ಯಕ್ಷರಾದ ಎ.ಮಂಜುನಾಥ್ ಮಾತನಾಡಿ, ಡಿ.ಸುಧಾಕರ್ ರವರು ತಾಲ್ಲೂಕಿನ ಬರಗಾಲದ ಪರಿಸ್ಥಿತಿಯಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಜಾನುವಾರುಗಳಿಗೆ ಮೇವು ಬೆಳೆದು ಕೊಟ್ಟ ಧೀಮಂತ ನಾಯಕರಾಗಿದ್ದು, ಕಳೆದ 10 ವರ್ಷಗಳ ಅವಧಿಯಲ್ಲಿ ತಾಲ್ಲೂಕಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದಾರೆ, ಈ ಬಾರಿ ಚುನಾವಣೆಯಲ್ಲಿ ನಮ್ಮ ಸಮುದಾಯದವರು ಸುಧಾಕರ್ ರವರನ್ನು ಬೆಂಬಲಿಸಿ, ಅವರ ಗೆಲುವಿಗೆ ಶ್ರಮಿಸಬೇಕೆಂದು ಅವರು ಮನವಿ ಮಾಡಿದರು.
ತಮಿಳು ಸಮಾಜದ ಮುಖಂಡ ಸಿ.ಎನ್.ಸುಂದರ್ ಮಾತನಾಡಿ, ಸುಮಾರು 2008 ರಿಂದ ಡಿ.ಸುಧಾಕರ್ ರವರ ಸತತ ಪ್ರಯತ್ನದ ಫಲವಾಗಿ ಭದ್ರಾ ಕಾಮಗಾರಿ ಕಾರ್ಯರೂಪಕ್ಕೆ ಬಂದಿದ್ದು, ಕೊನೆಯ ಗಳಿಗೆಯಲ್ಲಿ ಬಂದ ಈಗಿನ ಶಾಸಕರು ವಾಣಿವಿಲಾಸ ಜಲಾಶಯ ಕೋಡಿ ಬೀಳಲು ನಾವೇ ಕಾರಣವೆಂದು ಪ್ರಚಾರ ಮಾಡುತ್ತಿದ್ದಾರೆ, ಆದರೆ ಇವರ ಸುಳ್ಳು ಪ್ರಚಾರ ಜನರಿಗೆ ಅರ್ಥವಾಗಿದ್ದು, ನಮ್ಮ ಸಮುದಾಯ ಡಿ.ಸುಧಾಕರ್ ರವರನ್ನೇ ಬೆಂಬಲಿಸುತ್ತದೆ ಎಂಬುದಾಗಿ ಹೇಳಿದರು.
ಮುಖಂಡ ತಮಿಳು ಸೆಲ್ವಂ ರವರು ಮಾತನಾಡಿ, ಸುಧಾಕರ್ ರವರು ಕಳೆದ 15 ವರ್ಷಗಳಿಂದ ಯಾರಿಗೂ ಮೋಸ ಮಾಡಿದ ವ್ಯಕ್ತಿಯಲ್ಲ, ದಾನ, ಧರ್ಮ, ಸಹಾಯ ಮಾಡಿಕೊಂಡು ಬಂದಿದ್ದಾರೆ, ನಮ್ಮ ಸಮಾಜದ ಎಲ್ಲರೂ ಅವರಿಗೆ ಗೆಲುವಿಗೆ ಉಡುಗೊರೆ ಕೊಡಬೇಕು ಎಂಬುದಾಗಿ ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಾಮಣಿ, ನಗರಸಭಾ ಸದಸ್ಯರಾದ ಮಮತ, ಸುಂದರ್, ಜ್ಯೋತಿಲಕ್ಷ್ಮೀ, ಎ.ಮಂಜುನಾಥ್, ಸಿ.ಎನ್.ಸುಂದರ್, ಲಕ್ಕವ್ವನಹಳ್ಳಿ ಸುಂದರ್, ಲಕ್ಕವ್ವನಹಳ್ಳಿ ರಾಜಣ್ಣ, ಪಟ್ರೇಹಳ್ಳಿ ಓಂ ಶಕ್ತಿ ದೇವಸ್ಥಾನ ಪೂಜಾರರಾದ ತಮಿಳ್ ಸೆಲ್ವಂ, ಮಸ್ಕಲ್ ಮಟ್ಟಿ ಟೈಲರ್ ರಾಜು, ಮಸ್ಕಲ್ ಮಟ್ಟಿ ಸುಬ್ರಮಣಿಯಪ್ಪ, ಪಟ್ರೇಹಳ್ಳಿ ವಾಸುದೇವ್, ಆದಿವಾಲ ಟಿ.ಜಿ.ಕಾಲೋನಿ ಸುಂದರ್ ಮೂರ್ತಿ, ಮಾಜಿ ನಗರಸಭಾ ಸದಸ್ಯರಾದ ಪನ್ನೀರ್ ಸೆಲ್ವಂ, ಟೈಲರ್ ಮಂಜುನಾಥ್, ಎಳನೀರು ಸರವಣ, ಆರನಕಟ್ಟೆ ಪ್ರದೀಪ್, ಯುವಕಾಂಗ್ರೆಸ್ ದರ್ಶನ್, ನಾಗರಾಜ್, ಮಟನ್ ಮುರುಗೇಶ್, ಆರನಕಟ್ಟೆ ಮಾಜಿ ಗ್ರಾ.ಪಂ.ಸದಸ್ಯರಾದ ಸುಬ್ರಮಣಿ, ಗೋವಿಂದರಾಜು, ಸುಂದರಮೂರ್ತಿ, ರಾಮಸ್ವಾಮಿ, ಮಸ್ಕಲ್ ಮಟ್ಟಿ ಸರವಣನ್, ಡಿಶ್ ಮಣಿ, ಆರನಕಟ್ಟೆ ನಂದಕುಮಾರ್, ಬಾಲಶಂಕರ್, ರಂಗಸ್ವಾಮಿ, ಶಿವಕುಮಾರ್, ರವೀಂದ್ರನ್, ಶಕ್ತಿವೇಲು, ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page